ದಾವಣಗೆರೆ | ಗಾಂಜಾ ಮಾರಾಟ ಮತ್ತು ಸಂಚಾರಿ ನಿಯಮ ಉಲ್ಲಂಘನೆಗೆ ಕಠಿಣ ಕ್ರಮ: ಎಡಿಜಿಪಿ ಅಲೋಕ್‌ ಕುಮಾರ್‌

Date:

ರಾಜ್ಯದಲ್ಲಿ ಗಾಂಜಾ ಮಾರಾಟ ಪ್ರಕರಣಗಳನ್ನು ಸರ್ಕಾರ ಮತ್ತು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿವೆ. ಪ್ರಕರಣಗಳಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾ ನಿರೀಕ್ಷಕ (ತರಬೇತಿ) ಅಲೋಕ್ ಕುಮಾರ್ ತಿಳಿಸಿದರು.

ದಾವಣಗೆರೆ ಜಿಲ್ಲಾ ರಕ್ಷಣಾಧಿಕಾರಿ ಕಚೇರಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಗಾಂಜಾ ಮಾರಾಟ ಮತ್ತು ಸಂಚಾರಿ ನಿಯಮ ಪಾಲಿಸದೇ ಇರುವವರ ವಿರುದ್ಧ ಕಠೀಣ ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.

”ರಾಜ್ಯದಲ್ಲಿ ಗಾಂಜಾ ಮಾರಾಟವನ್ನು ಸರ್ಕಾರ ಮತ್ತು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದು, ಗಾಂಜಾಮಾರಟದ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ದಾವಣಗೆರೆಯಲ್ಲೂ ಕೆಲವು ನಿಗದಿತ ಭಾಗದಲ್ಲಿ, ಗಾಂಜಾ ಮಾರಾಟವಾಗುತ್ತಿದೆ. ಇದನ್ನು ಸಂಪೂರ್ಣವಾಗಿ ನಿಲ್ಲಿಸಲು ಸಾಧ್ಯವಾಗದಿದ್ದರೂ, ಹತೋಟಿಗೆ ತರಲು ಎಲ್ಲ ರೀತಿಯ ಕ್ರಮ ತೆಗೆದು ಕೊಳ್ಳಲಾಗುವುದು,” ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಭಾರತದಲ್ಲಿ ಎಲ್ಲರಿಗೂ ಫುಲ್ ಮತ್ತು ಐಎಸ್ಐ ಮಾರ್ಕಿನ ಹೆಲೈಟ್ ಕಡ್ಡಾಯ. ಸಿಖ್ ಸಮುದಾಯದವರಿಗೆ ಮಾತ್ರ ರಿಯಾಯಿತಿ ನೀಡಲಾಗಿದೆ. ಎಲ್ಲರೂ ಕಾಯ್ದೆನ್ನು ಕಡ್ಡಾಯವಾಗಿ  ಪಾಲನೆ ಮಾಡಬೇಕು. ಎಲ್ಲದಕ್ಕಿಂತ ಜೀವ ಮುಖ್ಯ. ಕಳೆದ ವರ್ಷದ 11, 732 ಜನರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ಪ್ರಕರಣಗಳಲ್ಲಿ ಶೇ. 60ರಷ್ಟು ಹೆಲೈಟ್ ಇಲ್ಲದ ಕಾರಣಕ್ಕೆ ಸಾವು ಸಂಭವಿಸಿವೆ. ದಾವಣಗೆರೆಯಲ್ಲಿ ಬಾಕಿ 1.62 ಚಲನ್ ದಂಡ ಕಟ್ಟಿಸುವ ಅಭಿಯಾನವನ್ನು, ಇನ್ನುಮುಂದೆ ಕಟ್ಟುನಿಟ್ಟಾಗಿ ತೆಗೆದುಕೊಳ್ಳ ಬೇಕು. ಮನೆ ಮನೆಗೆ ತೆರಳಿ ದಂಡ ಪಾವತಿ ಅಭಿಯಾನದಂತೆ ಮಾಡಬೇಕು ಎಂದು ಅಲೋಕ್ ಕುಮಾರ್ ತಿಳಿಸಿದರು.

ಈವೇಳೆ ಹೆಚ್ಚುವರಿ ಪೊಲೀಸ್ ಮಹಾ ನಿರೀಕ್ಷಕ ಸಾರ್ವಜನಿಕರು ತಮ್ಮ ಮನವಿಗಳನ್ನು ಸಲ್ಲಿಸಿದರು.  ಚನ್ನಗಿರಿಯ ಸತ್ತಾರ್ ಸಾಬ್, ದಾವಣಗೆರೆಯ ಗೌಡ್ರ ಚನ್ನಬಸಪ್ಪ, ಹರಿಹರದ ವೃತ್ತದಲ್ಲಿ ಪ್ರತಿಮೆ ಸ್ಥಾಪನೆ  ಮಾಡಬೇಕು. ಸ್ಮಾರ್ಟ್ ಸಿಟಿ ಯೋಜನೆಯಡಿ ಹರಿಹರವನ್ನೂ ಸೇರಿಸಿಕೊಳ್ಳುವ ಮೂಲಕ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಜಯದೇವಪ್ಪ ಮನವಿ ಮಾಡಿದರು. ಎನ್.ಕೆ. ಕೊಟ್ರೇಶ್, ರೇಣುಕಾ ಮಂದಿರ ಬಳಿ ಚಿಕ್ಕದಾದ ಬ್ಯಾರಿಕೇಡ್ ತೆರವುಗೊಳಿಸಿ, ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಮಹಮ್ಮದ್ ಜಬೀವುಲ್ಲಾ ಮಾತನಾಡಿ, ದಾವಣಗೆರೆಯಲ್ಲಿ ಗಾಂಜಾ ದಂಧೆ ನಡೆಯುತ್ತಿರುವುದು ಯಕ್ಷ ಪ್ರಶ್ನೆ ಆಗಿದೆ. ದಾವಣಗೆರೆ ಉತ್ತರದಂತೆ, ದಕ್ಷಿಣದಲ್ಲಿ ಸಂಚಾರಿ ನಿಯಮಗಳು ಅನ್ವಯ ಆಗುವಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ಜಗಳೂರಿನ ಎಸ್ ಬಿಐ ಬ್ಯಾಂಕ್ ಮುಂದೆ ಸಂಚಾರಿ ಸಮಸ್ಯೆ ಇದೆ. ಅಗತ್ಯವಾದ ಸಿಬ್ಬಂದಿ ನಿಯೋಜನೆ ಮಾಡಬೇಕು ಎಂದು ಮನವಿ ಮಾಡಿದರು. ಮಂಜುನಾಥ್ ಮಾತನಾಡಿ, ಟ್ರಾಫಿಕ್ ನಿಯಮಪಾಲನೆ ಮಾಡಲೇಬಾರದು ಎನ್ನುವಂತೆ ನಿಯಮಗಳ ಉಲ್ಲಂಘನೆ ಆಗುತ್ತಿದೆ ಎಂದು ತಿಳಿಸಿದರು.

ಮಾಜಿ ಮೇಯರ್ ಎಸ್‌. ಟಿ. ವೀರೇಶ್‌ ಮಾತನಾಡಿ, ದಾವಣಗೆರೆಯಲ್ಲಿ ವಿಪರೀತ ಗ್ಯಾಂಬ್ಲಿಂಗ್ ನಡೆಯುತ್ತಿದೆ. ಪಿಯುಸಿ ಹಂತದ ವಿದ್ಯಾರ್ಥಿಗಳು ಗ್ಯಾಂಬ್ಲಿಂಗ್ ಗೆ ಬಲಿಯಾಗುತ್ತಿದ್ದಾರೆ. ಒಂದಿಬ್ಬರು ವಿಧ್ಯಾರ್ಥಿಗಳು ಬಲಿಯಾಗಿದ್ದಾರೆ. ಐಪಿಎಲ್ ಇತರೆ ಜೂಜಾಟಗಳ ನಿಯಂತ್ರಿಸಬೇಕು ಎಂದು ಮನವಿ ಮಾಡಿದರು.

ಪೂರ್ವ ವಲಯ ಪೊಲೀಸ್ ಮಹಾ ನಿರೀಕ್ಷಕ ಡಾ. ಕೆ. ತ್ಯಾಗರಾಜ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎ.ಆರ್.ಬಸರಗಿ ಇತರ ಪೋಲೀಸ್ ಅಧಿಕಾರಿಗಳು ಭಾಗವಹಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ಕೋಮುವಾದದ ಮಾತುಗಳನ್ನಾಡುವ ಪ್ರಧಾನಿ ದೇಶಕ್ಕೆ ಬೇಕೆ?: ಸಚಿವ ಎಂ ಸಿ ಸುಧಾಕರ್

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಂಗಳಸೂತ್ರ ಕಸಿಯುತ್ತಾರೆ, ದೇಶದ ಸಂಪತ್ತು ಹೆಚ್ಚು ಮಕ್ಕಳನ್ನು...

ಶಿವಮೊಗ್ಗ | ಕ್ಷೇತ್ರದ ರಕ್ಷಣೆಗೆ, ಅಭಿವೃದ್ಧಿಗೆ ಆದ್ಯತೆ: ಗೀತಾ ಶಿವರಾಜ್‌ಕುಮಾರ್

ಶಿವಮೊಗ್ಗ ಜಿಲ್ಲೆಯಲ್ಲಿ ಅಧಿಕಾರವು ರಾಜಕಾರಣಿಗಳ ಬಳಿಯಿದೆ. ಸಮಸ್ಯೆಗಳು ಸಾಕಷ್ಟಿವೆ. ಆದರೂ, ಕೆಲವು...

ಯಾದಗಿರಿ | ಅಂಗಡಿ, ಸಂತೆ ಪ್ರದೇಶದಲ್ಲಿ ಎಸ್‌ಯುಸಿಐ ಚುನಾವಣಾ ಪ್ರಚಾರ

ಯಾದಗಿರಿಯಲ್ಲಿ ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷ ಚುನಾವಣಾ ಪ್ರಚಾರದ ಅಂಗವಾಗಿ ಇಂದು ನಗರದ...