ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡ ಚಿಕ್ಕಮಗಳೂರಿನ ಶಾಲಾ ಬಸ್ ಚಾಲಕ ಮತ್ತು ವಿದ್ಯಾರ್ಥಿನಿ ಸಾವಿನ ಪ್ರಕರಣದಲ್ಲಿ ಖಾಸಗಿ ಶಾಲೆಯ ಆಡಳಿತ ಮಂಡಳಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.
8ನೇ ತರಗತಿ ವಿದ್ಯಾರ್ಥಿನಿ ಮತ್ತು ಶಾಲಾ ಬಸ್ ಚಾಲಕ ಸಂತೋಷ್ ಡಿಸೆಂಬರ್ 31ರಂದು ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಚಾಲಕ ಸಂತೋಷ್ ವಿದ್ಯಾರ್ಥಿನಿಗೆ ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ ಎಂದು ಹೇಳಲಾಗಿದೆ.
ಆತನ ಕಿರುಕುಳದ ಬಗ್ಗೆ ಪೊಲೀಸರು ಶಾಲೆಯ ಆಡಳಿತ ಮಂಡಳಿ ಗಮನಕ್ಕೆ ತಂದಿದ್ದರು. ಆದರೂ, ಆತನ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ ಎಂದು ಆರೋಪಿಸಲಾಗಿದೆ.
ಭಾನುವಾರ ವಿದ್ಯಾರ್ಥಿನಿ ತನ್ನ ಸ್ನೇಹಿತರ ಜೊತೆ ಹೊಸ ವರ್ಷದ ಪಾರ್ಟಿಗೆ ಹೋಗುವುದಾಗಿ ಕುಟುಂಬಸ್ಥರಿಗೆ ಹೇಳಿ ಹೊರ ಹೋಗಿದ್ದಳು. ಆದರೆ, ಆಕೆಯನ್ನ ಸಂತೋಷ್ ಕರೆದೊಯ್ದಿದ್ದ. ಅದೇ ದಿನ ರಾತ್ರಿ ಅಜ್ಜಂಪುರ ತಾಲೂಕಿನ ಬಂಕನಕಟ್ಟೆಯ ರೈಲ್ವೆ ಹಳಿ ಮೇಲೆ ಅವರಿಬ್ಬರ ಮೃತದೇಹಗಳು ರುಂಡ ಮತ್ತು ಮುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತದ್ದವು.
ಅವರಿಬ್ಬರು ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಅರಸೀಕೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.