ಯಾದಗಿರಿ ಜಿಲ್ಲಾದ್ಯಂತ 62 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ; ನಿಷೇಧಾಜ್ಞೆ ಜಾರಿ

Date:

Advertisements

2025ರ ಮಾರ್ಚ್ ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯುತ್ತಿದ್ದು, ಈ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಯಾದಗಿರಿ ಜಿಲ್ಲಾಧಿಕಾರಿ ಸುಶೀಲಾ ಬಿ ಅವರು ಆದೇಶ ಹೊರಡಿಸಿದ್ದಾರೆ.

“ಬಿಎನ್‌ಎಸ್‌ಎಸ್‌ 2023ರ ಕಲಂ 163ರನ್ವಯ ಅಧಿಕಾರವನ್ನು ಚಲಾಯಿಸಿ 2025ರ ಮಾರ್ಚ್ 21, 24, 26, 29 ಹಾಗೂ ಏಪ್ರಿಲ್ 2 ಮತ್ತು 4ರ ಬೆಳಿಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿವೆ” ಎಂದು ಜಿಲ್ಲಾಧಿಕಾರಿ ತಿಳಿಸಿದರು.

“ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ 22 ಪರೀಕ್ಷಾ ಕೇಂದ್ರಗಳು, ಶಹಾಪುರ ಮತ್ತು ವಡಗೇರಾ ತಾಲೂಕಿನ 21 ಪರೀಕ್ಷಾ ಕೇಂದ್ರಗಳು ಮತ್ತು ಸುರಪುರ ತಾಲೂಕಿನ 19 ಪರೀಕ್ಷಾ ಕೇಂದ್ರಗಳ ಸೇರಿದಂತೆ ಒಟ್ಟು ಜಿಲ್ಲೆಯಲ್ಲಿ 62 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಈ ಪರೀಕ್ಷೆಯು ಸುಸೂತ್ರವಾಗಿ ನಡೆಸುವ ಹಿತದೃಷ್ಟಿಯಿಂದ, ಪರೀಕ್ಷಾ ದಿನಗಳಂದು ಬೆಳಿಗ್ಗೆ 8.30ರಿಂದ ಮಧ್ಯಾಹ್ನ 3ರವರೆಗೆ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲೂ ಇರುವ ಬೆರಳಚ್ಚು ಕೇಂದ್ರ, ಜೆ಼ರಾಕ್ಸ್ ಮಳಿಗೆ ಹಾಗೂ ಪುಸ್ತಕದ ಮಳಿಗೆಗಳನ್ನು ಮುಚ್ಚಬೇಕು” ಎಂದು ಆದೇಶ ಹೊರಡಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಅಂಬೇಡ್ಕರ್ ಭಾವಚಿತ್ರ ಅಳವಡಿಕೆ; ಕುರುಬ ಸಮುದಾಯಕ್ಕೆ ಬಹಿಷ್ಕಾರ

“ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್‌ಟಿಡಿ ಬೂತ್‌, ಮೊಬೈಲ್, ಬ್ಲೂಟೂತ್ ಡಿವೈಸ್, ಡಿಜಿಟಲ್ ವಾಚ್, ಪೇಜರ್, ವೈರ್‌ಲೆಸ್, ಜ಼ೆರಾಕ್ಸ್, ಟೈಪಿಂಗ್ ಪುಸ್ತಕ ಮಳಿಗೆಗಳು ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ನಿಗದಿಪಡಿಸಿದ ಅಧಿಕಾರಿಗಳನ್ನು, ಶಿಕ್ಷಕರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೇ ಪರೀಕ್ಷಾ ಕೇಂದ್ರಗಳಿಗೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ. 200 ಮೀಟರ್ ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಸ್ತ್ರಾಗಳನ್ನು ಹಿಡಿದು ತಿರುಗಾಡುವದನ್ನು ನಿಷೇಧಿಸಿದೆ, ಮದುವೆ, ಶವಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಈ ಆದೇಶ ಅನ್ವಯವಾಗುವುದಿಲ್ಲ. ಲಿಂಗೇರಿ ಕೋನಪ್ಪ ಆರ್ ನಾಡಗೌಡ ಸ್ಮಾರಕ ಪ್ರೌಢಶಾಲೆ, ಯಾದಗಿರಿ ಪರೀಕ್ಷಾ ಕೇಂದ್ರ ಭಾಗ್ಯಲಕ್ಷ್ಮೀ ಚಿತ್ರಮಂದಿರಕ್ಕೆ ಹೊಂದಿ 2025ರ ಮಾರ್ಚ್ 21, 24, 26, 29 ಹಾಗೂ ಏಪ್ರಿಲ್ 2, 4ರ ಬೆಳಿಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ ಚಲನ ಚಿತ್ರಗಳ ಪ್ರದರ್ಶನಗಳನ್ನು ನಿಷೇಧಿಸಲಾಗಿದೆ” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X