ಭಟ್ಕಳದಲ್ಲಿ ಗಣಪತಿ ವಿಸರ್ಜನೆ ವೇಳೆ ಮಸೀದಿ, ಮದರಸಾಕ್ಕೆ ಕಲ್ಲು ತೂರಾಟ ಆರೋಪ; ಪ್ರಕರಣ ದಾಖಲು

Date:

ಗಣಪತಿ ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ಮಸೀದಿ ಹಾಗೂ ಮದರಸಾಕ್ಕೆ ಕಲ್ಲು ತೂರಾಟ ನಡೆದಿರುವ ಘಟನೆ ಭಟ್ಕಳದಲ್ಲಿ ಬುಧವಾರ ರಾತ್ರಿ ನಡೆದಿದೆ. ಘಟನೆಯ ಬಳಿಕ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.

- Advertisement -

ಭಟ್ಕಳದ ಸಾರ್ವಜನಿಕ ಗಣೇಶೋತ್ಸವ ಸಮಿತಿ ತಲಾಂದ ವತಿಯಿಂದ ಬುಧವಾರ ರಾತ್ರಿ ಗಣೇಶ ವಿಸರ್ಜನಾ ಮೆರವಣಿಗೆ ಆಯೋಜಿಸಲಾಗಿತ್ತು. ಮೆರವಣಿಗೆಯು ಗುಳ್ಳೆ ರೈಲ್ವೆ ಬ್ರಿಡ್ಜ್ ದಾಟಿ ರೈಲ್ವೆ ಸ್ಟೇಷನ್ ರಸ್ತೆಯ ಮೂಲಕ ಸಾಗುತ್ತಿದ್ದ ಸಂದರ್ಭದಲ್ಲಿ ರಸ್ತೆಯ ಪಕ್ಕದಲ್ಲಿರುವ ಪ್ರಥಮ ಮಹಡಿಯ ಇಸ್ಮಾಯಿಲ್ ಸುನ್ನಿ ಜಾಮೀಯಾ ಮಸೀದಿ ಹಾಗೂ ನೆಲಮಹಡಿಯ ತಾಜುಸುನ್ನಾ ಅರೇಬಿಕ್ ಮದರಸಾಕ್ಕೆ ಕಲ್ಲುಗಳನ್ನು ಎಸೆಯಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಎಸ್‌ಐಆರ್‌: 65,248 ನೋಟಿಸ್‌; 18,904 ಪ್ರಕರಣಗಳ ವಿಚಾರಣೆ ಪೂರ್ಣ

ಕಲ್ಲು ತೂರಾಟದಿಂದ ಮಸೀದಿ ಮತ್ತು ಮದರಸಾದ ಕಿಟಕಿ ಗಾಜುಗಳಿಗೆ ಹಾನಿಯಾಗಿರುವುದಾಗಿ ಬಂದರು ರಸ್ತೆ 5ನೇ ಕ್ರಾಸ್ ನಿವಾಸಿ ಅಬ್ದುಲ್ ಅಲಿಂ (67) ಹಾಗೂ ಶಾಹುಲ್ ಅಮೀನ್ ಗವಾಯಿ ಅವರು ಭಟ್ಕಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕೃತ್ಯದಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದ್ದು, ವಿವಿಧ ಸಮುದಾಯಗಳ ನಡುವೆ ದ್ವೇಷ ಉಂಟುಮಾಡಿ ಶಾಂತಿ-ಸುವ್ಯವಸ್ಥೆಗೆ ಸಮಸ್ಯೆ ಸೃಷ್ಟಿಸುವ ಉದ್ದೇಶದಿಂದ ಕಲ್ಲು ತೂರಾಟ ನಡೆಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಘಟನೆಗೆ ಸಂಬಂಧಿಸಿದವರನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ದೂರುದಾರರು ಪೊಲೀಸರಿಗೆ ಮನವಿ ಮಾಡಿದ್ದಾರೆ. ಮಸೀದಿಗೆ ಕಲ್ಲು ತೂರಾಟ ನಡೆದಿರುವ ಮಾಹಿತಿ ಹರಡುತ್ತಿದ್ದಂತೆ ಮುಸ್ಲಿಂ ಸಮುದಾಯದ ನೂರಾರು ಮಂದಿ ಭಟ್ಕಳ ನಗರ ಪೊಲೀಸ್ ಠಾಣೆ ಎದುರು ಸೇರಿದರು. ಆರೋಪಿಗಳನ್ನು ಶೀಘ್ರ ಪತ್ತೆಹಚ್ಚಿ ಬಂಧಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ಈ ನಡುವೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಕೆಲ ಸದಸ್ಯರನ್ನು ಠಾಣೆಗೆ ಕರೆಸಿಕೊಂಡು ಪೊಲೀಸರು ವಿಚಾರಣೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಹಿನ್ನೆಲೆಯಲ್ಲಿ ಭಟ್ಕಳದಲ್ಲಿ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿ. ಕೃಷ್ಣಮೂರ್ತಿ ಹಾಗೂ ಎ.ಎಸ್.ಪಿ. ರಾನು ಗುಪ್ತ ಅವರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ಸಿಪಿಐ ದಿವಾಕರ ಪಿ.ಎಂ. ಮತ್ತು ಪಿಎಸ್‌ಐ ನವೀನ ನಾಯ್ಕ ನೇತೃತ್ವದಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಭಟ್ಕಳದಲ್ಲಿ ನಡೆದ ಘಟನೆ ಬಳಿಕ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಸಾರ್ವಜನಿಕರು ಶಾಂತಿ ಕಾಪಾಡಿ, ವದಂತಿಗಳಿಗೆ ಕಿವಿಗೊಡದೆ ಪೊಲೀಸರೊಂದಿಗೆ ಸಹಕರಿಸುವಂತೆ ಮನವಿ ಮಾಡಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​ಚಿಂತಾಮಣಿ | ಮಳೆ ಮುನ್ಸೂಚನೆ, ಕಲ್ಯಾಣ ಮಂಟಪದ ಅಭಾವ:ಸೆ.18ರ ಜೆಡಿಎಸ್ ಬೃಹತ್ ಸಮಾವೇಶ ಚಿಂತಾಮಣಿಗೆ ಸ್ಥಳಾಂತರ

ನಗರದ ಹೊರವಲಯದ ಜೆ.ಕೆ.ಭವನದಲ್ಲಿ ಇಂದು ತುರ್ತು ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ...

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...

ಉಡುಪಿ | ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು ಕ್ರಮ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ...