ತುಮಕೂರಿನಲ್ಲಿ 27 ರಂದು ರಾಜ್ಯಮಟ್ಟದ ಸಾಹಿತ್ಯ ಸಂವಾದ

Date:

Advertisements

ಬಂಡಾಯ ಸಾಹಿತ್ಯ ಸಂಘಟನೆ ‘ಚಳವಳಿಯ ಸಂಗಾತಿಯಾಗಿ ಕನ್ನಡ ಸಾಹಿತ್ಯ’ ವಿಷಯ ಕುರಿತು ತುಮಕೂರು ನಗರದ ರವೀಂದ್ರ ಕಲಾ ನಿಕೇತನ ಸಭಾಂಗಣದಲ್ಲಿ ಜುಲೈ 27ರಂದು ರಾಜ್ಯ ಮಟ್ಟದ ಸಾಹಿತ್ಯ ಸಂವಾದ ಆಯೋಜಿಸಿದೆ

ದಲಿತ ಚಳವಳಿ, ಮಹಿಳಾ ಚಳವಳಿ, ಕನ್ನಡ ಚಳವಳಿ ಹಾಗೂ ರೈತ, ಕಾರ್ಮಿಕ ಚಳವಳಿಯ ಆಶಯಗಳು ಅಭಿವ್ಯಕ್ತ-ಗೊಂಡ ವಿಧಾನವನ್ನು ಚರ್ಚಿಸಲಾ ಗುತ್ತದೆ. ಪ್ರತಿ ಗೋಷ್ಠಿಯಲ್ಲಿ ವಿಷಯ ಮಂಡನೆ ಬಳಿಕ ಸಂವಾದಕ್ಕೆ ಸಮಯ ನೀಡುವುದು ಕಾರ್ಯಕ್ರಮದ ಮುಖ್ಯ ಆಶಯವಾಗಿದೆ ಎಂದು ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ತಿಳಿಸಿದ್ದಾರೆ

ರಾಜ್ಯದ ವಿವಿಧ ಭಾಗಗಳ ವಿದ್ವಾಂಸರು ವಿಷಯ ಮಂಡಿಸುವರು. ಚಳವಳಿ ಪ್ರಜ್ಞೆಯನ್ನು ತಾತ್ವಿಕ ನೆಲೆಯಲ್ಲಿ ಜಾಗೃತವಾಗಿಸಲು ಸಂವಾದ ಏರ್ಪಡಿಸಿದೆ. ಈ ವರ್ಷ ಕೆಲ ಜಿಲ್ಲೆಗಳಲ್ಲಿ ರಚನಾತ್ಮಕ ಚಳವಳಿ ಕೇಂದ್ರಿತ ಕಾರ್ಯಕ್ರಮ ಏರ್ಪಡಿಸಲಾಗುವುದು ಎಂದಿದ್ದಾರೆ.

ಹರಿಕಥಾ ವಿದ್ವಾನ್ ಲಕ್ಷ್ಮಣದಾಸ್ ಕಾವ್ಯ ಗಾಯನದ ಮೂಲಕ ಜುಲೈ 27ರಂದು ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಆಸಕ್ತರು ವಿವರಗಳಿಗೆ ಬಂಡಾಯ ಸಾಹಿತ್ಯ ಸಂಘಟನೆ ಜಿಲ್ಲಾ ಸಂಚಾಲಕರಾದ ನಾಗಭೂಷಣ್ ( 9964852518) ಇಲ್ಲವೇ ಓ.ನಾಗರಾಜ್ (ಮೊಬೈಲ್ 9448659646) ಸಂಪರ್ಕಿಸಬಹುದು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

Download Eedina App Android / iOS

X