ಕೊಟ್ಟಿಗೆಯಲ್ಲಿದ್ದ ಕುರಿಗಳ ಮೇಲೆ ದಾಳಿ ನಡೆಸಿರುವ ಬೀದಿ ನಾಯಿಗಳು 6 ಕುರಿಗಳನ್ನು ಕಚ್ಚಿ ಸಾಯಿಸಿರುವ ಘಟನೆ ಸೋಮವಾರ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಗೂಳೂರು ಹೋಬಳಿಯ ಪಾರ್ವತಿಪುರ ತಾಂಡಾದ ಶಂಕರ್ ನಾಯ್ಕ್ ಎಂಬುವರು ಎಂದಿನಂತೆ ತಮ್ಮ ಕೊಟ್ಟಿಗೆಯಲ್ಲಿ ಕುರಿಗಳನ್ನು ಕೂಡಿದ್ದರು. ಸೋಮವಾರ ಬೆಳಗ್ಗೆ ಕೊಟ್ಟಿಗೆಯಲ್ಲಿದ್ದ ಕುರಿಗಳ ಮೇಲೆ ಸುಮಾರು 10ಕ್ಕೂ ಹೆಚ್ಚು ಬೀದಿ ನಾಯಿಗಳು ಏಕಾಏಕಿ ದಾಳಿ ನಡೆಸಿವೆ.

ಇದನ್ನೂ ಓದಿ : ಚಿಂತಾಮಣಿ | ಹಳೆ ವೈಷಮ್ಯ ಹಿನ್ನೆಲೆ: ದಂಪತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ವ್ಯಕ್ತಿ
ಈ ವೇಳೆ ಗಾಬರಿಗೊಂಡ ಕುರಿಗಳು ಚೆಲ್ಲಾಪಿಲ್ಲಿಯಾಗಿ ಓಡಿದ್ದು, ನಾಯಿಗಳು ಸಿಕ್ಕ ಸಿಕ್ಕ ಕುರಿಗಳನ್ನು ಕಚ್ಚಿ ಗಾಯಗೊಳಿಸಿದ್ದು, 6 ಕುರಿಗಳು ಸಾವನ್ನಪ್ಪಿವೆ. ಶಂಕರ್ ನಾಯ್ಕ್ ಕುರಿಗಳನ್ನೇ ನಂಬಿ ಜೀವನ ನಡೆಸುತ್ತಿದ್ದು, ಸೂಕ್ತ ಪರಿಹಾರ ನೀಡುವಂತೆ ಸರಕಾರಕ್ಕೆ ಮನವಿ ಮಾಡಿದ್ದಾರೆ.