ಉಡುಪಿ | ಮಾರ್ಚ್ 21 ರಿಂದ SSLC ಪರೀಕ್ಷೆ, ನಿಷೇಧಾಜ್ಞೆ ಜಾರಿ

Date:

ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ (ಪರೀಕ್ಷೆ-1) ಪರೀಕ್ಷೆಗಳು ಮಾರ್ಚ್ 21 ರಿಂದ ಏಪ್ರಿಲ್ 4 ರ ವರೆಗೆ ಜಿಲ್ಲೆಯಲ್ಲಿ ನಿಗಧಿಪಡಿಸಲಾದ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ, ದೋಷರಹಿತವಾಗಿ ನಡೆಸಲು ಮತ್ತು ಪರೀಕ್ಷೆ ಸಂದರ್ಭದಲ್ಲಿ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗದಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2003 ರ ಕಲಂ 163 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿದ್ದಾರೆ.

- Advertisement -

ಈ ಸಂದರ್ಭದಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಹೊರತುಪಡಿಸಿ ಇತರ ಯಾವುದೇ ವ್ಯಕ್ತಿ ಅಥವಾ ಐದು ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು, ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ಹಾಗೂ ಅನಧೀಕೃತ ವ್ಯಕ್ತಿಗಳಿಗೆ ಪರೀಕ್ಷಾ ಕೇಂದ್ರಗಳ ಪ್ರವೇಶವನ್ನು ನಿರ್ಬಂಧಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಪರೀಕ್ಷಾ ಕೇಂದ್ರಗಳ 200 ಮೀ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿ, ಸೈಬರ್ ಸೆಂಟರ್, ಬುಕ್‌ಸ್ಟಾಲ್, ಫೋಟೋ ಕಾಪಿಯರ್‌ಗಳನ್ನು ಮುಚ್ಚಲು ಆದೇಶಿಸಿದೆ. ಪರೀಕ್ಷೆಗಳು ನಡೆಯುವ ಸಮಯದಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿರ್ಬಂಧಿಸಲಾಗಿರುತ್ತದೆ. ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷಾರ್ಥಿಗಳು ಆಗಮಿಸುವ ಸಮಯ ಮತ್ತು ಹೊರ ಹೋಗುವ ಸಮಯದಲ್ಲಿ ಮಾತ್ರ ಚಿತ್ರೀಕರಿಸಲು ಮಾಧ್ಯಮದವರಿಗೆ ಅವಕಾಶವಿದ್ದು, ಪರೀಕ್ಷಾ ಗೌಪ್ಯತೆ ದೃಷ್ಟಿಯಿಂದ ಪರೀಕ್ಷಾ ಕೊಠಡಿಗಳಲ್ಲಿ ಪ್ರವೇಶ, ಚಿತ್ರೀಕರಣ ಇತ್ಯಾದಿಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ

ಗುರುತು ಪತ್ತೆ ಹಚ್ಚಲು ಸಾಧ್ಯವಾಗದ ರೀತಿಯಲ್ಲಿ ವಸ್ತ್ರಧರಿಸಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು, ಪರೀಕ್ಷಾ ಕೇಂದ್ರದಲ್ಲಿ, ಫ್ರಿಸ್ಕಿಂಗ್ ನಡೆಸುವ ಸಿಬ್ಬಂದಿಯೊಂದಿಗೆ ಮತ್ತು ಪರೀಕ್ಷಾ ಕೊಠಡಿಯ ಸಂವೀಕ್ಷಕರೊಂದಿಗೆ ಸಹಕರಿಸಿ ತಪಾಸಣೆಗೊಳಗಾಗುವುದು ಕಡ್ಡಾಯವಾಗಿರುತ್ತದೆ. ಪರೀಕ್ಷೆಗೆ ಹಾಜರಾಗುವ ಎಲ್ಲಾ ಅಭ್ಯರ್ಥಿಗಳು ಆಯೋಗವು ನಡೆಸುವ ಹ್ಯಾಂಡ್ ಹೆಲ್ಡ್ ಮೆಟಲ್ ಡಿಟೆಕ್ಟರ್ ತಪಾಸಣೆಗೆ ಒಳಗಾಗುವುದು ಕಡ್ಡಾಯವಾಗಿರುತ್ತದೆ. ಮೆಟಲ್ ವಾಟರ್ ಬಾಟಲ್ಸ್ ಅಥವಾ ನಾನ್ ಟ್ರಾನ್ಸ್ಪರೆಂಟ್ ವಾಟರ್ ಬಾಟಲ್‌ಗಳನ್ನು ಪರೀಕ್ಷಾ ಕೊಠಡಿಯೊಳಗೆ ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ

ಮೊಬೈಲ್/ ಸೆಲ್ಯೂಲಾರ್ ಫೋನ್, ಟ್ಯಾಬ್ಲೆಟ್, ಪೆನ್‌ಡ್ರೆöÊವ್, ಬ್ಲೂಟೂತ್ ಡಿವೈಸ್, ಸ್ಮಾರ್ಟ್ ವಾಚ್, ಕ್ಯಾಲ್ಕುಲೇಟರ್ ಮತ್ತು ಇತರೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳು ಅಥವಾ ಲಾಗ್ ಟೇಬಲ್ಸ್, ಕೈಚೀಲ, ಪರ್ಸ್, ನೋಟುಗಳು, ಚಾರ್ಜ್. ಬಿಡಿ ಹಾಳೆಗಳು ಅಥವಾ ರೆಕಾರ್ಡಿಂಗ್ ವಸ್ತುಗಳನ್ನೂ ಸೇರಿದಂತೆ ಇನ್ನಿತರೆ ಯಾವುದೇ ರೀತಿಯ ಉಪಕರಣಗಳನ್ನು ಪರೀಕ್ಷಾ ಕೇಂದ್ರದೊಳಗೆ ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ.

ಹಿಯರಿಂಗ್ ಏಡ್ ಉಪಕರಣ ಧರಿಸಿರುವ ಅಭ್ಯರ್ಥಿಗಳು ವೈದ್ಯಕೀಯ ದಾಖಲೆಗಳೊಂದಿಗೆ ಪರೀಕ್ಷೆ ಪ್ರಾರಂಭವಾಗುವ ಎರಡು ಗಂಟೆ ಮುಂಚಿತವಾಗಿ ಸಂಪೂರ್ಣ ವಿಶೇಷ ತಪಾಸಣೆಗೆ ಒಳಪಡುವುದು ಕಡ್ಡಾಯವಾಗಿರುತ್ತದೆ.

ಕರ್ನಾಟಕ ಲೋಕ ಸೇವಾ ಆಯೋಗವು ಅಭ್ಯರ್ಥಿಗಳ ಪ್ರವೇಶ ಪತ್ರದಲ್ಲಿ ತಿಳಿಸಿರುವ ವಸ್ರ್ರ ಸಂಹಿತೆಯನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸಬೇಕು. ಎಲ್ಲಾ ಪರೀಕ್ಷಾ ಸಿಬ್ಬಂದಿ/ಅಭ್ಯರ್ಥಿಗಳು ಮೊಬೈಲ್ ಮತ್ತು ಇತರೇ ಸಂಪರ್ಕ ಸಲಕರಣೆಗಳನ್ನು ತರುವುದನ್ನು ನಿಷೇಧಿಸಲಾಗಿರುತ್ತದೆ. ಕರ್ನಾಟಕ ಲೋಕ ಸೇವಾ ಆಯೋಗವು ನಿಗದಿಪಡಿಸಿರುವ ಸೂಚನೆಗಳನ್ನು ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಪಾಲಿಸಬೇಕು. ಸದರಿ ಆದೇಶವು ಕಾರ್ಯನಿರತ ಪರೀಕ್ಷಾ ಅಧಿಕಾರಿ / ಸಿಬ್ಬಂದಿ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಅನ್ವಯಿಸುವುದಿಲ್ಲ. ಈ ನಿಷೇಧಾಜ್ಞೆ ಆದೇಶವು ನಿಗದಿಪಡಿಸಿದ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯ ಸುತ್ತಲೂ ಮಾರ್ಚ್ 21 ರಿಂದ ಏಪ್ರಿಲ್ 4 ರ ವರೆಗೆ ಪರೀಕ್ಷಾ ಅವಧಿಯಲ್ಲಿ ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...