ಯಾದಗಿರಿ | ಹಾಲಿಗೆ ವಿಷ ಬೆರೆಸಿ ಐದು ತಿಂಗಳ ಮಗು ಹತ್ಯೆ

Date:

  • ಯಾದಗಿರಿ ಜಿಲ್ಲೆ ವಡಗೇರಾ ತಾಲೂಕಿನ ಬಬಲಾದ ಗ್ರಾಮದಲ್ಲಿ ಘಟನೆ
  • ಬಾಟಲಿಯಲ್ಲಿ ವಿಷ ಬೆರಸಿದ ಹಾಲು ಕುಡಿಸಿ ಮಗುವಿಗೆ ಕೊಂದ ಮಲತಾಯಿ

ಮಲತಾಯಿಯೊಬ್ಬರು ಐದು ತಿಂಗಳ ಕಂದಮ್ಮಳಿಗೆ ವಿಷ ಬೆರೆಸಿದ ಹಾಲು ಕುಡಿಸಿ ಹತ್ಯೆಗೈದಿರುವ ಹೃದಯವಿದ್ರಾವಕ ಘಟನೆ ಯಾದಗಿರಿ ಜಿಲ್ಲೆ ವಡಗೇರಾ ತಾಲೂಕಿನ ಬಬಲಾದ ಗ್ರಾಮದಲ್ಲಿ ನಡೆದಿದೆ. ಆಸ್ತಿಗಾಗಿ ಈ ಕೃತ್ಯ ಎಸಗಿದ್ದಾರೆಂದು ಆರೋಪಿಸಲಾಗಿದೆ.

ಗ್ರಾಮದ ಸಿದ್ದಪ್ಪ ಚಿಟ್ಟಿಗೇರಿ ಅವರ ಮೊದಲನೇ ಹೆಂಡತಿಯ ಪುತ್ರಿ ಸಂಗೀತಾ ಸಾವನಪ್ಪಿದ ಮಗು. ಎರಡನೇ ಹೆಂಡತಿ ದೇವಮ್ಮ ಎಂಬಾಕೆ ಮಗುವನ್ನು ಕೊಂದಿದ್ದಾಳೆ ಎಂದು ತಿಳಿದುಬಂದಿದೆ.

ಸೆ.30 ಶ್ರೀದೇವಿ ತನ್ನ ಮಗು ಸಂಗೀತಾಳಿಗೆ ಹಾಲುಣಿಸುವಾಗ ಬಂದ ದೇವಮ್ಮ, ಒತ್ತಾಯದಿಂದ ಮಗುವಿಗೆ ನಾನು ಹಾಲುಣಿಸುವೆ ಎಂದು ಕೋಣೆ ಒಳಗೆ ಕರೆದುಕೊಂಡು ಹೋಗಿ ಬಾಗಿಲು ಮುಚ್ಚಿ ಬಾಟಲಿಯಲ್ಲಿ ವಿಷ ಬೆರಸಿ ಕೂಸಿಗೆ ಹಾಲು ಕುಡಿಸಿದ್ದಾಳೆ. ನಾಲ್ಕು ಗಂಟೆ ನಂತರ ಮಗುವಿನ ಬಾಯಲ್ಲಿ ನೊರೆ ಬಂದಿದ್ದು ಗಾಬರಿಯಾದ ಪೋಷಕರು ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯೆ ಸಾವನಪ್ಪಿದ್ದಾಳೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಏನಿದು ಘಟನೆ:

ಸಿದ್ದಪ್ಪ ಚಿಟ್ಟಿಗೇರಿ ಅವರು ಹನ್ನೊಂದು ವರ್ಷಗಳ ಹಿಂದೆ ಶ್ರೀದೇವಿ ಜೊತೆಗೆ ಮದುವೆಯಾಗಿದ್ದರು, ಆದರೆ ಮಕ್ಕಳಾಗಲಿಲ್ಲ ಎಂಬ ಕಾರಣಕ್ಕೆ ಏಳು ವರ್ಷಗಳ ಹಿಂದೆ ದೇವಮ್ಮ ಅವರೊಂದಿಗೆ ಎರಡನೇ ಮದುವೆಯಾದರು. ನಂತರ ಶ್ರೀದೇವಿ ತವರು ಮನೆಯಲ್ಲಿ ವಾಸವಿದ್ದರು. ರಾಜಿ ಸಂಧಾನದ ಮೂಲಕ ಶ್ರೀದೇವಿ ಮೂರು ವರ್ಷಗಳ ಹಿಂದೆ ಮತ್ತೆ ಗಂಡನ ಮನೆಗೆ ಬಂದು ನೆಲೆಸಿದ್ದಳು, ಐದು ತಿಂಗಳ ಹಿಂದೆ ಹೆಣ್ಣು ಮಗು ಜನಿಸಿತ್ತು.

ಈ ಸುದ್ದಿ ಓದಿದ್ದೀರಾ ? ಬೀದರ್ | ಪೊಲೀಸ್ ಪೇದೆ ಆತ್ಮಹತ್ಯೆ

“ಸಿದ್ದಪ್ಪನ ಎರಡನೇ ಪತ್ನಿ ದೇವಮ್ಮಳಿಗೂ ನಾಲ್ಕು ಜನ ಮಕ್ಕಳಿದ್ದಾರೆ. ಹೀಗಾಗಿ ಪತಿಯ ಆಸ್ತಿಯಲ್ಲಿ ಸವತಿಯ ಮಗಳಿಗೂ ಆಸ್ತಿ ಕೊಡಬೇಕಾಗುತ್ತದೆ ಎಂಬ ಕಾರಣಕ್ಕೆ ಐದು ತಿಂಗಳ ಮಗುವಿಗೆ ಕೊಲೆ ಮಾಡಿದ್ದಾಳೆ. ಈ ಬಗ್ಗೆ ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದೇವೆ, ಮಗುವನ್ನು ಕೊಂದ ದೇವಮ್ಮಗೆ ಬಂಧಿಸಿ ತನಿಖೆ ಮುಂದುವರೆಸಿದ್ದೇವೆ” ಎಂದು ಪಿಎಸ್‌ಐ ಜಯಶ್ರೀ ಅವರು ಈದಿನ.ಕಾಮ್‌ ದೊಂದಿಗೆ ಮಾತನಾಡಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರಿನಲ್ಲಿ ನೀರು ಸೋರಿಕೆ ಪತ್ತೆ ಹಚ್ಚಲಿವೆ ರೊಬೋಟ್‌ಗಳು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸದ್ಯ ನೀರಿನ ಸಮಸ್ಯೆ ತಲೆದೂರಿದೆ. ಈ ಹಿನ್ನೆಲೆ,...

ದಾವಣಗೆರೆ | ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಆಗ್ರಹ

ದಾವಣಗೆರೆಯಲ್ಲಿ ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ಹಲವಾರು ವರ್ಷಗಳಿಂದ ಬೇಡಿಕೆ ಇಡಲಾಗಿದೆ. ಸರ್ಕಾರ...

ಕಲಬುರಗಿ | ‘ಅಂಬೇಡ್ಕರ್ ಮತ್ತು ಗಾಂಧೀಜಿ – ಒಂದು ನದಿಯ ಎರಡು ದಡಗಳು’

ಬಾಬಾ ಸಾಹೇಬ್ ಅವರ 133ನೇ ಜಯಂತಿಯ ದಿನದಂದ ನಾವು ಹೆಚ್ಚೆಚ್ಚು ಎಷ್ಟೇ...

ಗದಗ | ದೊಡ್ಡೂರು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರ ಗ್ರಾಮದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್...