ಮೈಸೂರು | ಬಿಡದಿ ಟೌನ್‌ಶಿಪ್-ಗುಡುಮಾದನಹಳ್ಳಿ ನಿಮಾನ್ಸ್ ಯೋಜನೆ ಕೈಬಿಡದಿದ್ದರೆ ರಾಜ್ಯಾದ್ಯಂತ ಹೋರಾಟ: ಬಡಗಲಪುರ ನಾಗೇಂದ್ರ

Date:

ಬಿಡದಿ ಹೋಬಳಿಯಲ್ಲಿ ಬಿಡದಿ ಟೌನ್‌ಶಿಪ್ ನಿರ್ಮಾಣಕ್ಕಾಗಿ 9,640 ಎಕರೆ ಭೂಸ್ವಾಧೀನ ಮಾಡುವ ಸರ್ಕಾರದ ನಿರ್ಧಾರ ಹಾಗೂ ಮೈಸೂರು ತಾಲ್ಲೂಕಿನ ಗುಡುಮಾದನಹಳ್ಳಿಯಲ್ಲಿ ನಿಮಾನ್ಸ್ ಘಟಕ ನಿರ್ಮಾಣ ಪ್ರಸ್ತಾವವನ್ನು ಸರ್ಕಾರ ಕೂಡಲೇ ಕೈಬಿಡಬೇಕು. ಇಲ್ಲದಿದ್ದರೆ ಕರ್ನಾಟಕ ರಾಜ್ಯ ರೈತ ಸಂಘ ರಾಜ್ಯಾದ್ಯಂತ ಉಗ್ರ ಹೋರಾಟ ಆರಂಭಿಸಲಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಎಚ್ಚರಿಸಿದರು.

- Advertisement -

ಮೈಸೂರು ನಗರದ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಡದಿ ಹೋಬಳಿಯ ಬೈರಮಂಗಲ, ಕೆ.ಜಿ. ಗೊಲ್ಲರಪಾಳ್ಯ, ಅರಳಾಳುಸಂದ್ರ, ಬನ್ನಿಗಿರಿ, ಹೊಸೂರು, ಮಂಡಲಹಳ್ಳಿ, ಕೆಂಪಯ್ಯನಪಾಳ್ಯ ಹಾಗೂ ಒಡೆಯರಹಳ್ಳಿ ಗ್ರಾಮಗಳ ಫಲವತ್ತಾದ ಸುಮಾರು 9,640 ಎಕರೆ ಜಮೀನನ್ನು ವಶಕ್ಕೆ ಪಡೆಯಲು ಸರ್ಕಾರ ಮುಂದಾಗಿದೆ. ಇದು ರೈತರ ಬದುಕಿನ ಮೇಲಿನ ನೇರ ದಾಳಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಇದೇ ರೀತಿ ಮೈಸೂರು ತಾಲ್ಲೂಕಿನ ಗುಡುಮಾದನಹಳ್ಳಿಯಲ್ಲಿಯೂ ನಿಮಾನ್ಸ್ ಘಟಕ ನಿರ್ಮಾಣದ ಹೆಸರಿನಲ್ಲಿ ರೈತರನ್ನು ಒಕ್ಕಲೆಬ್ಬಿಸಲು ಸರ್ಕಾರ ಮುಂದಾಗಿದೆ. ಅಭಿವೃದ್ಧಿಯ ಹೆಸರಿನಲ್ಲಿ ಕೃಷಿಭೂಮಿಯನ್ನು ಕಬಳಿಸುವ ಕ್ರಮ ಸರಿಯಲ್ಲ ಎಂದು ಅವರು ಟೀಕಿಸಿದರು.

ಈ ಸುದ್ದಿ ಓದಿದ್ದೀರಾ?ಪಿರಿಯಾಪಟ್ಟಣ | ಸಿಡಿಲು ಬಡಿದು ಮಹಿಳೆ ಹಾಗೂ ಎರಡು ಹಸುಗಳ ದುರ್ಮರಣ

ಈ ವಿಚಾರವಾಗಿ ಮುಂದಿನ ಹೋರಾಟದ ರೂಪುರೇಷೆ ಕುರಿತು ಚರ್ಚಿಸಲು ಮೇ 18ರಂದು ಬೆಂಗಳೂರಿನಲ್ಲಿ “ಸಂಯುಕ್ತ ಹೋರಾಟ-ಕರ್ನಾಟಕ” ಕೋರ್ ಸಮಿತಿ ಸಭೆ ನಡೆಯಲಿದೆ. ಸಭೆಯಲ್ಲಿ ರಾಜ್ಯಮಟ್ಟದ ಹೋರಾಟದ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ವಿಶೇಷ ಸುದ್ದಿ ಓದಿದ್ದೀರಾ:ಆಶಾ ಕಾರ್ಯಕರ್ತೆಯರಿಗೆ ₹264.14 ಕೋಟಿ ಬಾಕಿ ಪ್ರೋತ್ಸಾಹ ಧನ ಬಿಡುಗಡೆ: ಬಗೆಹರಿಯದ ʼಆಶಾ ಸಾಫ್ಟ್ʼ ತಾಂತ್ರಿಕ ದೋಷ

ಪತ್ರಿಕಾಗೋಷ್ಠಿಯಲ್ಲಿ ರೈತ ಸಂಘದ ಪದಾಧಿಕಾರಿಗಳಾದ ಹೊಸಕೋಟೆ ಬಸವರಾಜು, ನೇತ್ರಾವತಿ, ಪಿ. ಮರಂಕಯ್ಯ, ಮಂಡಕಳ್ಳಿ ಮಹೇಶ್ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...