ಕೊಡಗಿನಲ್ಲಿ ಹೋಂಸ್ಟೇಗಳಿಗೆ ಕಠಿಣ ನಿಯಮಾವಳಿ: ಪ್ರವಾಸಿಗರ ಸುರಕ್ಷತೆಗೆ ಸರ್ಕಾರದ ಹೊಸ ಮಾರ್ಗಸೂಚಿ

Date:

ರಾಜ್ಯದಲ್ಲಿ ಹೋಂಸ್ಟೇ ಮತ್ತು ಬೆಡ್‌ ಆ್ಯಂಡ್‌ ಬ್ರೇಕ್‌ಫಾಸ್ಟ್‌ (B&B) ವ್ಯವಸ್ಥೆಗಳ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಸರ್ಕಾರ ಕಠಿಣ ನಿಯಮಾವಳಿಗಳನ್ನು ಜಾರಿಗೆ ತಂದಿದೆ. ಇತ್ತೀಚೆಗೆ ಕೊಪ್ಪಳ ಹಾಗೂ ಕೊಡಗು ಜಿಲ್ಲೆಗಳಲ್ಲಿ ಸಂಭವಿಸಿದ ಅಪರಾಧ ಪ್ರಕರಣಗಳ ಹಿನ್ನೆಲೆ ಖಾಸಗಿ ವಸತಿ ವ್ಯವಸ್ಥೆಗಳ ಮೇಲಿನ ನಿಯಂತ್ರಣವನ್ನು ಬಲಪಡಿಸುವ ಅಗತ್ಯ ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ.

- Advertisement -

ಪ್ರವಾಸಿಗರ ಸುರಕ್ಷತೆ, ಭದ್ರತೆ ಹಾಗೂ ಗುಣಮಟ್ಟದ ಸೇವೆಯನ್ನು ಖಚಿತಪಡಿಸುವ ಉದ್ದೇಶದಿಂದ ಪ್ರವಾಸೋದ್ಯಮ ಇಲಾಖೆ ಈ ಕ್ರಮ ಕೈಗೊಂಡಿದೆ. ಹೊಸ ನಿಯಮಗಳ ಪ್ರಕಾರ, ಎಲ್ಲಾ ಹೋಂಸ್ಟೇಗಳು ಕಡ್ಡಾಯವಾಗಿ ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು. ನೋಂದಣಿ ಪ್ರಮಾಣಪತ್ರ ಮತ್ತು ಪರವಾನಗಿಗಳನ್ನು ಹೋಂಸ್ಟೇಗಳ ಮುಖ್ಯ ಪ್ರವೇಶದ್ವಾರದಲ್ಲಿ ಸ್ಪಷ್ಟವಾಗಿ ಪ್ರದರ್ಶಿಸುವುದು ಅನಿವಾರ್ಯವಾಗಿದೆ. ಜೊತೆಗೆ ನೋಂದಾಯಿತ ಹೋಂಸ್ಟೇಗಳ ಪಟ್ಟಿಯನ್ನು ಸಾರ್ವಜನಿಕರಿಗೆ ಲಭ್ಯವಾಗುವಂತೆ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಪ್ರತಿಯೊಂದು ವಸತಿ ಘಟಕದಲ್ಲೂ ತುರ್ತು ಸಹಾಯವಾಣಿ ಸಂಖ್ಯೆಗಳ ಪ್ರದರ್ಶನ ಕಡ್ಡಾಯಗೊಳಿಸಲಾಗಿದೆ. ಇದರಲ್ಲಿ 112 ತುರ್ತು ಸೇವೆ, 1363 ಪ್ರವಾಸಿಗರ ಸಹಾಯವಾಣಿ, 181 ಮಹಿಳಾ ಸಹಾಯವಾಣಿ, 1098 ಮಕ್ಕಳ ಸಹಾಯವಾಣಿ, ಸಮೀಪದ ಆಸ್ಪತ್ರೆ ಹಾಗೂ ಜಿಲ್ಲಾಧಿಕಾರಿ ಕಚೇರಿ ಮತ್ತು ವಿಪತ್ತು ನಿರ್ವಹಣಾ ಕೇಂದ್ರಗಳ ವಿವರಗಳನ್ನು ಪ್ರದರ್ಶಿಸಬೇಕು.

ಹೋಂಸ್ಟೇಗಳಲ್ಲಿ ಕೆಲಸ ಮಾಡುವ ಎಲ್ಲಾ ಸಿಬ್ಬಂದಿಯ ಹಿನ್ನೆಲೆ ಪರಿಶೀಲನೆಯನ್ನು ಸ್ಥಳೀಯ ಪೊಲೀಸ್ ಠಾಣೆಗಳ ಮೂಲಕ ಕಡ್ಡಾಯಗೊಳಿಸಲಾಗಿದ್ದು, ಸಂಬಂಧಿತ ದಾಖಲೆಗಳನ್ನು ಸಂಗ್ರಹಿಸಿಡಬೇಕು. ಜೊತೆಗೆ ಹೋಂಸ್ಟೇಗಳ ಸ್ಥಳ ಮಾಹಿತಿಯನ್ನು ಪೊಲೀಸ್ ಇ-ಬೀಟ್ ವ್ಯವಸ್ಥೆಗೆ ಸಂಪರ್ಕಿಸಿ, ಬೀಟ್ ಪೊಲೀಸರ ನಿಯಮಿತ ಭೇಟಿ ಹಾಗೂ ಪರಿಶೀಲನೆ ನಡೆಸಲು ಸೂಚಿಸಲಾಗಿದೆ.

ಈ ಸುದ್ದಿ ಓದಿದ್ದೀರಾ?ಮಂಡ್ಯ | ದೂರದೃಷ್ಟಿಯ ನಾಯಕ ಎಸ್.ಎಂ. ಕೃಷ್ಣ ಸ್ಮರಣೆ: ಕಿಮ್ಮನೆ ರತ್ನಾಕರ್‌ಗೆ ರಾಜಕೀಯ ಪ್ರಶಸ್ತಿ

ಇನ್ನೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ವಿಶೇಷ ಪರಿಶೀಲನಾ ತಂಡಗಳನ್ನು ರಚಿಸಲಾಗುತ್ತಿದ್ದು, ದಿಢೀರ್‌ ತಪಾಸಣೆಗಳ ಮೂಲಕ ನಿಯಮ ಪಾಲನೆಯನ್ನ ಪರಿಶೀಲಿಸಲಾಗುತ್ತದೆ. ಅನಧಿಕೃತವಾಗಿ ಕಾರ್ಯನಿರ್ವಹಿಸುವ ಹೋಂಸ್ಟೇಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಎಚ್ಚರಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ: ಅ.15ರಿಂದ ಜಂತರ ಮಂಥರ್‌ನಲ್ಲಿ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಘನತೆಗೆ ಧಕ್ಕೆ ಉಂಟುಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಾರಣರಾಗಿದ್ದಾರೆ...

ರಾಯಚೂರು | ಪೊತ್ನಾಳ ಗ್ರಂಥಾಲಯದಲ್ಲಿ ಮೂಲಸೌಕರ್ಯ ಕೊರತೆ: ಓದಲು ಬರುವ ವಿದ್ಯಾರ್ಥಿಗಳಿಗೆ ಪರದಾಟ

ಮಾನ್ವಿ ತಾಲ್ಲೂಕಿನ ಪೊತ್ನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಶಾಲೆಯ ಮೈದಾನದಲ್ಲಿರುವ...

ಕಲಬುರಗಿ | ಪ್ರೀತಿಸಿದ ಯುವತಿಯನ್ನೇ ಮದುವೆಯಾಗಲು ಪಟ್ಟು: ಟವರ್ ಏರಿದ ಯುವಕ!

ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು ಎಂದು ಪಟ್ಟು ಹಿಡಿದ ಯುವಕನೊಬ್ಬ, ಮದುವೆಗೆ...

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...