ವಿಜಯಪುರ | ಏ. 10-14ರವರೆಗೆ ರಾಜ್ಯಮಟ್ಟದ ಬೃಹತ್ ಪುಸ್ತಕ ಮೇಳ

Date:

ಮೇ ಸಾಹಿತ್ಯ ಮೇಳ ವಿಜಯಪುರ ಬಳಗ ಹಾಗೂ ದಲಿತ, ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ಬುದ್ಧ, ಬಸವ, ಬಾಬಾ ಸಾಹೇಬ್ ಅಂಬೇಡ್ಕರ ಹೆಸರಿನಲ್ಲಿ ರಾಜ್ಯಮಟ್ಟದ ಬೃಹತ್ ಪುಸ್ತಕ ಮೇಳ ಆಯೋಜಿಸಲಾಗಿದೆ ಎಂದು ಲಡಾಯಿ ಪ್ರಕಾಶನದ ಬಸವರಾಜ ಸೂಳಿಬಾವಿ ಹೇಳಿದರು.

- Advertisement -

ಈ ಬಗ್ಗೆ ವಿಜಯಪುರ ಜಲ ನಗರದ ಬುದ್ಧ ವಿಹಾರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸೂಳಿಬಾವಿ, “ಏಪ್ರಿಲ್ 10 ರಿಂದ 5 ದಿನಗಳ ಕಾಲ ದರ್ಬಾರ ಪ್ರೌಢಶಾಲೆ ಮೈದಾನದಲ್ಲಿ ಪುಸ್ತಕ ಮೇಳ ನಡೆಯಲಿದೆ. ತಯಾರಿ ಬರದಿಂದ ನಡೆಯುತ್ತಿದೆ. ಕಳೆದ ಒಂದು ತಿಂಗಳಿನಿಂದ ಸಿದ್ಧತೆ ಕೈಗೊಳ್ಳಲಾಗಿದ್ದು, ಇದೀಗ ಅಂತಿಮ ಘಟ್ಟ ತಲುಪಿದೆ. ಇದೊಂದು ರಾಜ್ಯದಲ್ಲೇ ವಿನೂತನ ಪ್ರಯೋಗ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನು ಓದಿದ್ದೀರಾ? ವಿಜಯಪುರ | ಪುಸ್ತಕ ಮೇಳದ ವಾಲ್ ಪೋಸ್ಟರ್‌ ಬಿಡುಗಡೆ

“ಏ.10 ರಂದು ಮಧ್ಯಾಹ್ನ 12ಕ್ಕೆ ಡಿಎಸ್ಎಸ್ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ ಪುಸ್ತಕ ಮೇಳಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಿದ್ದಾರೆ. ಬೆಳಗಾವಿ ಪ್ರಾದೇಶಿಕ ಆಯುಕ್ತೆ ಕೆಎಂ ಜಾನಕಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಂಬೈನ ಖ್ಯಾತ ಲೇಖಕ ಜೀವಿ ಪವಾರ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಅದೇ ದಿನ ಮಧ್ಯಾಹ್ನ ಮೂರಕ್ಕೆ ಸಾಮಾಜಿಕ ಬದ್ಧತೆ ಪತ್ರಕರ್ತನಾಗಿ ಅನುಭವಗಳು ಎಂಬ ವಿಚಾರಗೋಷ್ಠಿ ನಡೆಯಲಿದೆ. ಹಿರಿಯ ಪತ್ರಕರ್ತರಾದ ಬಿಎಮ್ ಹನೀಫ್, ಚಂದ್ರಕಾಂತ್ ವಡ್ಡು ವಿಚಾರ ಮಂಡಿಸಲಿದ್ದಾರೆ. ಹಿರಿಯ ಪತ್ರಕರ್ತ ರಫಿ ಭಂಡಾರಿ ಅಧ್ಯಕ್ಷತೆ ವಹಿಸಲಿದ್ದಾರೆ” ಎಂದು ಮಾಹಿತಿ ನೀಡಿದರು.

“ಸಂಜೆ ಐದಕ್ಕೆ ‘ನನ್ನ ನೆಚ್ಚಿನ ಪುಸ್ತಕ- ವಿದ್ಯಾರ್ಥಿಗಳ ಮಾತು’ ಎಂಬ ಸಂವಾದ, ನಂತರ ಸಂಜೆ 6ಕ್ಕೆ ಕವಿಗೋಷ್ಠಿ, ಸಂಜೆ 7ಕ್ಕೆ ಬಂಜಾರ ನೃತ್ಯ ನಡೆಯಲಿದೆ. ಅದೇ ದಿನ ರಾತ್ರಿ ಎಂಟಕ್ಕೆ ಗಣೇಶ ಕಾಂಬಳೆ ರಮೇಶ ನಾಯಕ ಅವರಿಂದ ಪವಾಡ ಬಯಲು ಕಾರ್ಯಕ್ರಮ ನಡೆಯಲಿದೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ವಿಜಯಪುರ | ಬುದ್ಧ, ಬಸವ, ಅಂಬೇಡ್ಕರ್‌ ಚಿಂತನೆಯ ಪುಸ್ತಕ ಮೇಳ ಆಯೋಜನೆಗೆ ನಿರ್ಧಾರ

“ಏ.11 ರಂದು ಶಿಕ್ಷಕ ದಂಪತಿ ಮೆರವಣಿಗೆ ಎಂಬ ವಿನೂತನ ಕಾರ್ಯಕ್ರಮ ನಡೆಯಲಿದ್ದು, ಸಾವಿತ್ರಿಬಾಯಿ ಫುಲೆ ಮಾರ್ಗದಿಂದ ಪುಸ್ತಕ ಮೇಳದ ಸ್ಥಳದ ವರೆಗೆ ಈ ಮೆರವಣಿಗೆ ನಡೆಯಲಿದೆ. ಮಧ್ಯಾಹ್ನ 12ಕ್ಕೆ ಖ್ಯಾತ ಚಿಂತಕಿ ಡಾ. ಮೀನಾಕ್ಷಿ ಬಾಳಿ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಸಂಜೆ 4ಕ್ಕೆ ಲೇಖಕರೊಂದಿಗೆ ಸಂವಾದ ನಡೆಯಲಿದೆ. ಸಂಜೆ 6ಕ್ಕೆ ಕವಿಗೋಷ್ಠಿ ನಡೆಯಲಿದೆ” ಎಂದರು.

“ಏ.12 ರಂದು ಬಸವಾದಿ ಶರಣರ ವಚನಗಳ ಪವಿತ್ರ ಕಟ್ಟುಗಳ ಮೆರವಣಿಗೆ ನಡೆಯಲಿದೆ. ನಂತರ ನಡೆಯಲಿರುವ ಉಪನ್ಯಾಸ ಕಾರ್ಯಕ್ರಮದಲ್ಲಿ ಖ್ಯಾತ ಚಿಂತಕಿ ಡಾ. ಎಚ್ ಎಸ್ ಅನುಪಮಾ ವಿಶೇಷ ಉಪನ್ಯಾಸ ನೀಡಲಿದ್ದಾರೆ. ನಂತರ ‘ಮುದ್ರಣ ಗುಮ್ಮಟ’ ಎಂಬ ಪುಸ್ತಕ ಬಿಡುಗಡೆ ಹಾಗೂ ಪ್ರಶಸ್ತಿ ಪ್ರಧಾನ, ಛಾಯಾಚಿತ್ರಗಳ ಪ್ರದರ್ಶನ ನಡೆಯಲಿದೆ. ಏ.13 ರಂದು ಕಾರಖಾನೀಸರ ಸ್ಮರಣೆ ನಡೆಯಲಿದೆ. ಡಾ. ಕೃಷ್ಣ ಕೊಲ್ಹಾರ ಕುಲಕರ್ಣಿ ಉಪನ್ಯಾಸ ಮಂಡಿಸಲಿದ್ದಾರೆ” ಎಂದು ತಿಳಿಸಿದರು.

“ಏ.14ರಂದು ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಜಯಂತೋತ್ಸವ ನಡೆಯಲಿದೆ. ಖ್ಯಾತ ಚಿಂತಕ ಶಿವ ಸುಂದರ ಪ್ರಧಾನ ಭಾಷಣ ಮಂಡಿಸಲಿದ್ದಾರೆ” ಎಂದರು.

ಪತ್ರಿಕಾಗೋಷ್ಠಿಯಲ್ಲಿ ಅನಿಲ ಹೊಸಮನಿ, ಚೆನ್ನು ಕಟ್ಟಿಮನಿ, ರಾಜಶೇಕರ ಯಡಹಳ್ಳಿ, ಡಾ. ದೊಡ್ಡಣ್ಣ ಭಜಂತ್ರಿ ಇತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...