ಉಡುಪಿ | ಸಾರ್ವಜನಿಕ ಶಿಕ್ಷಣ ಉಳಿವಿಗಾಗಿ ಎಸ್‌ಎಫ್‌ಐ ಶೈಕ್ಷಣಿಕ ಜಾಥಾ

Date:

ಭಾರತ ವಿದ್ಯಾರ್ಥಿ ಫೆಡರೇಶನ್(ಎಸ್‌ಎಫ್‌ಐ) ವತಿಯಿಂದ ಸಾರ್ವಜನಿಕ ಶಿಕ್ಷಣ ಉಳಿವಿಗಾಗಿ ಹಾಗೂ ಹಾಸ್ಟೆಲ್ ಬಲವರ್ಧನೆಗಾಗಿ ಹಮ್ಮಿಕೊಳ್ಳಲಾದ ರಾಜ್ಯಮಟ್ಟದ ಶೈಕ್ಷಣಿಕ ಜಾಥ ಉಡುಪಿ ಜಿಲ್ಲೆಗೆ ಆಗಮಿಸಿದ್ದು, ಉಡುಪಿ ಬೋರ್ಡ್ ಹೈಸ್ಕೂಲ್ ವಠಾರದಲ್ಲಿ ಜಾಥವನ್ನು ಸ್ವಾಗತಿಸಲಾಯಿತು.

- Advertisement -

ಬಳಿಕ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಹಿರಿಯ ಚಿಂತಕ ಪ್ರೊ.ಫಣಿರಾಜ್, ಸಾರ್ವಜನಿಕ ಶಿಕ್ಷಣ ಎಂಬುದು ಸ್ವಾತಂತ್ರ ಭಾರತದ ಮುಖ್ಯ ಆಶಯವಾಗಿತ್ತು. ದೇಶದ ಪ್ರಗತಿ, ಆಧುನಿಕರಣ ಹಾಗೂ ಜಾತಿ ವ್ಯವಸ್ಥೆ, ಅಂತಸ್ತಿನ ಅಸಮಾನತೆಯನ್ನು ನಿರ್ಮೂಲನೆ ಮಾಡಲು ಸಾರ್ವಜನಿಕ ಶಿಕ್ಷಣದ ಅಗತ್ಯವನ್ನು ಕಂಡುಕೊಳ್ಳಲಾಗಿತ್ತು. ಅದಕ್ಕೆ ಸಾಮಾಜಿಕ ಕ್ರಾಂತಿ ಅಗತ್ಯ ಇತ್ತು. ಈ ದೇಶದ ಶೇ.90ರಷ್ಟು ಜನ ವರ್ಗಕ್ಕೆ ಆಧುನಿಕ ಶಿಕ್ಷಣ, ಉದ್ಯೋಗ ಹಾಗೂ ಉನ್ನತ ಸ್ಥಾನ ನೀಡುವುದು ಸಾವ್ರರ್ತಿಕ ಶಿಕ್ಷಣದ ಉದ್ದೇಶವಾಗಿತ್ತು. ಆದರೆ ಇಂದು ಬಡ ಹಾಗೂ ಕೆಳಜಾತಿ ಮಕ್ಕಳು ಶಿಕ್ಷಣ ಪಡೆಯಬಾರದೆಂಬ ಉದ್ದೇಶದಿಂದ ಸಾರ್ವತ್ರಿಕ ಶಿಕ್ಷಣವನ್ನು ವಿರೋಧಿಸುವ ವರು ಹುನ್ನಾರ ಮಾಡುತ್ತಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕೇಂದ್ರ ಸರಕಾರ ಬಜೆಟ್‌ನಲ್ಲಿ ಖರ್ಚು ಮಾಡುವ ಪ್ರತಿ 100ರೂ.ನಲ್ಲಿ ಒಂದು ರೂ.ಗಿಂತ ಕಡಿಮೆ ಹಾಗೂ ರಾಜ್ಯ ಸರಕಾರವು ಪ್ರತಿ 100ರೂ.ನಲ್ಲಿ 2ರೂ. ಮಾತ್ರ ಖರ್ಚು ಮಾಡುತ್ತಿದೆ. ಇದರಿಂದ ಸಾವ್ರರ್ತಿಕ ಶಿಕ್ಷಣ ಪೂರೈಸಲು ಸಾಧ್ಯವಾಗುತ್ತಿಲ್ಲ. ಇಂದು ಸರಕಾರಿ ಶಾಲೆಗಳು ಮುಚ್ಚಲು ಸರಕಾರ ಶಿಕ್ಷಣದ ಬಗ್ಗೆ ತೋರುತ್ತಿರುವ ಅಸಡ್ಡೆಯೇ ಕಾರಣ ಎಂದು ಅವರು ಆರೋಪಿಸಿದರು.

ರಾಜ್ಯ ಸರಕಾರ ಬಜೆಟ್‌ನಲ್ಲಿ ಖರ್ಚು ಮಾಡುವ ಪ್ರತಿ 100ರೂನಲ್ಲಿ 5ರೂ. ಶಿಕ್ಷಣಕ್ಕೆ ನೀಡಿದರೆ ಎಲ್ಲ ಸರಕಾರಿ ಶಾಲೆಗಳನ್ನು ಸಕಲ ಸೌಲಭ್ಯಗಳಿಂದ ಅಭಿವೃದ್ಧಿ ಪಡಿಸಬಹುದು. ಆಗ ಶ್ರೀಮಂತರು ಕೂಡ ತಮ್ಮ ಮಕ್ಕಳನ್ನು ಸರಕಾರಿ ಶಾಲೆಗೆ ಕಳುಹಿಸುತ್ತಾರೆ. ಇದರಿಂದ ಬಡವರು ಶ್ರೀಮಂತರು, ಮೇಲ್ಜಾತಿ ಹಾಗೂ ಕೆಳಜಾತಿಯವರು ಒಟ್ಟಾಗಿ ಶಿಕ್ಷಣ ಕಲಿಯಲು ಸಾಧ್ಯ ವಾಗುತ್ತದೆ. ಈ ಮೂಲಕ ಜಾತಿ ವ್ಯವಸ್ಥೆ, ಅಂತಸ್ತಿನ ಅಸಮಾನತೆಯನ್ನು ಮುರಿಯಬಹುದು. ಸಾರ್ವತ್ರಿಕ ಶಿಕ್ಷಣ ಸಮಾಜವನ್ನು ಕಾಂತ್ರಿಕಾರಿಯಾಗಿ ಬದಲಾಯಿಸುವ ಅಸ್ತ್ರವಾಗಿದೆ ಎಂದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ರಾಜ್ಯ ಸಂಘಟನಾ ಸಂಚಾಲಕ ಸುಂದರ್ ಮಾಸ್ಟರ್ ಮಾತನಾಡಿ, ಬದುಕಲು ಪ್ರತಿಯೊಬ್ಬರಿಗೂ ಶಿಕ್ಷಣ ಅತೀ ಅಗತ್ಯ. ಶಿಕ್ಷಣ ವ್ಯವಸ್ಥೆ ಸರಿಯಾಗಿದ್ದರೆ ಮಾತ್ರ ನಮ್ಮ ಮುಂದಿನ ಜನಾಂಗ ಪ್ರಗತಿಯ ಹಾದಿಯಲ್ಲಿ ಸಾಗುತ್ತದೆ. ಇಂದು ಸಾವಿರಾರು ಸರಕಾರಿ ಶಾಲೆಗಳಲ್ಲಿ ಶೂನ್ಯ ದಾಖಲೀಕರಣ ಆಗುತ್ತಿದೆ. ಇದಕ್ಕೆ ಕಾರಣ ಮತ್ತು ಯಾವ ಲಾಭಿ ನಡೆಯುತ್ತಿದೆ ಎಂಬುದರ ಬಗ್ಗೆ ಪರಿಶೀಲನೆ ಮಾಡಬೇಕಾಗಿದೆ ಎಂದು ತಿಳಿಸಿದರು.

ಜಾಥ ತಂಡದಲ್ಲಿ ಭಾರತ ವಿದ್ಯಾರ್ಥಿ ಫೆಡರೇಶನ್ ರಾಜ್ಯಾಧ್ಯಕ್ಷ ಶಿವಪ್ಪ, ರಾಜ್ಯ ಕಾರ್ಯದರ್ಶಿ ವಿಜಯ, ರಾಜ್ಯ ಸಮಿತಿ ಸದಸ್ಯರಾದ ಅರ್ಪಿತ, ಮಣಿಭಾರತಿ, ವನಿತ್ ಹಾಜರಿದ್ದರು. ಸಭೆಯಲ್ಲಿ ಎಸ್‌ಎಫ್‌ಐನ ಉಡುಪಿ ತಾಲೂಕು ಕಾರ್ಯದರ್ಶಿ ಕಾರ್ತಿಕ್, ಡಿವೈಎಫ್‌ಐ ಮಾಜಿ ಮುಖಂಡ ಸುರೇಶ್ ಕಲ್ಲಾಗಾರ್, ಕಾರ್ಮಿಕ ಮುಖಂಡರಾದ ಉಮೇಶ್ ಕುಂದರ್, ಶಶಿಧರ್ ಗೊಲ್ಲ, ನಳಿನಿ ಎಸ್., ರಂಗನಾಥ, ಕೃಷ್ಣ ಜನವಾದಿ ಮಹಿಳಾ ಸಂಘದ ಉಡುಪಿ ಜಿಲ್ಲಾಧ್ಯಕ್ಷೆ ಸರೋಜ ಎಸ್. ಉಪಸ್ಥಿತರಿದ್ದರು. ಎಸ್‌ಎಫ್‌ಐ ಉಡುಪಿ ಜಿಲ್ಲಾ ಮಾಜಿ ಕಾರ್ಯದರ್ಶಿ ಕವಿರಾಜ್ ಎಸ್.ಕಾಂಚನ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ ದರು. ಎಸ್‌ಎಫ್‌ಐ ರಾಜ್ಯ ಸಮಿತಿ ಸದಸ್ಯೆ ಕೃತಿಕಾ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...