ಮೈಸೂರು | ಉತ್ತಮ ವಸತಿ ನಿಲಯ, ಸೌಲಭ್ಯಗಳನ್ನು ಒದಗಿಸುವಂತೆ ವಿದ್ಯಾರ್ಥಿನಿಯರ ಪ್ರತಿಭಟನೆ

Date:

ಮೈಸೂರಿನ ಕ್ರಾಫರ್ಡ್ ಹಾಲ್ ಎದುರು ಉತ್ತಮ ವಸತಿ ನಿಲಯ, ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಎಐಡಿಎಸ್‌ಒ ನೇತೃತ್ವದಲ್ಲಿ ಮಹಾರಾಜ ಕಾಲೇಜಿನ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು.

- Advertisement -

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಐಡಿಎಸ್‌ಒ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯೆ ಹೇಮಾ ” ಮೈಸೂರಿನ ಮಹಾರಾಜ ಕಾಲೇಜಿನ ವಿದ್ಯಾರ್ಥಿನಿಯರು ಉಳಿದುಕೊಳ್ಳುತ್ತಿದ್ದ ವಸತಿ ನಿಲಯವು ಕುಸಿಯುವ ಸ್ಥಿತಿಯಲ್ಲಿದೆ. ಅದನ್ನು ಕೆಡವಲು ನಿರ್ಧರಿಸಲಾಗಿದ್ದು, ವಿದ್ಯಾರ್ಥಿನಿಯರನ್ನು ಯುವರಾಜ ಮಹಿಳಾ – ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಸ್ಥಳಾಂತರಿಸಲಾಗಿದೆ. ಸ್ಥಳಾಂತರಗೊಂಡಿರುವ ವಸತಿ ನಿಲಯದಲ್ಲಿ ಒಂದು ಚಿಕ್ಕ ಕೊಠಡಿಯಲ್ಲಿ ಹತ್ತಕ್ಕಿಂತ ಹೆಚ್ಚು ವಿದ್ಯಾರ್ಥಿನಿಯರನ್ನು ತುಂಬಲಾಗಿದೆ. ಅಲ್ಲಿ ಶೌಚಾಲಯ ಮತ್ತು ಇತರೆ ಮೂಲಭೂತ ಸೌಲಭ್ಯಗಳ ಕೊರತೆ ಇದೆ. ಮೈಸೂರಿನ ಮಹಾರಾಜ ಕಾಲೇಜು ಪ್ರತಿಷ್ಠಿತ ಕಾಲೇಜು ಆಗಿದ್ದರೂ, ಅಲ್ಲಿನ ವಿದ್ಯಾರ್ಥಿನಿಯರು ಕನಿಷ್ಠ ಸೌಲಭ್ಯಗಳು ಇಲ್ಲದೆ ಮತ್ತು ಉಳಿದುಕೊಳ್ಳಲು ಸರಿಯಾದ ಜಾಗವಿಲ್ಲದೆ. ಪರದಾಡುವಂತಾಗಿದೆ ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

” ವಿದ್ಯಾರ್ಥಿಗಳಿಗೆ ಯಾವುದೇ ಮಾಹಿತಿ ನೀಡದೆ, ಅವರ ಅಭಿಪ್ರಾಯಗಳನ್ನು ತೆಗೆದುಕೊಳ್ಳದೆ, ವಸತಿ ನಿಲಯದ ಶುಲ್ಕ ಪಾವತಿಸಿಕೊಂಡು ದಾಖಲಾತಿ ಪಡೆದ ಎರಡೇ ದಿನಕ್ಕೆ ಸ್ಥಳಾಂತರವಾಗುವಂತೆ ಒತ್ತಾಯಿಸುತ್ತಿರುವುದು ವಿಶ್ವವಿದ್ಯಾನಿಲಯದ ಅಪ್ರಜಾಪ್ರಭುತ್ವ ನಿಲುವನ್ನು ಎತ್ತಿ ತೋರಿಸುತ್ತದೆ. ಆಗಸ್ಟ್ 4 ರಂದು, ವಿದ್ಯಾರ್ಥಿನಿಯರನ್ನು ವಸತಿ ನಿಲಯಕ್ಕೆ ದಾಖಲಿಸಿಕೊಳ್ಳಲಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿನಿಯಿಂದ ₹13,000ಕ್ಕೂ ಹೆಚ್ಚು ಶುಲ್ಕವನ್ನು ಕಟ್ಟಿಸಿಕೊಂಡಿದ್ದಾರೆ.

ಇದರ ಜೊತೆಗೆ ಪ್ರತಿ ತಿಂಗಳು ₹2,100 ರೂಪಾಯಿ ಊಟದ ಶುಲ್ಕ ಕಟ್ಟಬೇಕಾಗಿದೆ. ಹೀಗಿದ್ದರೂ ಕೂಡ, ಇಷ್ಟೆಲ್ಲ ಶುಲ್ಕವನ್ನು ವಿದ್ಯಾರ್ಥಿಗಳಿಂದ ಸಂಗ್ರಹಿಸಿದರೂ, ಕನಿಷ್ಠ ಉಳಿದುಕೊಳ್ಳಲು ಮತ್ತು ಓದಲು ಸರಿಯಾದ ಜಾಗವಿಲ್ಲದೆ ವಿದ್ಯಾರ್ಥಿನಿಯರ ವಿದ್ಯಾಭ್ಯಾಸಕ್ಕೆ ಬಹಳ ತೊಂದರೆಯಾಗುತ್ತಿದೆ. ಆದ್ದರಿಂದ, ಕೂಡಲೇ ವಿದ್ಯಾರ್ಥಿನಿಯರಿಗೆ ಯೋಗ್ಯ ರೀತಿಯ ವಸತಿ ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ” ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಪ್ರತಾಪ್ ಸಿಂಹ ಇತಿಹಾಸ ಗೊತ್ತಿರದ ಮೂರ್ಖ ವ್ಯಕ್ತಿ : ಅಬ್ದುಲ್ ಮಜೀದ್

ಸಹಾಯ ನಿರ್ದೇಶಕಿ ಸುಷ್ಮಾ ಆಗಮಿಸಿ ಸಮಸ್ಯೆಯನ್ನು ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ. ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷೆ ಚಂದ್ರಕಲಾ, ಜಿಲ್ಲಾ ಕಾರ್ಯದರ್ಶಿ ನಿತಿನ್, ಪದಾಧಿಕಾರಿಗಳಾದ ದಿಶ, ಅಭಿಷೇಕ್ ಹಾಗೂ ಮಹಾರಾಜ ಕಾಲೇಜಿನ ವಿದ್ಯಾರ್ಥಿನಿಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ

ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ...

ಧಾರವಾಡ | ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಗಾಂಧಿ‌ ಜಯಂತಿ‌ ಆಚರಣೆ

ಧಾರವಾಡ ಪಟ್ಟಣದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ರಾಷ್ಟ್ರಪತಿ ಮಹಾತ್ಮಾ ಗಾಂಧೀಜಿ ಹಾಗೂ ...

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...