ಎಸ್ಸೆಸ್ಸೆಲ್ಸಿ ಪರೀಕ್ಷೆ| ಶೇ.100 ಫಲಿತಾಂಶ ಪಡೆದ ನಾಲ್ಕು ವಿದ್ಯಾರ್ಥಿಗಳು

Date:

Advertisements

ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿ(ಕೆಎಸ್‌ಇಎಬಿ) ಸೋಮವಾರ ( ಮೇ.8 ರಂದು) ರಾಜ್ಯದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಪ್ರಕಟಿಸಿದೆ.

ಈ ವರ್ಷ ಶೇ.83.89 ಫಲಿತಾಂಶ ಬಂದಿದೆ. ಪರೀಕ್ಷೆ ಬರೆದ 8,35,102 ವಿದ್ಯಾರ್ಥಿಗಳಲ್ಲಿ 7,00,619 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಪಡೆದಿದ್ದಾರೆ. ಬಾಲಕಿಯರೇ ಮೇಲುಗೈ ಸಾಧಿಸಿದ್ದು, ಶೇ.83.89 ವಿದ್ಯಾರ್ಥಿನಿಯರು, ಶೇ 80.08 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

625ಕ್ಕೆ 625 ಗಳಿಸಿದ ವಿದ್ಯಾರ್ಥಿಗಳು
ಬೆಂಗಳೂರಿನ ಹೊಸೂರು ರಸ್ತೆಯಲ್ಲಿರುವ ಖಾಸಗಿ ಶಾಲೆಯೊಂದರ ವಿದ್ಯಾರ್ಥಿನಿ ಭೂಮಿಕಾ ಫೈ, ಚಿಕ್ಕಬಳ್ಳಾಪುರ ಶಾಲೆಯೊಂದರ ವಿದ್ಯಾರ್ಥಿ ಯಶಸ್ ಗೌಡ, ಸವದತ್ತಿಯ ಅನುಪಮ, ವಿಜಯಪುರದ ಭೀಮನ ಗೌಡ – ನಾಲ್ವರು ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.

Advertisements

ಚಿತ್ರದುರ್ಗ ಪ್ರಥಮ ಸ್ಥಾನ

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.96.80 ಫಲಿತಾಂಶದೊಂದಿಗೆ ಚಿತ್ರದುರ್ಗ ಜಿಲ್ಲೆ ಪ್ರಥಮ ಸ್ಥಾನ ಗಳಿಸಿದೆ. ಶೇ.96.74ರಷ್ಟು ಫಲಿತಾಂಶ ಗಳಿಸಿ ಮಂಡ್ಯ ಎರಡನೇ ಸ್ಥಾನದಲ್ಲಿದೆ. ಹಾಸನ ಮೂರನೇ ಸ್ಥಾನ ಗಳಿಸಿದ್ದರೆ, ಶೇ.75.49 ಪಡೆದು ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ. ಬೆಂಗಳೂರು ಉತ್ತರ ಜೆಲ್ಲೆಗೆ 32ನೇ ಸ್ಥಾನ. ಬೆಂಗಳೂರು ದಕ್ಷಿಣ ಜಿಲ್ಲೆಗೆ 33ನೇ ಸ್ಥಾನ ಪಡೆದಿದೆ.

ಪರೀಕ್ಷೆಗಳನ್ನು 2023 ಮಾರ್ಚ್ 31 ರಿಂದ ಏಪ್ರಿಲ್ 15ರವರೆಗೆ ನಡೆಸಲಾಗಿತ್ತು. ಒಟ್ಟು ರಾಜ್ಯದ 15,498 ಪ್ರೌಢಶಾಲೆಗಳ 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದರು. ರಾಜ್ಯಾದ್ಯಂತ ಒಟ್ಟು 3,305 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದವು. ಇನ್ನು 63 ಸಾವಿರ ಶಿಕ್ಷಕರು ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X