ಬೀದರ್‌ | ಬಯಲು ಬಹಿರ್ದಸೆ ಮುಕ್ತ ಗ್ರಾಮಕ್ಕಾಗಿ ಶ್ರಮಿಸಿ: ಸಂತೋಷ್ ಚವ್ಹಾಣ್

Date:

  • ಎಲ್ಲಾ ಗ್ರಾಮಗಳು ಪ್ಲಾಸ್ಟಿಕ್ ಮುಕ್ತ ಗ್ರಾಮಗಳಾಗಿ ಮಾಡಲು ಶ್ರಮವಹಿಸಬೇಕು.
  • ನಾರಿ ಶಕ್ತಿ ಜಾಗೃತಿಗೊಳಿಸಿದರೆ, ಇಡೀ ಸಮಾಜಕ್ಕೆ ಜಾಗೃತಿ ಮಾಡಿದಂತಾಗುತ್ತದೆ.

ಬಸವಕಲ್ಯಾಣ ತಾಲೂಕಿನ ಎಲ್ಲಾ ಗ್ರಾಮಗಳು ಬಯಲು ಬಹಿರ್ದೆಸೆ ಮುಕ್ತ ಗ್ರಾಮಕ್ಕಾಗಿ ಎಲ್ಲರೂ ಸಂಕಲ್ಪ ಮಾಡಿ ಕಾರ್ಯನಿರ್ವಹಿಸಬೇಕಾಗಿದೆ. ವಿಶೇಷವಾಗಿ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರು ತಮ್ಮ ಗ್ರಾಮಗಳಲ್ಲಿ ಬಯಲು ಬಹಿರ್ದಸೆ ಮುಕ್ತಕ್ಕಾಗಿ ಜನರಲ್ಲಿ ಜಾಗೃತಿ ಮೂಡಿಸಿ ಅದರ ದುಷ್ಪರಿಣಾಮ ಕುರಿತು ಜನರಲ್ಲಿ ಅರಿವು ಮೂಡಿಸುವುದು ಅವಶ್ಯಕವಾಗಿದೆ ಎಂದು ತಾಲೂಕು ಪಂಚಾಯತ್ ಎ.ಡಿ ಸಂತೋಷ್ ಚೌಹಾಣ್ ಹೇಳಿದರು.

ಜಿಲ್ಲಾ ಪಂಚಾಯತ್ ಬೀದರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಶಾಂತೀಶ್ವರಿ ಸ್ವಯಂ ಸೇವಾ ಸಂಸ್ಥೆಯಿಂದ ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಋತುಚಕ್ರ ನಿರ್ವಹಣೆ ಮತ್ತು ಬಯಲು ಬಹಿರ್ದಸೆ ಮುಕ್ತ ಗ್ರಾಮ ಕುರಿತು ಆಯೋಜಿಸಿದ್ದ ತರಬೇತಿ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತ ಸರ್ಕಾರದ ರಾಜ್ಯ ಅಭಿವೃದ್ಧಿ ಸಮನ್ವಯ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯ ಶಿವಯ್ಯ ಸ್ವಾಮಿ ಮಾತನಾಡಿ, “ನಾರಿ ಶಕ್ತಿ ಜಾಗೃತಿಗೊಳಿಸಿದರೆ, ಇಡೀ ಸಮಾಜಕ್ಕೆ ಜಾಗೃತಿ ಮಾಡಿದಂತಾಗುತ್ತದೆ. ಪ್ರತಿ ಕ್ಷೇತ್ರದಲ್ಲೂ ತರಬೇತಿ ನೀಡುವ ಮೂಲಕ ಬಯಲು ಬಹಿರ್ದಸೆ ಮುಕ್ತ ಗ್ರಾಮಗಳನ್ನಾಗಿ ಮಾಡಲು ಸಂಕಲ್ಪ ಮಾಡಲಾಗಿದೆ. ಅಲ್ಲದೆ ಹದಿಹರೆಯದ ಹೆಣ್ಣು ಮಕ್ಕಳಿಗೆ ಮತ್ತು ಮಹಿಳೆಯರಲ್ಲಿ ಋತುಚಕ್ರ ನಿರ್ವಹಣೆಯ ಕುರಿತು ತರಬೇತಿ ನೀಡಿ ಮಹಿಳೆಯರ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಲಾಗುತ್ತಿದೆ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಡಾ.ಬಸವರಾಜ ಸ್ವಾಮಿ ಶಾಂತೇಶ್ವರಿ ಸಂಸ್ಥೆಯು ವಿಶೇಷ ಕಾಳಜಿ ವಹಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ಸ್ವಚ್ಛ ಬೀದರ್ ಜಿಲ್ಲೆಗಾಗಿ ಶ್ರಮಿಸುತ್ತಿರುವುದು ಮಾದರಿಯ ಸೇವೆಯಾಗಿದೆ. ಈ ಸಂಸ್ಥೆಯು ಇನ್ನೂ ಎತ್ತರಕ್ಕೆ ಬೆಳೆದು ಜನರ ಸೇವೆ ಹೀಗೆ ಮುಂದುವರಿಸಲಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ರು.

ಜಿಲ್ಲಾ ಪಂಚಾಯತ್ ನ ಲೆಕ್ಕ ಸಹಾಯಕ ಪ್ರವೀಣ್ ಸ್ವಾಮಿ ಮಾತನಾಡಿ, “ಸ್ವಚ್ಛ ಬೀದರ್ ಹಾಗೂ ಸ್ವಚ್ಛ ಭಾರತ ಪರಿಕಲ್ಪನೆಯನ್ನು ನಾವೆಲ್ಲರೂ ಸೇರಿ ಸಾಕಾರಗೊಳಿಸಬೇಕು. ಜಿಪಿಎಲ್ಎಫ್ ಹಾಗೂ ಸ್ವಸಾಯ ಸಂಘದ ಸದಸ್ಯರು ಬಯಲು ಬಹಿರ್ದಸೆ ಮುಕ್ತ ಗ್ರಾಮಕ್ಕಾಗಿ ಶ್ರಮವಹಿಸಿ ಮಾದರಿ ಗ್ರಾಮಗಳಾಗಿ ಮಾಡಬೇಕೆಂದು” ಕರೆ ನೀಡಿದರು.

ರಾಜೀವ್ ಗಾಂಧಿ ಪರಿಸರ ಪ್ರಶಸ್ತಿ ಪುರಸ್ಕೃತ ಶೈಲೇಂದ್ರ ಕೌಡಿ ಮಾತನಾಡಿ, “ಕ್ಷೇತ್ರದ ಎಲ್ಲಾ ಗ್ರಾಮಗಳಲ್ಲಿ ಸ್ವಚ್ಛತೆಯ ಜೊತೆಗೆ ಪ್ಲಾಸ್ಟಿಕ್ ಮುಕ್ತ ಗ್ರಾಮಗಳಾಗಿ ಮಾಡಲು ಶ್ರಮವಹಿಸಬೇಕು, ಇಲ್ಲದಿದ್ದರೆ ಮುಂದೊಂದು ದಿನ ಪ್ಲಾಸ್ಟಿಕ್ ಬಳಕೆಯಿಂದ ಮನುಷ್ಯನ ಆರೋಗ್ಯದ ಮೇಲೆ ಹಾಗೂ ಭೂಮಿಯ ಮೇಲೆಯೂ ದುಷ್ಪರಿಣಾಮದಿಂದ ದೊಡ್ಡ ಅನಾಹುತ ಆಗಬಹುದು, ಅದರಿಂದ ಎಲ್ಲರೂ ಪ್ಲಾಸ್ಟಿಕ್ ಬಳಸುವುದು ನಿಲ್ಲಿಸಬೇಕು” ಎಂದು ತಿಳಿಸಿದರು.

ಋತುಚಕ್ರ ನಿರ್ವಹಣೆ ಕುರಿತು ವೈದ್ಯಧಿಕಾರಿ ಡಾಕ್ಟರ್ ಅಶ್ವಿನಿ ಗೋಖಲೆ ಅವರು ಋತುಚಕ್ರದ ಸಮರ್ಪಕ ನಿರ್ವಹಣೆ ಹಾಗೂ ಅದರ ವೈದ್ಯಕೀಯ ವಿಧಾನ ಹಾಗೂ ಲಭ್ಯವಿರುವ ಸಾಮಗ್ರಿಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸ್ವಾತಂತ್ರ್ಯ ಸಿಕ್ಕಿ ವರ್ಷಗಳೇ ಉರುಳಿದರೂ ರಸ್ತೆ ಕಾಣದ ತಾಂಡಾ

ಕಾರ್ಯಕ್ರಮದಲ್ಲಿ ವೀರಭದ್ರೇಶ್ವರ ಸ್ನಾತಕೋತರ ಮಹಾವಿದ್ಯಾಲಯದ ಪ್ರಾಚಾರ್ಯ ಲೋಕೇಶ್ ಮೋಳಕೆರೆ, ಲಕ್ಷ್ಮಿ ಡಾ.ಬಸವರಾಜ ಸ್ವಾಮಿ, ರಾಜರಡ್ಡಿ, ಶಿವಶಂಕರ ಬೇಮಳಗಿ, ಡಾ.ಆಶ್ವಿನಿ, ಗೀತಾ ದೊಡ್ಮನಿ, ಸಂತೋಷ ಮುಸ್ತರಿ, ಲಕ್ಷ್ಮೀ , ಸಿದ್ರಾಮ ಸೇರಿದಂತೆ ಎಲ್ಲಾ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆರು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಡೊನೇಷನ್ ಹಾವಳಿ ತಡೆಗಟ್ಟುವಂತೆ ಡಿವಿಪಿ ಆಗ್ರಹ

ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಡೊನೇಷನ್ ಹಾವಳಿ ಹೆಚ್ಚಾಗಿದೆ. ಅಂತಹ ಸಂಸ್ಥೆಗಳ ವಿರುದ್ಧ...

ದಾವಣಗೆರೆ | ಅಂಜಲಿ ಹತ್ಯೆಗೈದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಅಗ್ರಹ

ಹುಬ್ಬಳ್ಳಿಯಲ್ಲಿ ಯುವತಿ ಅಂಜಲಿ ಅಂಬಿಗೇರಳನ್ನು ಮನೆಗೆ ನುಗ್ಗಿ ಕೊಲೆಮಾಡಿದ ಆರೋಪಿಗೆ ಗಲ್ಲು ಶಿಕ್ಷೆ...

ದಾವಣಗೆರೆ | ಸ್ಮಾರ್ಟ್‌ ಸಿಟಿ ರಿಂಗ್‌ ರೋಡ್‌; ಸ್ಥಳಾಂತರಗೊಂಡವರ ಬದುಕು ದುಸ್ತರ

ಸ್ಮಾರ್ಟ್‌ ಸಿಟಿ ರಿಂಗ್‌ ರೋಡ್‌ಗಾಗಿ ನಮ್ಮ ಮನೆಗಳನ್ನು ವಶಪಡಿಸಿಕೊಂಡು, ನಮ್ಮನ್ನು ಒಕ್ಕಲೆಬ್ಬಿಸಿದರು....

ಮೇ 26ರಂದು ‍ಬಂಗಾಳಕೊಲ್ಲಿಯಲ್ಲಿ ಉಂಟಾಗಲಿದೆ ‘ರೆಮಲ್ ಚಂಡ‌ಮಾರುತ’; ಭಾರೀ ಮಳೆ ಸಾಧ್ಯತೆ

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯಾಗುತ್ತಿದ್ದು, ಮೇ 26ರ ವೇಳೆಗೆ ತೀವ್ರ ಚಂಡಮಾರುತವಾಗಿ ಪಶ್ಚಿಮ...