ರಾಜ್ಯ ಬಜೆಟ್ | ವಿದ್ಯಾರ್ಥಿಗಳಿಗೆ ಹೆಚ್ಚಿನ ಶೈಕ್ಷಣಿಕ ಅನುದಾನ ಒದಗಿಸುವಂತೆ ಎಸ್‌ಐಓ ಆಗ್ರಹ

Date:

Advertisements

ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಝೇಷನ್(ಎಸ್‌ಐಓ) ಕರ್ನಾಟಕ ರಾಜ್ಯ ಘಟಕವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ರಾಜ್ಯದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಬಜೆಟ್‌ನಲ್ಲಿ ಹೆಚ್ಚಿನ ಶೈಕ್ಷಣಿಕ ಅನುದಾನ ಒದಗಿಸುವಂತೆ ಆಗ್ರಹಿಸಿದೆ.

ಕೇಂದ್ರ ಸರ್ಕಾರವು ರಾಷ್ಟ್ರೀಯ ಶಾಲಾ ವಿದ್ಯಾರ್ಥಿ ವೇತನ ಪೋರ್ಟಲ್ ಪೂರ್ವ-ಮ್ಯಾಟ್ರಿಕ್, ಪೋಸ್ಟ್-ಮ್ಯಾಟ್ರಿಕ್ ಹಾಗೂ ಮೌಲಾನಾ ಆಜಾದ್ ಫೆಲೋಶಿಪ್ ಮುಂತಾದ ಯೋಜನೆಗಳನ್ನು ರದ್ದುಪಡಿಸಿದ್ದು, ಇದರಿಂದ ವಿದ್ಯಾರ್ಥಿಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಶಿಕ್ಷಣ ಮಧ್ಯದಲ್ಲೇ ಕೈಬಿಡುತ್ತಿದ್ದಾರೆ ಎಂದು ಎಸ್‌ಐಓ ಪತ್ರದಲ್ಲಿ ತಿಳಿಸಿದೆ.

ಈ ಹಿನ್ನೆಲೆಯಲ್ಲಿ, ರಾಜ್ಯ ಸರ್ಕಾರವು ಈ ವಿದ್ಯಾರ್ಥಿವೇತನ ಯೋಜನೆಗಳಿಗೆ ಅನುದಾನ ಒದಗಿಸಬೇಕು ಮತ್ತು ಕಟ್ಟಡ ನಿರ್ಮಾಣಕ್ಕಾಗಿ ಮೀಸಲಿರುವ ಅನುದಾನವನ್ನು ವಿದ್ಯಾರ್ಥಿಗಳ ಕಲ್ಯಾಣಕ್ಕಾಗಿ ಬಳಸಬೇಕು ಎಂದು ಎಸ್‌ಐಓ ಒತ್ತಾಯಿಸಿದೆ.

Advertisements

ಹಿಂದಿನ ವರ್ಷ ಪಿಎಚ್‌ಡಿ ವಿದ್ಯಾರ್ಥಿಗಳಿಗೆ ಕೇವಲ ₹10,000 ಸಹಾಯಧನ ನೀಡಲಾಗಿತ್ತು. ಆದರೆ ಈ ಮೊದಲು ₹25,000 ನೀಡಲಾಗುತ್ತಿತ್ತು. ಎಸ್‌ಐಓ ಈ ಮೊದಲು ನೀಡಿದ ಮೊತ್ತವನ್ನು ಮರಳಿ ಸ್ಥಾಪಿಸಬೇಕು ಎಂದು ಸರ್ಕಾರವನ್ನು ಕೇಳಿಕೊಂಡಿದೆ.

AISHE 2021-22 ವರದಿಯ ಪ್ರಕಾರ, ಮುಸ್ಲಿಂ ವಿದ್ಯಾರ್ಥಿಗಳ ಒಟ್ಟು ದಾಖಲಾತಿ ಪ್ರಮಾಣ (GER) ರಾಷ್ಟ್ರೀಯ ಸರಾಸರಿಗಿಂತ ಕಡಿಮೆಯಾಗಿರುವುದರಿಂದ, ಎಸ್‌ಐಓ ವಿಶೇಷ ತರಬೇತಿ ಯೋಜನೆಯನ್ನು ಪ್ರಸ್ತಾಪಿಸಿದೆ. ಇದರಡಿ, ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ CUET, GATE, IIT, IIM, NLSIU ಪ್ರವೇಶ ಪರೀಕ್ಷೆಗಳಿಗಾಗಿ ತರಬೇತಿ ನೀಡಲು ವಿಶೇಷ ಅನುದಾನ ಒದಗಿಸಬೇಕೆಂದು ಒತ್ತಾಯಿಸಲಾಗಿದೆ.

ಪ್ರೀ-ಮೆಟ್ರಿಕ್ ವಿದ್ಯಾರ್ಥಿವೇತನ ₹250 ಕೋಟಿ (15 ಲಕ್ಷ ವಿದ್ಯಾರ್ಥಿಗಳಿಗೆ), ಪೋಸ್ಟ್-ಮೆಟ್ರಿಕ್ ಮತ್ತು ಮೆರಿಟ್-ಕಮ್-ಮೀನ್ಸ್ ವಿದ್ಯಾರ್ಥಿವೇತನ ₹700 ಕೋಟಿ (10 ಲಕ್ಷ ವಿದ್ಯಾರ್ಥಿಗಳಿಗೆ), ಪಿಎಚ್‌ಡಿ ಫೆಲೋಶಿಪ್ ₹300 ಕೋಟಿ (1,000 ವಿದ್ಯಾರ್ಥಿಗಳಿಗೆ), ಶುಲ್ಕ ಮನ್ನಾ ₹150 ಕೋಟಿ (15,000 ವಿದ್ಯಾರ್ಥಿಗಳಿಗೆ), ಬಿ ಎಡ್, ಡಿಎಡ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ₹15 ಕೋಟಿ (3,000 ವಿದ್ಯಾರ್ಥಿಗಳಿಗೆ), ವಿದ್ಯಾಸಿರಿ ₹25 ಕೋಟಿ (15,000 ವಿದ್ಯಾರ್ಥಿಗಳಿಗೆ), ಸ್ಪರ್ಧಾತ್ಮಕ ಪರೀಕ್ಷೆ ತರಬೇತಿಗೆ ₹2 ಕೋಟಿ (1,000 ವಿದ್ಯಾರ್ಥಿಗಳಿಗೆ), ನರ್ಸಿಂಗ್ ಮತ್ತು ಪ್ಯಾರಾ ಮೆಡಿಕಲ್ ಕೋರ್ಸ್ ಪ್ರೋತ್ಸಾಹಧನ ₹45 ಕೋಟಿ (1,500 ವಿದ್ಯಾರ್ಥಿಗಳಿಗೆ) ಮೀಸಲಿಡಲು ಎಸ್‌ಐಓ ಒತ್ತಾಯಿಸಿದೆ.

ಅರಿವು ಸಾಲ ಯೋಜನೆಯ ಕುರಿತು ಪ್ರಸ್ತಾಪಿಸಿರುವ ಎಸ್‌ಐಓ, ₹200 ಕೋಟಿ ಅನುದಾನವನ್ನು 20,000 ವಿದ್ಯಾರ್ಥಿಗಳಿಗೆ ಮಂಜೂರು ಮಾಡಬೇಕು ಹಾಗೂ ಈ ಯೋಜನೆಯ ಪ್ರಯೋಜನಗಳನ್ನು ಸಿಇಟಿ ವಿದ್ಯಾರ್ಥಿಗಳಷ್ಟೇ ಅಲ್ಲ, ಮೆನೇಜ್‌ಮೆಂಟ್ ಕೋಟಾದ ವಿದ್ಯಾರ್ಥಿಗಳಿಗೆ ಕೂಡಾ ವಿಸ್ತರಿಸಬೇಕು ಎಂದು ಒತ್ತಾಯಿಸಿದೆ.

ಉದ್ಯೋಗಗಳ ಕೊರತೆಯಿಂದ ಹಳೆಯ ವಿದ್ಯಾರ್ಥಿ ಸಾಲದ ಕಂತುಗಳನ್ನು ವಜಾಗೊಳಿಸಬೇಕೆಂದು ರಾಜ್ಯ ಸರ್ಕಾರವನ್ನು ಎಸ್‌ಐಓ ಕೇಳಿಕೊಂಡಿದೆ. ಈ ಪತ್ರವನ್ನು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ.ಝೆಡ್. ಜಮೀರ್ ಅಹ್ಮದ್ ಖಾನ್, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಸೇರಿ ಅನೇಕ ಪ್ರಮುಖ ಅಧಿಕಾರಿಗಳಿಗೆ ಕಳುಹಿಸಲಾಗಿದೆ.

ಸುದ್ದಿ ಓದಿದ್ದೀರಾ? ರಾಜ್ಯಾದ್ಯಂತ ಮತ್ತೆ ಕೈಕೊಟ್ಟ ಆಸ್ತಿ ನೋಂದಣಿಯ ‘ಕಾವೇರಿ ವೆಬ್‌ಸೈಟ್‌’ ಸರ್ವರ್: ಸಾರ್ವಜನಿಕರ ಪರದಾಟ

ರಾಜ್ಯದ ಅಲ್ಪಸಂಖ್ಯಾತ ಸಮುದಾಯದ ಬಹುತೇಕ ಜನಸಂಖ್ಯೆ ಬಡತನ ರೇಖೆಗಿಂತ ಕೆಳಗೆ ಬದುಕುತ್ತಿದೆ. ಅವರ ಸಮಗ್ರ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ಸರ್ಕಾರ ಶಿಕ್ಷಣದಲ್ಲಿ ಹೆಚ್ಚಿನ ಹೂಡಿಕೆ ಮಾಡುವುದು ಅಗತ್ಯವೆಂದು ಎಸ್‌ಐಓ ಒತ್ತಾಯಿಸಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

Download Eedina App Android / iOS

X