ಆನ್‌ಲೈನ್ ಜೂಜಾಟದ ವ್ಯಸನಕ್ಕೆ ಸಿಲುಕಿಕೊಂಡಿದ್ದ ವಿದ್ಯಾರ್ಥಿ ಅದಕ್ಕಾಗಿ ಸಾಲಮಾಡಿ ಅದನ್ನು ತೀರಿಸಲು ಸಾಧ್ಯವಾಗದೆ ಒತ್ತಡಕ್ಕೆ ಸಿಲುಕಿ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ನಗರದ ಕಾಲೇಜೊಂದರಲ್ಲಿ ಬಿಎಸ್ಸಿ ನರ್ಸಿಂಗ್ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಡೋಣಗಾಪುರ ಗ್ರಾಮದ ಸೋಮನಾಥ್ ಚಿದ್ರೆ (23) ಮೃತ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.
ಆನ್‌ಲೈನ್ ಜೂಟಾಟದ ವ್ಯಾಮೋಹಕ್ಕೆ ಒಳಗಾದ ವಿದ್ಯಾರ್ಥಿ 80 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡಿದ್ದ, ಒಂದಿಷ್ಟು ಹಣ ಶೇ.4ರಿಂದ ಶೇ.10ರ ಬಡ್ಡಿ ದರದಲ್ಲಿ ತಂದಿದ್ದ, ಸಾಲಗಾರರ ಕಾಟದಿಂದ ಬೇಸತ್ತು ನಗರದ ವೀರಶೈವ ವಸತಿ ನಿಲಯ ಸಮೀಪದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಮೃತ ವಿದ್ಯಾರ್ಥಿ ಪೋಷಕರು ನೀಡಿದ ದೂರಿನ ಅನ್ವಯ ಕಲಬುರಗಿ ಬೃಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸುದ್ದಿ ಓದಿದ್ದೀರಾ? ಚಳಿಗಾಲ ಅಧಿವೇಶನ | ‘ಸುವರ್ಣಸೌಧ’ ತಗೊಂಡು ಏನು ಮಾಡೋಣ, ‘ಬ್ರ್ಯಾಂಡ್ ಬೆಳಗಾವಿ’ ಯಾವಾಗ?
ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.