ಕೋಲಾರ | ಪತ್ರಕರ್ತರಿಗೆ ಸೂರು ಕಲ್ಪಿಸಲು ಕ್ರಮ: ಡಿಸಿ ಡಾ.ಎಂ.ಆರ್. ರವಿ ಭರವಸೆ

Date:

ಜಿಲ್ಲೆಯ ಪತ್ರಕರ್ತರಿಗೆ ಸೂರು ಕಲ್ಪಿಸುವ ಉದ್ದೇಶದಿಂದ ಸರ್ಕಾರದಿಂದ ಜಮೀನು ಮಂಜೂರು ಮಾಡುವ ಸಾಧ್ಯತೆಗಳ ಪರಿಶೀಲನೆ ನಡೆಸುವುದರ ಜೊತೆಗೆ, ಕೆಯುಡಿಎ ಸೇರಿದಂತೆ ವಿವಿಧ ಪರ್ಯಾಯ ಮಾರ್ಗಗಳ ಮೂಲಕವೂ ನಿವೇಶನ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಭರವಸೆ ನೀಡಿದರು.

- Advertisement -

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ವಿವಿಧೋದ್ದೇಶ ಸಹಕಾರ ಸಂಘದ ಆಶ್ರಯದಲ್ಲಿ ಕೋಲಾರ ನಗರ ಸುತ್ತಮುತ್ತ ಪತ್ರಕರ್ತರಿಗೆ ಮನೆ ನಿರ್ಮಾಣಕ್ಕೆ ಅಗತ್ಯವಾದ 5 ಎಕರೆ ಜಮೀನು ಮಂಜೂರು ಮಾಡುವಂತೆ ಸಲ್ಲಿಸಿದ ಮನವಿಗೆ ಸ್ಪಂದಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಸರ್ಕಾರಿ ಜಮೀನು ಮಂಜೂರಾತಿಗೆ ಸಂಬಂಧಿಸಿದಂತೆ ಕಾನೂನುಬದ್ಧ ಅವಕಾಶಗಳ ಪರಿಶೀಲನೆ ನಡೆಸಲಾಗುವುದು. ಅದರ ಜೊತೆಗೆ ಪರ್ಯಾಯ ಮಾರ್ಗಗಳ ಮೂಲಕವೂ ನಿವೇಶನಗಳನ್ನು ಪಡೆದುಕೊಳ್ಳಲು ಪ್ರಯತ್ನಿಸಬೇಕು ಎಂದು ಡಿಸಿಯವರು ಸಲಹೆ ನೀಡಿದರು.

ಮೈಸೂರಿನಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಪತ್ರಕರ್ತರಿಗೆ ನಿವೇಶನ ಒದಗಿಸಿರುವ ಮಾದರಿಯನ್ನು ಉಲ್ಲೇಖಿಸಿದ ಅವರು, ಕೋಲಾರದಲ್ಲಿಯೂ ಅಂಥ ವ್ಯವಸ್ಥೆ ಸಾಧ್ಯವಿದೆಯೇ ಎಂಬುದನ್ನು ಪರಿಶೀಲಿಸಲಾಗುವುದು ಎಂದರು.

ಈ ವೇಳೆ ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷ ಕೆ.ಎಸ್. ಗಣೇಶ್ ಮನವಿ ಸಲ್ಲಿಸಿ ಮಾತನಾಡಿ, ಜಿಲ್ಲೆಯ ಅನೇಕ ಪತ್ರಕರ್ತರು ಸ್ವಂತ ಮನೆ ಇಲ್ಲದೆ ಬಾಡಿಗೆ ಮನೆಗಳಲ್ಲಿ ಜೀವನ ಸಾಗಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಜಿಲ್ಲಾಡಳಿತ 5 ಎಕರೆ ಜಮೀನು ನೀಡಿದಲ್ಲಿ, ಸಹಕಾರ ಸಂಘವೇ ನಿವೇಶನಗಳನ್ನು ಅಭಿವೃದ್ಧಿಪಡಿಸಿ ಅರ್ಹ ಪತ್ರಕರ್ತರಿಗೆ ಹಂಚಿಕೆ ಮಾಡಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು, ಸರ್ಕಾರಿ ಜಮೀನು ನೀಡಲು ಅವಕಾಶವಿದ್ದಲ್ಲಿ ಪರಿಶೀಲಿಸಿ ಕ್ರಮವಹಿಸಲಾಗುವುದು ಎಂದು ತಿಳಿಸಿದರು. ಜೊತೆಗೆ ಖಾಸಗಿ ಸಹಭಾಗಿತ್ವ, ನಗರಾಭಿವೃದ್ಧಿ ಪ್ರಾಧಿಕಾರ, ನಗರಸಭೆ ಸೇರಿದಂತೆ ವಿವಿಧ ಮೂಲಗಳಿಂದಲೂ ನಿವೇಶನಗಳನ್ನು ಪಡೆಯುವ ಸಾಧ್ಯತೆಗಳ ಕುರಿತು ಚಿಂತನೆ ನಡೆಸುವಂತೆ ಸಲಹೆ ನೀಡಿದರು.

ನಗರದ ಮಧ್ಯಭಾಗದಲ್ಲಿಯೂ ಪತ್ರಕರ್ತರ ಸಹಕಾರ ಸಂಘಕ್ಕೆ ನಗರಸಭೆಯಿಂದ ನಿವೇಶನ ಪಡೆಯುವ ಅವಕಾಶಗಳಿದ್ದು, ಈ ಸಂಬಂಧವೂ ಪರಿಶೀಲನೆ ನಡೆಸಲಾಗುವುದು ಎಂದು ಡಿಸಿಯವರು ಹೇಳಿದರು.

ಇದನ್ನು ಓದಿದ್ದೀರಾ..? ಚಿಕ್ಕಬಳ್ಳಾಪುರ | ದ್ರಾಕ್ಷಿಗೆ ಬಂಪರ್ ಬೆಲೆ-ರೈತರ ಮೊಗದಲ್ಲಿ ಹರ್ಷ

ಈ ಸಂದರ್ಭದಲ್ಲಿ ಸಹಕಾರ ಸಂಘದ ಉಪಾಧ್ಯಕ್ಷ ಅಬ್ಬಣಿ ಶಂಕರ್, ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಎ.ಜಿ. ಸುರೇಶ್‌ಕುಮಾರ್, ಖಜಾಂಚಿ ರಾಜೇಂದ್ರ ಸಿಂಹ, ಉಪಾಧ್ಯಕ್ಷ ರವಿಕುಮಾರ್, ಕಾರ್ಯದರ್ಶಿ ಷಮ್ಬರ್ ಸೇರಿದಂತೆ ಪತ್ರಕರ್ತರಾದ ಚಾಂದ್‌ಪಾಷ, ಸಿ.ವಿ. ನಾಗರಾಜ್, ಬಾಲನ್, ಮುಳಬಾಗಿಲು ನಾಗರಾಜಯ್ಯ, ಶಬ್ಬೀರ್ ಅಹ್ಮದ್, ಸತೀಶ್, ಶಿವಕುಮಾರ್, ಮದನ್, ವಿನೋದ್, ಕೋಲಾರ ನ್ಯೂಸ್ ಚಂದ್ರು, ಶ್ರೀಕಾಂತ್ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...

ಕಲಬುರಗಿ | ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ...

ಗದಗ | ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಹೋರಾಟ: ಹನಮಂತ ಕಲ್ಮನಿ ಎಚ್ಚರಿಕೆ

"ಅಕ್ಟೋಬರ್ ಮೊದಲ ವಾರದೊಳಗೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ...

ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ: ಎಸ್‌ಐಆರ್ ಸ್ಥಗಿತಕ್ಕೆ ಸಿಪಿಐ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯ...