ಶ್ರೀರಂಗಪಟ್ಟಣ | ಈ ಬಾರಿಯ ದಸರಾ ಉತ್ಸವ ಹೆಚ್ಚು ಆಕರ್ಷಕವಾಗಿರಲಿ: ಸಚಿವ ಚಲುವರಾಯಸ್ವಾಮಿ

Date:

Advertisements

ಮಂಡ್ಯ ಜಿಲ್ಲಾಡಳಿತದ ವತಿಯಿಂದ ಈ ಬಾರಿ ಸೆಪ್ಟೆಂಬರ್ 25 ರಿಂದ 28 ರವರಗೆ 4 ದಿನಗಳ ಕಾಲ ಶ್ರೀರಂಗಪಟ್ಟಣ ದಸರಾ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮಗಳು ವಿಭಿನ್ನವಾಗಿ ಜನರನ್ನು ಆಕರ್ಷಿಸುವ ರೀತಿ ಇರಲಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ಶ್ರೀರಂಗಪಟ್ಟಣ ದಸರಾ ಕಾರ್ಯಕ್ರಮದ ಮೆರವಣಿಗೆಗೆ ಸೆ.25 ರಂದು ಮಧ್ಯಾಹ್ನ 3 ಗಂಟೆಗೆ ಚಾಲನೆ ನೀಡಲಾಗುವುದು. ಕಾರ್ಯಕ್ರಮಗಳು ಶ್ರೀ ರಂಗನಾಥ ದೇವಸ್ಥಾನದ ಮುಂಭಾಗದ ಆವರಣದಲ್ಲಿ ವಿಜೃಂಭಣೆಯಿಂದ ನಡೆಯಲಿದೆ. ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಿ ಶ್ರೀರಂಗಪಟ್ಟಣ ದಸರಾ ಮೆರವಣಿಗೆ ಹಾಗೂ ವೇದಿಕೆ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಲಾಗುವುದು. ಕಾರ್ಯಕ್ರಮಗಳಲ್ಲಿ ನಮ್ಮ ಇತಿಹಾಸ ಹಾಗೂ ಸಂಸ್ಕೃತಿಗಳ ಹಿನ್ನಲೆ ಹೊಂದಿರಲಿ. ಮಹಿಳೆಯರು, ಮಕ್ಕಳು, ಯುವಕರು, ವೃದ್ಧರು ಸೇರಿದಂತೆ ವಿವಿಧ ವಯೋಮಿತಿಗಳ ಜನರು ಭಾಗವಹಿಸುವ ರೀತಿ ಕಾರ್ಯಕ್ರಮಗಳನ್ನು ಅಧಿಕಾರಿಗಳು ವೈವಿದ್ಯಮಯವಾಗಿ ರೂಪಿಸಿ ದಸರಾ ಕಾರ್ಯಕ್ರಮಗಳನ್ನು ಯಾವುದೇ ಲೋಪವಿಲ್ಲದಂತೆ ಅಚ್ಚುಕಟ್ಟಾಗಿ ಸಂಘಟಿಸಬೇಕು” ಎಂದು ಅಧಿಕಾರಿಗಳಿಗೆ ತಿಳಿಸಿದರು.

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಬಂಡಿಸಿದ್ದೇಗೌಡ ಮಾತನಾಡಿ, “ಹಾಲು ಕರೆಯುವ ಸ್ಪರ್ಧೆಯ ಜೊತೆಗೆ ಈ ಬಾರಿ ರಾಸುಗಳ ಪ್ರದರ್ಶನ ಏರ್ಪಡಿಸಿ ಬಹುಮಾನ ವಿತರಣೆ ಮಾಡಬೇಕು. ಮೆರವಣಿಗೆಗೆ ಚಾಲನೆ ನೀಡುವ ಕಿರಂಗೂರು ಬನ್ನಿಮಂಟಪದಲ್ಲಿ ಸ್ವಚ್ಛತಾ ಕಾರ್ಯಕ್ರಮಗಳನ್ನು ಕೈಗೊಂಡು ಸಿದ್ಧತೆಗಳನ್ನು ಪ್ರಾರಂಭಿಸಿ. ಯೋಗ ದಸರಾದಲ್ಲಿ ಯೋಗ ಪ್ರದರ್ಶನದೊಂದಿಗೆ ಯೋಗ ಸ್ಪರ್ಧೆಗಳನ್ನು ಸಹ ಆಯೋಜಿಸಿ. ಶಿಕ್ಷಣ ಇಲಾಖೆ ಅವರು ಯೋಗ ಸ್ಪರ್ಧೆಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸುವಂತೆ ಶಾಲಾ ಕಾಲೇಜುಗಳಿಗೆ ಮಾಹಿತಿ ನೀಡಿ” ಎಂದರು.

ಇದನ್ನೂ ಓದಿ: ಮಂಡ್ಯ | ಶಿಕಾರಿಪುರ ಅಲೆಮಾರಿ ಹಕ್ಕಿಪಿಕ್ಕಿ ಸಮುದಾಯ ಜನರ ಬದುಕು ಅತಂತ್ರ

ಜಿಲ್ಲಾಧಿಕಾರಿ ಡಾ. ಕುಮಾರ ಮಾತನಾಡಿ, “ಶ್ರೀರಂಗಪಟ್ಟಣ ದಸರಾ ಕಾರ್ಯಕ್ರಮಗಳ ಆಯೋಜನೆಗಾಗಿ ಸ್ವಾಗತ, ಕ್ರೀಡಾ, ವೇದಿಕೆ, ಮೆರವಣಿಗೆ, ಆರೋಗ್ಯ, ನಗರ ಅಲಂಕಾರ, ಹಣಕಾಸು, ಸ್ವಚ್ಛತೆ, ಆಹಾರ, ಆಹಾರ ಮೇಳ, ವಸ್ತು ಪ್ರಸರ್ಶನ, ಸಾಂಸ್ಕೃತಿಕ ಕಾರ್ಯಕ್ರನ ಸೇರಿದಂತೆ ವಿವಿಧ ಉಪಸಮಿತಿಗಳನ್ನು ರಚಿಸಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ವಸ್ತು ಪ್ರದರ್ಶನ ಸಮಿತಿಯಿಂದ ಅನಾವರಣ ಗೊಳಿಸಲಾಗುವ ಮಳಿಗೆಗಳಲ್ಲಿ ಅರ್ಧದಷ್ಟು ಮಳಿಗೆಗಳನ್ನು ಆಹಾರ ಮೇಳಕ್ಕೆ ನೀಡಲಾಗುವುದು. ಇಲ್ಲಿ ವಿವಿಧ ಜಿಲ್ಲೆಯಲ್ಲಿ ಹೆಸರುವಾಸಿಯಾಗಿರುವ ಆಹಾರ ಪದಾರ್ಥಗಳನ್ನು ಮಾರಾಟ ಮಾಡಲು ವ್ಯವಸ್ಥೆ ಮಾಡಲಾಗುವುದು” ಎಂದು ಮಾಹಿತಿ ನೀಡಿದರು‌.

ಸಭೆಯಲ್ಲಿ ಮಂಡ್ಯ ನಗರಸಭೆ ಅಧ್ಯಕ್ಷ ಎಂ.ವಿ ಪ್ರಕಾಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಂದಿನಿ ಕೆ.ಆರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಪಾಂಡವಪುರ ಉಪವಿಭಾಗಾಧಿಕಾರಿ ಶ್ರೀನಿವಾಸ್ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X