ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ರಾಂಪುರ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘಕ್ಕೆ ನವೆಂಬರ್ 22ರಂದು ನಾಮ ನಿರ್ದೇಶನ ಮಾಡಲಾಗಿದ್ದು, ರಾಂಪುರ ಗ್ರಾಮದ ಜಯಮ್ಮ ನೀಲಕಂಠೇಗೌಡರನ್ನು ಸರ್ಕಾರದ ನಾಮ ನಿರ್ದೇಶಕರಾಗಿ ನೇಮಿಸಲಾಗಿದೆ.
ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959ರ ಪ್ರಕರಣ 20ಎ ಉಪ ಪ್ರಕರಣ(ಬಿ)(1)ರ ಮೇರೆಗೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಮಂಡ್ಯ ಜಿಲ್ಲೆ, ಶ್ರೀರಂಗಪಟ್ಟಣ ತಾಲೂಕಿನ ಕೆ ಶೆಟ್ಟಿಹಳ್ಳಿ ಹೋಬಳಿಯ ವ್ಯಾಪ್ತಿಯಲ್ಲಿ ಬರುವ ರಾಂಪುರ ಸಹಕಾರ ಸಂಘಕ್ಕೆ ಅಧಿಕಾರೇತರ ಸದಸ್ಯರನ್ನಾಗಿ ಜಯಮ್ಮ ಅವರನ್ನು ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಸರ್ಕಾರದ ಮುಂದಿನ ಆದೇಶದವರೆಗೆ ನಾಮನಿರ್ದೇಶನ ಮಾಡಿ ಸರ್ಕಾರ ಆದೇಶಿಸಿದೆ.

ಈ ಹಿನ್ನೆಲೆಯಲ್ಲಿ ರಾಂಪುರ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ನಿಯಮಿತ ಕಾರ್ಯಕಾರಿ ಮಂಡಲಿ ಸಭೆಯನ್ನು ನವೆಂಬರ್ 22 ರಂದು ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಸಂಘದ ಕಚೇರಿಯಲ್ಲಿ ಸಂಘದ ಅಧ್ಯಕ್ಷೆ ಪವಿತ್ರ ನೇತೃತ್ವದಲ್ಲಿ ಸಭೆ ಕರೆಯಲಾಗಿತ್ತು.
ಇದನ್ನು ಓದಿದ್ದೀರಾ? ಮಂಡ್ಯ | 65 ಮಂದಿ ಶ್ರಮಿಕ ನಿವಾಸಿಗಳಿಗೆ ಮನೆ ಹಕ್ಕುಪತ್ರ ವಿತರಿಸಲು ಕ್ರಮ
ಅಧ್ಯಕ್ಷೆ ಪವಿತ್ರ, ಕಾರ್ಯದರ್ಶಿ ಭಾರತಿ, ಉಪಾಧ್ಯಕ್ಷೆ ಮೀನಾಕ್ಷಿ, ಸದಸ್ಯೆಯರಾದ ಶ್ವೇತಾ, ದಿವ್ಯ, ಸರಸ್ವತಿ, ಗೌರಮ್ಮ, ವಸಂತ, ವರಲಕ್ಷ್ಮಿ, ಮಾದೇವಮ್ಮ ಎಲ್ಲರೂ ಸೇರಿ ನೂತನ ಸರ್ಕಾರದ ನಿರ್ದೇಶಕರಿಗೆ ಅಭಿನಂದಿಸಿದರು.