ಮೈಸೂರು | ಸಾವಿನಲ್ಲೂ ಸಂಪನ್ಮೂಲ ಕ್ರೂಡೀಕರಣ ಕೈಬಿಡಿ, ಜನ ಹಿತ ಕಾಪಾಡಿ : ಎಬಿಜಿಪಿ

Date:

ಅಖಿಲ ಭಾರತೀಯ ಗ್ರಾಹಕ ಪಂಚಾಯತಿ ಮೈಸೂರು ಘಟಕದ ವತಿಯಿಂದ ಮೈಸೂರು ಮಹಾನಗರ ಪಾಲಿಕೆಗೆ ಭೇಟಿ ನೀಡಿ ಆರೋಗ್ಯ ಅಧಿಕಾರಿ ಡಾ. ವೆಂಕಟೇಶ್ ಅವರಿಗೆ ಸಾವಿನಲ್ಲೂ ಸಂಪನ್ಮೂಲ ಕ್ರೂಡೀಕರಣ ಮಾಡುವುದನ್ನು ಕೈ ಬಿಟ್ಟು ಜನರ ಹಿತ ಕಾಪಾಡುವಂತೆ ಮನವಿ ಪತ್ರ ಸಲ್ಲಿಸಿದರು.

- Advertisement -

ಮೈಸೂರು ಬಡಾವಣೆಯ ನಾಗರೀಕರಿಗೆ ಮೂಲಭೂತ ಸೌಲಭ್ಯ ಜೊತೆಯಲ್ಲೆ ಜನನ ಮತ್ತು ಮರಣ ಸಂಧರ್ಭದಲ್ಲಿ ಅವಶ್ಯಕ ವ್ಯವಸ್ಥೆಯನ್ನ ಒದಗಿಸುವುದು ತೆರಿಗೆ ಸಂಗ್ರಹಿಸಿಸುವ ಮೈಸೂರು ಮಹಾನಗರ ಪಾಲಿಕೆ ಕರ್ತವ್ಯ. ಈಗಾಗಲೇ ಪ್ರತಿಯೊಂದು ಮನೆಯಿಂದ ವಾರ್ಷಿಕ ತೆರಿಗೆಯಲ್ಲಿ ₹150 ರೂಪಾಯಿಗಳ ಸೆಸ್ ಸ್ಮಶಾನ ನಿರ್ವಹಣೆಗೆಂದು ಸಂದಾಯ ಮಾಡಿಕೊಳ್ಳುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ನಗರಪಾಲಿಕೆ ಸ್ಮಶಾನದಲ್ಲಿ ನೀರಿನ ವ್ಯವಸ್ಥೆ, ವಿದ್ಯುತ್ ದೀಪ ಮತ್ತು ಸ್ವಚ್ಛತೆಯ ಬಗ್ಗೆ ಅಧಿಕಾರಿಗಳು ಭೇಟಿ ಮಾಡಿ ವರದಿ ಪಡೆದು ಅಭಿವೃದ್ಧಿಯ ಕೆಲಸಗಳು ಮಾಡದಿರುವುದು ಜನ ಸಾಮನ್ಯರ ಹಿಡಿ ಶಾಪಕ್ಕೆ ಕಾರಣವಾಗುತ್ತಿದೆ. ಸ್ಮಶಾನ ಅಭಿವೃದ್ಧಿ ಬಗ್ಗೆ ಚಿಂತಿಸದ ನಗರ ಪಾಲಿಕೆ ಜನನ, ಮರಣ ವಿಭಾಗದಲ್ಲಿ ಚಿತೆಯಲ್ಲಿ ಕಂತೆ ಕಂತೆ ಹೇಗೆ ಕಿತ್ತುಕೊಳ್ಳಬಹುದು ಎಂದು ಎಬಿಜಿಪಿ ಮುಖಂಡರು ಪ್ರಶ್ನಿಸಿದ್ದಾರೆ.

ಸ್ಮಶಾನಗಳಲ್ಲಿ ಹೆಣ ಸುಡಲು ( ಅಂತ್ಯ ಸಂಸ್ಕಾರ ) ಮಾಡಲು ₹500 ರೂಪಾಯಿಗಳನ್ನು ನಿಗಧಿಪಡಿಸಿರುವುದು ಮೈಸೂರಿಗರಿಗೆ ಆಗುತ್ತಿರುವ ಅನ್ಯಾಯ. ಸತ್ತವರ ಕುಟುಂಬದಿಂದಲೂ ಹಣ ಕೀಳುವ ಪರಿಸ್ಥಿತಿ ಪಾಲಿಕೆಯದ್ದು. ಯಾವ ಸೌಕರ್ಯ ಒದಗಿಸಲು ಸಾಧ್ಯ ಇಲ್ಲದೆ ಇದ್ದರು ವಸೂಲಿ ಮಾತ್ರ ನಿಲ್ಲುವುದಿಲ್ಲ.

ಜನ ಪ್ರತಿನಿಧಿಗಳೇ ಇಲ್ಲದ ನಗರಪಾಲಿಕೆಯಲ್ಲಿ ಅಧಿಕಾರಿಗಳ ದುರಾಲೋಚನೆ ಒಬ್ಬ ಬಡ ಸಾಮಾನ್ಯ ಕುಟುಂಬದ ಮೇಲೆ ಬರೆ ಹಾಕುವಂತಾಗಿದೆ. ಸಾವಿನಲ್ಲೂ ಸಂಪನ್ಮೂಲ ತೆಗೆದುಕೊಳ್ಳುತ್ತಿರುವುದು ನಗರ ಪಾಲಿಕೆಯ ಮಾನವೀಯತೆ ಹೀನ, ದುರಾಡಳಿತ, ಭ್ರಷ್ಟಾಚಾರದ ಕೈಗನ್ನಡಿಯಾಗಿದೆ. ಹಾಗಾಗಿ, ಈ ಕೂಡಲೇ ಮೈಸೂರು ಮಹಾನಗರಪಾಲಿಕೆಯ ಆಯುಕ್ತರು, ಜನನ ಮರಣ ವಿಭಾಗದ ಅಧಿಕಾರಿಗಳು ಇದರ ಬಗ್ಗೆ ಪರಿಶೀಲಿಸಿ, ಪರಿಗಣಿಸಿ ಜನರ ಹಿತಕ್ಕಾಗಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಅಖಿಲ ಭಾರತೀಯ ಪಂಚಾಯತ್ ಮೈಸೂರು ಘಟಕದ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?ಮೈಸೂರು | ಅಂಬೇಡ್ಕರ್ ಭಾವಚಿತ್ರಕ್ಕೆ ಕೆಸರೆರಚಿ ಅವಮಾನಿಸಿದ ಕಿಡಿಗೇಡಿಗಳು

ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕದ ಅಧ್ಯಕ್ಷ ಚಂದ್ರಶೇಖರ್, ಮಾಜಿ ನಗರ ಪಾಲಿಕೆ ಸದಸ್ಯ ಎಂ.ಡಿ. ಪಾರ್ಥಸಾರಥಿ, ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್, ನಿರೂಪಕ ಅಜಯ್ ಶಾಸ್ತ್ರಿ, ಎಸ್. ಎನ್. ರಾಜೇಶ್, ರವಿಚಂದ್ರ, ಶ್ರೀಧರ್ ಹಾಗೂ ಇನ್ನಿತರರು ಮನವಿ ಸಲ್ಲಿಸುವಾಗ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...