ಚಿಂತಾಮಣಿ | ಹಾಸ್ಟೆಲ್‌ನಲ್ಲಿ ಹಿರಿಯ ವಿದ್ಯಾರ್ಥಿಯಿಂದ ಹಲ್ಲೆ ; ಕಣ್ಣು ಕಳೆದುಕೊಂಡ ಬಾಲಕ

Date:

ಹಾಸ್ಟೆಲ್‌ನಲ್ಲಿದ್ದ ಹಿರಿಯ ವಿದ್ಯಾರ್ಥಿಯೋರ್ವ ಕಲ್ಲಿನಿಂದ ಜೋರಾಗಿ ಹೊಡೆದ ಹಿನ್ನೆಲೆ ಮತ್ತೊಬ್ಬ ವಿದ್ಯಾರ್ಥಿಯು ತನ್ನ ಕಣ್ಣನ್ನೇ ಕಳೆದುಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

- Advertisement -

ಸೈಯದ್‌ ಅರ್ಫಾನ್‌(13) ಕಣ್ಣು ಕಳೆದುಕೊಂಡಿರುವ 7ನೇ ತರಗತಿಯ ಬಾಲಕ. ಅರ್ಫಾನ್ ಚಿಂತಾಮಣಿ ತಾಲೂಕಿನ ಮಸ್ತೇನಹಳ್ಳಿ ಗ್ರಾಮದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 7ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದು, ಆ.25ರ ಭಾನುವಾರದಂದು ಬೆಳಗ್ಗೆ ಶಾಲೆಯ ಆವರಣದಲ್ಲಿರುವ ಮರದ ಕೆಳಗೆ ಕುಳಿತಿದ್ದಾಗ, ಅದೇ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 8ನೇ ತರಗತಿ ವಿದ್ಯಾರ್ಥಿ ತಮೀಮ್‌ ಎಂಬಾತ ಇದ್ದಕ್ಕಿದ್ದಂತೆ ಅರ್ಫಾನ್‌ಗೆ ಕಲ್ಲಿನಿಂದ ಹೊಡೆದಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಕಲ್ಲೇಟಿನಿಂದ ಅರ್ಫಾನ್‌ ಕಣ್ಣಿಗೆ ಗಂಭೀರ ಗಾಯವಾಗಿದ್ದ ಹಿನ್ನೆಲೆ ವಸತಿ ಶಾಲೆಯ ಶಿಕ್ಷಕರು ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಬಳಿಕ ವೈದ್ಯರ ಸಲಹೆಯಂತೆ ವಿದ್ಯಾರ್ಥಿಯ ಪೋಷಕರೊಂದಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ತೆರಳಿದ್ದು, ಅರ್ಫಾನ್‌ ಕಣ್ಣಿಗೆ ಗಂಭೀರ ಗಾಯವಾಗಿರುವುದು ಗೊತ್ತಾಗಿದೆ. ವೈದ್ಯರು ಗಾಯಗೊಂಡಿದ್ದ ವಿದ್ಯಾರ್ಥಿಯ ಒಂದು ಕಣ್ಣನ್ನು ತೆಗೆದು ಹಾಕಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿಂತಾಮಣಿ | ಸರ್ವರಿಗೂ ಸಂವಿಧಾನ ಅಭಿಯಾನಕ್ಕೆ ಮಂಗ್ಳೂರು ವಿಜಯ ಚಾಲನೆ

ಘಟನೆ ಕುರಿತು ಅರ್ಫಾನ್ ದೊಡ್ಡಪ್ಪ ಜಮೀರ್ ಪಾಷಾ ಚಿಂತಾಮಣಿ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...