ರಾಜ್ಯ ಸರ್ಕಾರ ಮುಳಬಾಗಿಲು ತಾಲೂಕಿಗೆ ಹೆಚ್ಚು ಅನುದಾನ ನೀಡಬೇಕು: ಶಾಸಕ ಸಮೃದ್ಧಿ ಮಂಜುನಾಥ್

Date:

ಮುಳಬಾಗಿಲು ತಾಲೂಕು ಅಭಿವೃದ್ಧಿ ಕಡೆ ಸಾಗಬೇಕು, ರಾಜ್ಯ ಸರ್ಕಾರ ಅನುದಾನಗಳನ್ನು ನಮಗೆ ಸರಿಯಾಗಿ ನೀಡುತ್ತಿಲ್ಲ, ಆದರೂ ಸರ್ಕಾರದ ಮೇಲೆ ಒತ್ತಡ ಹಾಕಿ ಅನುದಾನಗಳನ್ನು ಪಡೆದು ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಲಾಗುತ್ತಿದೆ ಎಂದು ಶಾಸಕ ಸಮೃದ್ಧಿ ಮಂಜುನಾಥ್ ಹೇಳಿದರು.

- Advertisement -

ತಾಲೂಕಿನ ದೇವರಾಯಸಮುದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, “ಯಳಗೊಂಡಹಳ್ಳಿ ಮಿಣಜೆನಳ್ಳಿ ರಸ್ತೆ ಅಭಿವೃದ್ಧಿಗೆ ಸುಮಾರು ಎರಡುವರೆ ಕೋಟಿ ರೂ.. ವರದಗಾನಹಳ್ಳಿ ಮತ್ತು ದೊಡ್ಡಹೊನಶೆಟ್ಟಹಳ್ಳಿ ಗ್ರಾಮಗಳ ಸಂಪರ್ಕ ರಸ್ತೆಗಳ ಅಭಿವೃದ್ಧಿಗೆ ತಲಾ 20 ಲಕ್ಷ ರೂ. ಹನುಮನಹಳ್ಳಿ ವಾನಿಗಾನಹಳ್ಳಿ ರಸ್ತೆ ಅಭಿವೃದ್ಧಿಗೆ ಏಳು ಕೋಟಿ ಅನುದಾನ ನೀಡಲಾಗಿದೆ ಗುತ್ತಿಗೆದಾರರು ಗುಣಮಟ್ಟದಿಂದ ಈ ರಸ್ತೆಗಳನ್ನು ಅಭಿವೃದ್ಧಿ ಪಡಿಸಬೇಕೆಂದು” ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

“ತಾಲೂಕಿನಲ್ಲಿ ಶೇಕಡ 90ರಷ್ಟು ರಸ್ತೆಗಳು ಅಭಿವೃದ್ಧಿಯಾಗಿವೆ. ಇನ್ನು ಉಳಿದ ರಸ್ತೆಗಳನ್ನು ಸಹ ಹಂತ ಹಂತವಾಗಿ ಅಭಿವೃದ್ಧಿ ಪಡಿಸಲಾ ಗುವುದು. ಗಡಿನಾಡ ತಾಲೂಕು ಮುಳಬಾಗಿಲು ಆಗಿರುವುದರಿಂದ, ರಾಜ್ಯ ಸರ್ಕಾರ ತಾಲೂಕಿಗೆ ಹೆಚ್ಚು ಅನುದಾನ ನೀಡಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಕೋಲಾರ | ಮನೆಯಲ್ಲೇ ಕೆಮಿಕಲ್ ಮಿಶ್ರಿತ ಹಾಲು ತಯಾರಿ; ದೂರು ದಾಖಲು

ಈ ಸಂದರ್ಭದಲ್ಲಿ ಕೋಮುಲ್ ನಿರ್ದೇಶಕ ಬಿ.ವಿ ಶಾಮೆಗೌಡ, ಡಿಸಿಸಿ ಬ್ಯಾಂಕ್ ನಿರ್ದೇಶಕ ರಘುಪತಿರೆಡ್ಡಿ, ಗೊಲ್ಲಹಳ್ಳಿ ಜಗದೀಶ್, ಗ್ರಾಮ ವಿಕಾಸ ಎಂ.ವಿ.ಎನ್ ರಾವ್, ಗ್ರಾ.ಪಂ ಮಾಜಿ ಅಧ್ಯಕ್ಷೆ ಶ್ರೀದೇವಿ ಕೆ.ಟಿ ನಾರಾಯಣಸ್ವಾಮಿ, ಚಂಗಲರಾಯಪ್ಪ, ಎಂ.ಸಿ ಯಲ್ಲಪ್ಪ, ಪಿಡ ಬ್ಲೂಡಿ ಇಲಾಖೆ ಎಡಬ್ಲ್ಯೂ ಮೂಡಲಗಿರಿ, ಗುತ್ತಿಗೆದಾರ ಅತ್ತಿಹಳ್ಳಿ ಶ್ರೀನಿವಾಸ್‌ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...