ಮಂಡ್ಯ| ನೊಂದವರಿಗಾಗಿ ಮಹಿಳಾ ನ್ಯಾಯಾಲಯ ಸ್ಥಾಪಿಸಿ : ಸುನಂದಾ ಜಯರಾಮ್

Date:

Advertisements

ಇತ್ತಿಚೀನ ದಿನಗಳಲ್ಲಿ ಮಹಿಳೆಯರ ಮೇಲೆ ನಿರಂತರವಾಗಿ ದಬ್ಬಾಳಿಕೆ, ಅತ್ಯಾಚಾರ, ಹತ್ಯೆ ಪ್ರಕರಣಗಳು ನಡೆಯುತ್ತಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಹಾಗೂ ಪ್ರಕರಣಗಳನ್ನು ಶೀಘ್ರವಾಗಿ ವಿಚಾರಣೆ ನಡೆಸಿ ನೊಂದವರಿಗೆ ನ್ಯಾಯ ಒದಗಿಸಿ ಕೊಡಲು ಮಹಿಳಾ ನ್ಯಾಯಾಲಯ ಸ್ಥಾಪಿಸಬೇಕು ಎಂದು ರೈತಸಂಘ ಮುಖಂಡರಾದ ಸುನಂದಾ ಜಯರಾಮ್ ಒತ್ತಾಯಿಸಿದರು.

ಮಂಡ್ಯ ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಅತ್ಯಾಚಾರ ವಿರೋಧಿ ಆಂದೋಲನದ ಭಾಗವಾಗಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರತಿನಿತ್ಯ ಮಹಿಳೆಯರ ಮೇಲೆ ಅತ್ಯಾಚಾರ, ದಬ್ಬಾಳಿಕೆ, ಕೊಲೆ ಪ್ರಕರಣಗಳು ಹೆಚ್ಚುತ್ತಿವೆ. ಇವುಗಳಿಗೆ ಕೊನೆಯಾಡಲು ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗಗಳು ಒಗ್ಗೂಡಿಸಿ ಕೆಲಸ ಮಾಡಬೇಕೆಂದರು.

ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿ ಪೂರ್ಣಿಮ ಜಿ ಮಾತನಾಡಿ, ಇತ್ತೀಚೆಗೆ ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಿರ್ಭಯ ಪ್ರಕರಣದಷ್ಟೇ ಗಂಭೀರವಾದ ರೀತಿಯಲ್ಲಿ ಅತ್ಯಾಚಾರ, ಕೊಲೆ ಮಾಡಿರುವ ಪ್ರಕರಣ ದೇಶದ ಎಲ್ಲೆಡೆ ಸುದ್ದಿ ಆಗಿ ಪ್ರತಿಭಟನೆಗಳು ದಾಖಲಾಗುತ್ತಿರುವುದನ್ನು ನಾವು ನೋಡುತಿದ್ದೇವೆ. ಈ ಘಟನೆ ಮಾಸುವ ಮೊದಲೇ ಇದೇ ತಿಂಗಳ 18 ರಂದು ಬೆಂಗಳೂರಿನ ಎಚ್‌ಎಸ್‌ಆರ್ ಲೇ ಔಟಲ್ಲಿ ಸಾಮೂಹಿಕ ಅತ್ಯಾಚಾರದ ಹೀನ ಘಟನೆ ನಡೆದಿದೆ ಎಂದು ದೂರಿದರು.

Advertisements

ಪ್ರತಿನಿತ್ಯ ಮಹಿಳೆಯರ ಮೇಲೆ ಆಗುತ್ತಿರುವ ದಬ್ಬಾಳಿಕೆ, ಅತ್ಯಾಚಾರ ನಿಲ್ಲಬೇಕೆಂದು ಹೊರಾಡುತ್ತಿದ್ದೇವೆ. ಆದರೂ ಕೂಡ ನಮ್ಮ ಸಮಾಜ ಆತಂಕಕಾರಿ ಘಟ್ಟವನ್ನು ಮುಟ್ಟಿದೆ. ಇಂತ ಘಟನೆಗಳು ನಡೆದಾಗ ರಾಜಕೀಯ ಕಾರಣಗಳಿಗೆ ಬಳಕೆ ಮಾಡುವ ಕಡೆಗೆ ಆಳುವ ಸರಕಾರಗಳು ಹೊರಟಿವೆ. ಒಕ್ಕೂಟ ಹಾಗೂ ನಾಡ ಸರಕಾರಗಳು ಕೆಸರೆರಚಾಟ ನಿಲ್ಲಿಸಿ ಹೆಣ್ಣು ಮಕ್ಕಳಿಗೆ ಭದ್ರತೆ ಒದಗಿಸುವ ಕಡೆ ಗಮನಹರಿಸಲು ಒತ್ತಾಯಿಸಿದರು.

ವಿಮೋಚನಾ ಸಂಘಟನೆ ಜನಾರ್ಧನ್ ಮಾತನಾಡಿ, ಜಿಲ್ಲೆಯಲ್ಲಿ ಲಿಂಗಾನುಪಾತದಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಕೆ ಆಗುತ್ತಿದೆ. 1000 ಜನ ಗಂಡಸರಿಗೆ 865 ಹೆಣ್ಣುಮಕ್ಕಳ ಅನುಪಾತದಲ್ಲಿದೆ .ಈ ಬಗ್ಗೆ ಬೇರೆ ಬೇರೆ ಹಂತಗಳಲ್ಲಿ ಹೋರಾಟ, ಆಂದೋಲನ ನಡೆಸುತ್ತಿದ್ದರೂ ಇಂತಹ ಘಟನೆಗಳು ಮರುಕಳಿಸುತ್ತಿವೆ ಎಂದರು. ಸಿಐಟಿಯು ಮುಖಂಡರಾದ ಸಿ.ಕುಮಾರಿ ಧ್ವನಿಗೂಡಿಸಿದರು.

ಅಭಿಷೇಕ್ ಎಂಬಾತ ಹಾಡ್ಯದ ಆಲೆಮನೆ, ಪಾಂಡವಪುರ, ನಾಗಮಂಗಲ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ. ಅವನಿಗೆ ಸ್ಕ್ಯಾನಿಂಗ್ ಯಂತ್ರ ಬಂದದ್ದಾದರೂ ಎಲ್ಲಿಂದ ಎಂಬುದರ ಬಗ್ಗೆ ಜಿಲ್ಲಾಡಳಿತ ತನಿಖೆ ನಡೆಸಬೇಕು. ಕೂಡಲೇ ಆತನನ್ನು ಬಂಧಿಸಿ ಕಠಿಣ ದಂಡನೆ ಕೊಡಿಸಬೇಕು ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಹವಾಮಾನ ವೈಪರೀತ್ಯವು ಕೃಷಿಕರ ಮೇಲೆ ದುಷ್ಪರಿಣಾಮ ಬೀರುತ್ತಿದೆ : ವಿಜ್ಞಾನಿ ಡಾ. ಸುಧಿ ಶೇಷಾದ್ರಿ

ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ಲತಾ ಶಂಕ‌ರ್, ಮಹಿಳಾ ಮುನ್ನಡೆ ಸಂಘಟನೆ ಶಿಲ್ಪ, ವಿಮೋಚನಾ ಸಂಘಟನೆಯ ಇಂಪನ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X