ಕಲಬುರಗಿ | ಶಾಸಕ ಅವಿನಾಶ್‌ ಜಾಧವ್‌ ವಾಹನಗಳ ಮೇಲೆ ಕಲ್ಲು ತೂರಾಟ

Date:

  • ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಿಲ್ಲ ಎಂದು ಆಕ್ರೋಶ
  • ಚುನಾವಣೆ ಪ್ರಚಾರಕ್ಕೆ ತೆರಳಿದ್ದ ವೇಳೆ ಗ್ರಾಮಸ್ಥರಿಂದ ಕಲ್ಲು ತೂರಾಟ

ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ್‌ ಜಾಧವ್‌ ಪುತ್ರ ಮತ್ತು ಚಿಂಚೋಳಿ ಕ್ಷೇತ್ರದ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಡಾ. ಅವಿನಾಶ್‌ ಜಾಧವ್‌ ಅವರ ವಾಹನಗಳ ಮೇಲೆ ಶನಿವಾರ ರಾತ್ರಿ ಕಲ್ಲು ತೂರಾಟ ನಡೆದಿದೆ.

- Advertisement -

ಚಿಂಚೋಳಿ ತಾಲೂಕಿನ ಚಂದನಕೆರಾ ಗ್ರಾಮಕ್ಕೆ ಚುನಾವಣೆ ಪ್ರಚಾರಕ್ಕೆ ತೆರಳಿರುವ ವೇಳೆ ಶಾಸಕ ಅವಿನಾಶ್‌ ಜಾಧವ್‌ ಮತ್ತು ಸಂಗಡಿಗರು ಹಾಗೂ ಬೆಂಬಲಿಗರ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಚುನಾವಣೆ ಪ್ರಚಾರಕ್ಕೆ ತೆರಳಿದ್ದ ವೇಳೆ ಚಂದನಕೆರಾ ಗ್ರಾಮದಲ್ಲಿ ಡಾ. ಬಿ ಆರ್​​ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿಲ್ಲಾ ಎಂಬ ಕಾರಣಕ್ಕೆ ಗ್ರಾಮಸ್ಥರು ಜಗಳ ತೆಗೆದಿದ್ದಾರೆ. ನಂತರ ಕಾರುಗಳ ಮೇಲೆ ಕಲ್ಲು ಎಸೆದು, ಡಾ. ಅವಿನಾಶ್ ಜಾಧವ್ ಮತ್ತು ಬೆಂಬಲಿಗರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಕಲಬುರಗಿ

“ಚುನಾವಣಾ ಪ್ರಚಾರ ಮುಗಿಸಿ ಗ್ರಾಮದ ಓಣಿಯಿಂದ ತೆರಳುವಾಗ ಕಾಂಗ್ರೆಸ್‌ ಕಾರ್ಯಕರ್ತರು ತನ್ನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ” ಎಂದು ಶಾಸಕ ಜಾಧವ್‌ ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೋದಿ ನೀಡಿದ ಆಫರ್‌ಗಳನ್ನೇ ತಿರಸ್ಕರಿಸಿದ ಜಗದೀಶ್ ಶೆಟ್ಟರ್!

ಈ ಹಿನ್ನೆಲೆ ತಡರಾತ್ರಿ ಚಂದನಕೇರಾ ಗ್ರಾಮಕ್ಕೆ ಆಗಮಿಸಿದ ಪೊಲೀಸರು, ಗ್ರಾಮದಲ್ಲಿ ಬಿಗಿ ಬಂದೋಬಸ್ತ್‌ ಕೈಗೊಂಡಿದ್ದಾರೆ. ತಡರಾತ್ರಿಯೇ ಪೊಲೀಸರು ಏಳು ಜನರನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಕಲಬುರಗಿ ಎಸ್ಪಿ ಇಶಾ ಪಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾಗೆಯೇ ಕಲಬುರಗಿ ಸಂಸದ ಡಾ. ಉಮೇಶ್ ಜಾಧವ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಘಟನೆಯಲ್ಲಿ ನಾಲ್ಕು ಮಂದಿಗೆ ಗಾಯಗಳಾಗಿವೆ. ವಾಹನಗಳ ಗಾಜು ಪುಡಿಪುಡಿ ಆಗಿವೆ ಎಂದು ಶಾಸಕರ ಬೆಂಬಲಿಗರು ತಿಳಿಸಿದ್ದಾರೆ. ಈ ಸಂಬಂಧ ರಟಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...