ಚಿಕ್ಕಬಳ್ಳಾಪುರ ನಗರಸಭೆಯ ಯುಜಿಡಿ ಸಮಸ್ಯೆಗೆ ಪರಿಹಾರ ಹುಡುಕುವತ್ತ ಹೆಜ್ಜೆ: ನಾಗರಾಜ್ ಜೆ

Date:

ಚಿಕ್ಕಬಳ್ಳಾಪುರ ನಗರಸಭೆಗೂ ಯುಜಿಡಿ ಸಮಸ್ಯೆಗೂ ಬಿಡಿಸಲಾರದ ನಂಟು. ಇಂತಹ ಗಂಭೀರ ಸಮಸ್ಯೆ ಪರಿಹಾರಕ್ಕೆ ನಗರಸಭೆ ಅಧಿಕಾರಿಗಳು ಜನಪ್ರತಿನಿಧಿಗಳು ನಿರಂತರವಾಗಿ ಶ್ರಮಿಸುತ್ತಿದ್ದರೂ ಅದಕ್ಕೆ ಶಾಶ್ವತ ಪರಿಹಾರ ಎನ್ನುವುದೇ ಸಿಕ್ಕಿಲ್ಲ. ಇಂತಹ ಸಮಯದಲ್ಲಿ ಕನಕಪುರ ಮೂಲಕ ಸಂಶೋಧನಾ ಸಂಸ್ಥೆಯೊಂದು ಇದಕ್ಕೆ ಪರಿಹಾರ ಹುಡುಕುವತ್ತ ಹೆಜ್ಜೆ ಹಾಕಿದೆ ಎಂದು ನಗರಸಭೆ ಉಪಾಧ್ಯಕ್ಷ ನಾಗರಾಜ್ ಜೆ ಹೇಳಿದ್ದಾರೆ.

- Advertisement -

ಈ ಕುರಿತು ಹೇಳಿಕೆ ನೀಡಿರುವ ಅವರು, ಬುಧವಾರ ಚಿಕ್ಕಬಳ್ಳಾಪುರ ನಗರಸಭೆಗೆ ಕನಕಪುರ ಮೂಲದ ಸಂಶೋಧನಾ ಸಂಸ್ಥೆಯ ಅಧಿಕಾರಿಗಳು ಭೇಟಿ ನೀಡಿ, ಇಲ್ಲಿ ಯುಜಿಡಿ ಸಮಸ್ಯೆಗೆ ಬಳಸುತ್ತಿರುವ ಸಾಧನಗಳ ಬಗ್ಗೆ ಮಾಹಿತಿ ಪಡೆದರು. ಪ್ರಸ್ತುತ ಚಿಕ್ಕಬಳ್ಳಾಪುರ ನಗರಸಭೆಯಲ್ಲಿ ಸೆಕ್ಕಿಂಗ್, ಜೆಟ್ಟಿಂಗ್ ಮಷಿನ್ ಜತೆಗೆ ಶಿಲ್ಟ್ ಸ್ವಚ್ಛಗೊಳಿಸುವ ಯಂತ್ರಗಳ ಮೂಲಕ ಕೆಲಸ ನಿರ್ವಹಿಸುತ್ತಿದ್ದು, ಈ ಸಂಶೋಧನಾ ಸಂಸ್ಥೆಯವರು ರೋಬೋಟ್ ಮೂಲಕ ಸಮಸ್ಯೆಗೆ ಪರಿಹಾರ ಹುಡುಕಲು ಮುಂದಾಗಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಪೌರಕಾರ್ಮಿಕರು ದೇಶ ಕಾಯುವ ಸೈನಿಕರಿಗೆ ಸಮನಾಗಿ ಶ್ರಮಿಸುತ್ತಿದ್ದಾರೆ. ಸೈನಿಕರು ಗಡಿಯಲ್ಲಿ ಶತೃಸೈನಿಕರ ಗುಂಡಿಗೆ ಎದೆಯೊಡ್ಡಿದರೆ, ಪೌರಕಾರ್ಮಿಕರು ನಗರಗಳಲ್ಲಿ ಆರೋಗ್ಯವನ್ನು ಪಣಕ್ಕಿಟ್ಟು, ನಾಗರಿಕರ ಆರೋಗ್ಯ ಕಾಪಾಡಲು ಶ್ರಮಿಸುತ್ತಾರೆ. ಹಾಗಾಗಿಯೇ ಅವರು ಸೇವೆ ಪೂರ್ಣಗೊಳ್ಳುವ ಮೊದಲೇ ನಿಧನರಾಗುತ್ತಿರುವವರ ಸಂಖ್ಯೆ ಹೆಚ್ಚು. ಅಲ್ಲದೆ ಚರ್ಮರೋಗ ಸೇರಿದಂತೆ ಇತರೆ ಕಾಯಿಲೆಗಳಿಂದ ಬಳಲುವವರ ಸಂಖ್ಯೆಯೂ ಹೆಚ್ಚು. ಇಂತಹ ಸಮಸ್ಯೆಗಳಿಂದ ಪೌರಕಾರ್ಮಿಕರನ್ನು ಕಾಪಾಡಲು ಈ ಸಂಸ್ಥೆಯ ಉದ್ಧೇಶ ತುಂಬಾ ಉತ್ತಮವಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಬಳ್ಳಾರಿ | ಒಳಮೀಸಲಾತಿಯಲ್ಲಿ ಅನ್ಯಾಯ; ಅ.2ರಂದು ಅಲೆಮಾರಿಗಳಿಂದ ‘ಬುತ್ತಿ ಕಟ್ಟಿ ದೆಹಲಿಗೆ ಹತ್ತಿ’ ಆಂದೋಲನ

“ರೋಬೋಟಿಕ್ ತಂತ್ರಜ್ಞಾನದ ಮೂಲಕ ಯುಜಿಡಿ ಸ್ವಚ್ಛಗೊಳಿಸುವುದರಿಂದ ಪೌರಕಾರ್ಮಿಕರು ಮ್ಯಾನ್‌ಹೋಲ್ ಒಳಗೆ ಇಳಿದು ಕೆಲಸ ಮಾಡುವುದು ತಪ್ಪಲಿದೆ. ಇದರಿಂದ ಪೌರಕಾರ್ಮಿಕರ ಸಮಸ್ಯೆಗೆ ಸೂಕ್ತ ಪರಿಹಾರ ದೊರೆಯಲಿದೆ. ಹಾಗಾಗಿ ಈ ತಂತ್ರಜ್ಞಾನದ ಮೂಲಕ ಪೌರಕಾರ್ಮಿಕರ ಆರೋಗ್ಯ ಕಾಪಾಡಲು ಸಹಕಾರಿಯಾಗಲಿದೆ” ಎಂದು ತಿಳಿಸಿದರು.

ಪೌರಕಾರ್ಮಿಕರ ಆರೋಗ್ಯ ತಪಾಸಣೆಯನ್ನೂ ಮಾಡಲಾಯಿತು. ಇದೇ ಸಂದರ್ಭದಲ್ಲಿ ನಗರಸಭೆ ಪರಿಸರ ಅಭಿಯಂತರ ಉಮಾಶಂಕರ್ ಮತ್ತು ನಗರಸಭೆ ಉಪಾಧ್ಯಕ್ಷ ನಾಗರಾಜ್ ಅವರು ಆರೋಗ್ಯ ತಪಾಸಣೆ ಮಾಡಿಸಿಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ದೇವಸ್ಥಾನ ಕಟ್ಟೆ ಮೇಲೆ ಕುಳಿತಿದ್ದಕ್ಕೆ ಹಲ್ಲೆ ಅರೋಪ: ಐವರ ವಿರುದ್ಧ ಪ್ರಕರಣ ದಾಖಲು

ಲಿಂಗಸುಗೂರು ತಾಲೂಕಿನ ಈಚನಾಳ ಗ್ರಾಮದಲ್ಲಿ ಗದ್ದೆಮ್ಮ ದೇವಸ್ಥಾನದ ಕಟ್ಟೆ ಮೇಲೆ ಕುಳಿತಿದ್ದ...

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...