ಮಧ್ಯಾಹ್ನದ ಬಿಸಿಯೂಟ ಸೇವಿಸಿ ಎಂಟು ಮಂದಿ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನಲ್ಲಿ ಗುರುವಾರ ನಡೆಸಿದೆ.
ತಾಲೂಕಿನನೆಲವಾಗಲು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಎಂಟು ಮಂದಿ ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗುರುವಾರ ಮಧ್ಯಾಹ್ನ ವಿದ್ಯಾರ್ಥಿಗಳಿಗೆ ಬಿಸಿಯೂಟ ನೀಡಲಾಗಿತ್ತು. ವಿದ್ಯಾರ್ಥಿಗಳು ಆಹಾರ ಸೇವಿಸಿ, ಹಾಸ್ಟೆಲ್‌ಗೆ ತೆರಳಿದ್ದರು. ಬಳಿಕ, ಕೆಲ ವಿದ್ಯಾರ್ಥಿಗಳು ವಾಂತಿ ಮಾಡಿಕೊಂಡಿದ್ದು, ಹೊಟ್ಟೆ ನೋವಿನಿಂದ ಒದ್ದಾಡಿದ್ದಾರೆ.
ಕೂಡಲೇ ಅವರೆಲ್ಲರನ್ನೂ ಹಾಸ್ಟೆಲ್ ವಾರ್ಡನ್ ಆಸ್ಪತ್ರೆಗೆ ಕರೆದೊಯ್ದು, ದಾಖಲಿಸಿದ್ದಾರೆ. ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗಿದ್ದು, ಎಲ್ಲರೂ ಚೇತರಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಹಳೆಯದಾಗಿದ್ದ ಮೊಟ್ಟೆಯನ್ನು ತಿಂದ ಪರಿಣಾಮ ಆರೋಗ್ಯ ಸಮಸ್ಯೆಯಾಗಿದ ಎಂದು ಕೆಲ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.