ಆರ್ ಸಿಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ನಡೆದ ತಪ್ಪಿನ ಬಗ್ಗೆ ಎನೂ ಕ್ರಮಗಳನ್ನ ಕೈಗೊಳ್ಳಬೇಕು. ಆ ನಿರ್ಣಯ ತೆಗೆದುಕೊಂಡಿದ್ದೇವೆ. ಪೊಲೀಸ್ ಅಧಿಕಾರಿಗಳು ಮತ್ತು ಆರ್ ಸಿಬಿ ಮೇಲೆ ಕ್ರಮ ಕೈಗೊಂಡಿದ್ದವೆ ಎಂದು ಕಾನೂನು ಸಚಿವ ಎಚ್.ಕೆ ಪಾಟೀಲ್ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನ್ಯಾ.ಮೈಕಲ್ ಕುನ್ನಾ ಅವರ ನೇತೃತ್ವದಲ್ಲಿ ತನಿಖೆಗೆ ಆದೇಶ ಮಾಡಿದ್ದೇವೆ. ಅಧಿಕಾರಿಗಳ ಮೇಲೆ ಕ್ರಮ ಕೈಗೊಂಡ ಹಾಗೆಯೇ, ಇದಕ್ಕಿಂತ ಹೆಚ್ಚಿನದ್ದು ಎನೂ ಮಾಡಲು ಸಾಧ್ಯ. ತರಾತುರಿಯಲ್ಲಿ ಅವಕಾಶ ಕೊಟ್ಟಿದ್ದೇವಾ ಏನೂ ಅಂತಾ ತನಿಖೆಯಲ್ಲಿ ಗೊತ್ತಾಗುತ್ತೆ. ಯಾಕಾಗಿದೆ ಅನ್ನೋದು ನಮಗೂ ಅಚ್ಚರಿಯಾಗಿದೆ. ನ್ಯಾಯಮೂರ್ತಿ ವಿಚಾರಣೆ ಶುರು ಮಾಡಿದ್ದಾರೆ. ಮಂತ್ರಿಗಳು ಅದರ ಬಗ್ಗೆ ನಾವು ವಿಶ್ಲೇಷಣೆ ಮಾಡುವುದಿಲ್ಲ ಎಂದು ಹೇಳಿದರು.