ಮಾರ್ಚ್‌ 31ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

Date:

  • ಪರೀಕ್ಷೆಗೆ ಒಟ್ಟು 8,42,811 ವಿದ್ಯಾರ್ಥಿಗಳು ನೋಂದಾಯಿತರಾಗಿದ್ದಾರೆ
  • ಒಟ್ಟು 3,305 ಕೇಂದ್ರಗಳಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯೂ ಮಾರ್ಚ್‌ 31ರಿಂದ ಆರಂಭವಾಗಲಿದ್ದು, ಈ ಬಾರಿ ಸುಮಾರು 8,42,811 ವಿದ್ಯಾರ್ಥಿಗಳು ಪರೀಕ್ಷೆಯನ್ನು ಎದುರಿಸಲಿದ್ದಾರೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಾಹಿತಿ ನೀಡಿದೆ. 

ಈ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಏಪ್ರಿಲ್ 15ರವರೆಗೆ ನಡೆಯಲಿವೆ. ಒಟ್ಟು 15,498 ಶಾಲೆಗಳಿಂದ ವಿದ್ಯಾರ್ಥಿಗಳು ನೋಂದಾಯಿತರಾಗಿದ್ದಾರೆ.

ರಾಜ್ಯದಲ್ಲಿರುವ ಒಟ್ಟು 5,833 ಸರ್ಕಾರಿ ಶಾಲೆಗಳಿಂದ 3,60,862 ವಿದ್ಯಾರ್ಥಿಗಳು, 3,605 ಅನುದಾನಿತ ಶಾಲೆಗಳಿಂದ 2,20,831 ವಿದ್ಯಾರ್ಥಿಗಳು ಹಾಗೂ 6,060 ಅನುದಾನ ರಹಿತ ಶಾಲೆಗಳಿಂದ 2,61,118 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದಾರೆ.

ಈ ಪರೀಕ್ಷೆಗೆ ಒಟ್ಟು 8,42,811 ವಿದ್ಯಾರ್ಥಿಗಳು ನೋಂದಾಯಿತರಾಗಿದ್ದು, ಇದರಲ್ಲಿ 7,94,611 ವಿದ್ಯಾರ್ಥಿಗಳು ಪ್ರಥಮ ಬಾರಿಗೆ ಪರೀಕ್ಷೆಯನ್ನು ಬರೆಯಲಿದ್ದಾರೆ. 20,750 ಪುನರಾವರ್ತಿತ ವಿದ್ಯಾರ್ಥಿಗಳಾಗಿದ್ದಾರೆ. 18,272 ಖಾಸಗಿ ವಿದ್ಯಾರ್ಥಿಗಳು, 8,862 ಖಾಸಗಿ ಪುನರಾವರ್ತಿತ ವಿದ್ಯಾರ್ಥಿಗಳು, 2010ಕ್ಕಿಂತ ಹಿಂದಿನ ಸಾಲಿನ ಪುನರಾವರ್ತಿತ ವಿದ್ಯಾರ್ಥಿಗಳು 301 ಹಾಗೂ 2010ಕ್ಕಿಂತ ಹಿಂದಿನ ಸಾಲಿನ ಖಾಸಗಿ ಪುನರಾವರ್ತಿತ 15 ವಿದ್ಯಾರ್ಥಿಗಳು ಎಂದು ತಿಳಿಸಿದೆ. 

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 1.1 ಲಕ್ಷ ದಾಟಿದ ಯುವ ಮತದಾರರ ಸಂಖ್ಯೆ

ಈ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಒಟ್ಟು 3,305 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಇವುಗಳಲ್ಲಿ 1,845 ರೆಗ್ಯುಲರ್ ಕ್ಲಸ್ಟರ್ ಪರೀಕ್ಷಾ ಕೇಂದ್ರಗಳಾಗಿವೆ. 1,354 ರೆಗ್ಯುಲರ್-ನಾನ್ ರೆಗ್ಯುಲರ್ ಕ್ಲಸ್ಟರ್ ಪರೀಕ್ಷಾ ಕೇಂದ್ರಗಳಾಗಿವೆ. 106 ಖಾಸಗಿ ಪರೀಕ್ಷಾ ಕೇಂದ್ರಗಳಾಗಿವೆ ಎಂದು ಮಂಡಳಿಯು ತಿಳಿಸಿದೆ. 

ಪರೀಕ್ಷೆಯ ವೇಳಾಪಟ್ಟಿ

  • ಮಾ.31ರಂದು ಪ್ರಥಮ ಭಾಷೆ ಕನ್ನಡ, ತೆಲಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ ಮತ್ತು ಸಂಸ್ಕ್ರತ
  • ಎ.4ರಂದು ಗಣಿತ ಪರೀಕ್ಷೆ
  • ಎ.6ರಂದು ದ್ವಿತೀಯ ಭಾಷೆ ಇಂಗ್ಲಿಷ್ ಹಾಗೂ ಕನ್ನಡ
  • ಎ.10ರಂದು ವಿಜ್ಞಾನ
  • ಎ.12ರಂದು ತೃತೀಯ ಭಾಷೆ ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕ್ರತ, ಕೊಂಕಣಿ ಹಾಗೂ ತುಳು
  • ಎ.15ರಂದು ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ. 

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಸಚಿವರು | ಆರ್‌ ಬಿ ತಿಮ್ಮಾಪೂರ್‌ ಮಂತ್ರಿಯಾದರೂ ಮುಧೋಳ ಕ್ಷೇತ್ರದ ಜನರಿಗೆ ನೀಗದ ಬವಣೆ  

ಬಾಗಲಕೋಟೆ ಜಿಲ್ಲೆಯ ಏಕೈಕ ಎಸ್ಸಿ ಮೀಸಲು ಕ್ಷೇತ್ರದಲ್ಲಿ ಮಾಜಿ ಉಪ ಮುಖ್ಯಮಂತ್ರಿ,...

ಮಂಡ್ಯ | ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ : ಸಚಿವ ಎನ್ ಚೆಲುವರಾಯಸ್ವಾಮಿ

ಮಂಡ್ಯ ಜಿಲ್ಲೆಯಲ್ಲಿ ಹಲವು ಸಮಸ್ಯೆಗಳಿದ್ದು, ಅವುಗಳನ್ನು ಹಂತ ಹಂತವಾಗಿ ಪರಿಹರಿಸಿ, ಜಿಲ್ಲೆಯ...

ರಾಮನಗರ | ಕಾಡಾನೆ ದಾಳಿಗೆ ಸಾವು; ಕುಟುಂಬಕ್ಕೆ ಸಚಿವರಿಂದ ಪರಿಹಾರದ ಚೆಕ್‌ ವಿತರಣೆ

ರಾಮನಗರ ಜಿಲ್ಲೆ ಕನಕಪುರ ಬಳಿಯ ಮುತ್ತುರಾಯನ ದೊಡ್ಡಿ ಗ್ರಾಮಕ್ಕೆ ಅರಣ್ಯ ಜೀವಿಶಾಸ್ತ್ರ...

ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಆಶ್ರಯ ಪಡೆದಿರುವ 1500 ಪ್ರಯಾಣಿಕರಿಗೆ ಅಗತ್ಯ ನೆರವು

1500 ಕಾರ್ಮಿಕರಿಗೆ ಬಿಬಿಎಂಪಿ ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳಿಂದ ನೆರವು ಕಾರ್ಮಿಕರ ನೆರವಿಗೆ...