ಬೀದರ್ | ಅಂಬೇಡ್ಕರ್ ಕುರಿತು ಹೇಳಿಕೆ : ಅಮಿತ್ ಶಾ ವಜಾಕ್ಕೆ ಕಾಂಗ್ರೆಸ್ ಆಗ್ರಹ

Date:

ಡಾ.ಬಿ.ಆರ್.ಅಂಬೇಡ್ಕರ್ ಅವರ ಕುರಿತು ಹೇಳಿಕೆ ನೀಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಭಾಲ್ಕಿ ತಾಲ್ಲೂಕು ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು ಆಗ್ರಹಿಸಿದರು.

- Advertisement -

ಪಟ್ಟಣದ ಡಾ.ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ನೂರಾರು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಸಚಿವ ಅಮಿತ್ ಶಾ ಹಾಗೂ ಬಿಜೆಪಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಕುರಿತು ರಾಷ್ಟ್ರಪತಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಉಪ ತಹಶೀಲ್ದಾರ್ ಶಿವಾನಂದ ಬಿರಾದಾರ ಅವರಿಗೆ ಸಲ್ಲಿಸಿದರು.

‘ರಾಜ್ಯಸಭೆಯಲ್ಲಿ ಡಿ.18ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮ್ಮ ಭಾಷಣದಲ್ಲಿ “ಅಂಬೇಡ್ಕರ್, ಅಂಬೇಡ್ಕರ್, ಅಂಬೇಡ್ಕರ್ ಅನ್ನೋದು ಈಗ ಕೆಲವರಿಗೆ ಫ್ಯಾಷನ್ ಆಗಿದೆ. ಇಷ್ಟು ಬಾರಿ ದೇವರ ನಾಮ ಜಪಿಸಿದರೆ ಏಳೇಳು ಜನ್ಮಕೂ ಸ್ವರ್ಗ ಪ್ರಾಪ್ತಿಯಾಗುತ್ತದೆ” ಎಂದು ಮಾತನಾಡಿ ಬಾಬಾ ಸಾಹೇಬ್‌ರಿಗೆ ಘೋರ ಅವಮಾನ ಮಾಡಿದ್ದಾರೆ. ಇದು ಸಂವಿಧಾನಕ್ಕೂ ಪರೋಕ್ಷವಾಗಿ ಅವಮಾನ ಮಾಡಿದಂತೆ ಆಗಿದೆ’ ಎಂದು ತೀವ್ರವಾಗಿ ಖಂಡಿಸಿದರು.

ವಿಶ್ವಕ್ಕೇ ಪ್ರಜಾಪ್ರಭುತ್ವ ಮತ್ತು ಸಂಸತ್ತಿನ ಪರಿಕಲ್ಪನೆಯನ್ನು ಕೊಟ್ಟದ್ದು ಭಾರತ. ಸರ್ವರಿಗೂ ಸಮಪಾಲು ದೊರೆಯಲು, ಸಾಮಾಜಿಕ ನ್ಯಾಯ ಸಿಗಲು ಸಂವಿಧಾನವೇ ಕಾರಣ ಎಂಬುದು ನಿರ್ವಿವಾದ. ಅಂಬೇಡ್ಕರ್ ರಚಿತ ಲಿಖಿತ ಸಂವಿಧಾನ ದೇಶಕ್ಕೆ ಜೀವನಧರ್ಮವಾಗಿದೆ. ಆದರೆ, ಸಚಿವ ಅಮಿತ್ ಶಾ ಡಾ.ಅಂಬೇಡ್ಕರ್ ಮತ್ತು ಅವರ ಅಭಿಮಾನಿಗಳಿಗೆ ಅವಮಾನ ಮಾಡಲೆಂದೇ ಉದ್ದೇಶಪೂರ್ವಕವಾಗಿ ಅವಹೇಳನಕಾರಿ ಮಾತನಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶತ ಶತಮಾನಗಳಿಂದ ಅಸ್ಪೃಶ್ಯತೆಯ ನೋವುಂಡು, ಸಾಮಾಜಿಕ ನ್ಯಾಯ, ಶಿಕ್ಷಣ, ಆರೋಗ್ಯ, ಉದ್ಯೋಗ ಸೇರಿದಂತೆ ಸಾಮಾಜಿಕ ನ್ಯಾಯ ದೊರಕಿಸಿ ಕೊಟ್ಟ ಡಾ.ಅಂಬೇಡ್ಕರ್ ಅವರನ್ನು ಅವಮಾನಿಸಿದ ಅಮಿತ್ ಶಾ ಸಚಿವರಾಗಿ ಮುಂದುವರಿಯುವ ಯಾವ ನೈತಿಕತೆಯೂ ಇಲ್ಲ. ಕೂಡಲೇ ಅವರನ್ನು ತಮ್ಮ ಸ್ಥಾನದಿಂದ ವಜಾಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ₹75 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಭೂ ಮಾಪಕ

ಪ್ರತಿಭಟನೆಯಲ್ಲಿ ಜೈಪಾಲ್ ಬೋರಾಳೆ, ಪ್ರಕಾಶ್ ಮಾಶೆಟ್ಟೆ, ಪ್ರಶಾಂತ್ ಕೊಟಗೇರಾ, ವೈಜಿನಾಥ ಸಿರ್ಸಿ, ನಸೀರ್ ಆಹ್ಮದ್, ಧನರಾಜ ಕುಂದೆ, ರಾಜಕುಮಾರ್ ಬಾವಗೆ, ಕೈಲಾಸ್ ಭಾವಿಕಟ್ಟೆ, ಲೋಕೇಶ್ ಭೂರೆ, ವಿಲಾಸ್ ಮೋರೆ, ಕಾಶಿನಾಥ್ ಲದ್ದೆ, ಭಾಸ್ಕರ್, ಸುನೀಲ್ ವಾಂಜರೆ, ವಿಜಯಕುಮಾರ್, ಶಿವಕುಮಾರ್ ಮೇತ್ರೆ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು, ವಿವಿಧ ಸಂಘಟನೆಗಳ ಪ್ರಮುಖರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಬೀದರ್‌ | ಪಿಸ್ತೂಲ್‌ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು: ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ದಂಧೆಕೋರರನ್ನು...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...