ಮೈಸೂರು | ವಿದ್ಯಾರ್ಥಿಗಳು ಪ್ರಶ್ನಿಸುವುದನ್ನು ಮರೆಯುವುದೇ ಪ್ರಜಾಪ್ರಭುತ್ವಕ್ಕೆ ಅಪಾಯ : ಅಹಿಂದ ಜವರಪ್ಪ

Date:

Advertisements

ಮೈಸೂರು ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ವಿದ್ಯಾರ್ಥಿ ನಿಲಯದಲ್ಲಿ ಆಯೋಜಿಸಿದ್ದ 2024 – 25 ನೇ ಸಾಲಿನ ವಿದ್ಯಾರ್ಥಿ ನಿಲಯದ ವಾರ್ಷಿಕೋತ್ಸವ ಹಾಗೂ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಸಾಮಾಜಿಕ ಹೋರಾಟಗಾರ ಅಹಿಂದ ಜವರಪ್ಪ ಮಾತನಾಡಿ ‘ ವಿದ್ಯಾರ್ಥಿಗಳು ಪ್ರಶ್ನಿಸುವುದನ್ನು ಮರೆಯುವುದೇ ಪ್ರಜಾಪ್ರಭುತ್ವಕ್ಕೆ ಓದಗಬಹುದಾದ ಬಹುದೊಡ್ಡ ಅಪಾಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.’

” ಈ ಹಿಂದೆ ದಲಿತ, ರೈತ ಹಾಗೂ ವಿದ್ಯಾರ್ಥಿ ಸಂಘಟನೆಗಳು ಯಾವುದೇ ಹೋರಾಟ ಮಾಡಿದರೂ ಅದರಲ್ಲಿ ಮಹಾರಾಣಿ ಕಾಲೇಜಿನ ಹೆಣ್ಣು ಮಕ್ಕಳು ಪ್ರಧಾನವಾಗಿ ಪಾಲ್ಗೊಳ್ಳುತ್ತಿದ್ದರು. ಇವತ್ತು ಆ ಪರಿಸ್ಥಿತಿ ಕಾಣುತ್ತಿಲ್ಲ ಎಂದರು. ವಿದ್ಯಾರ್ಥಿಗಳು ಚಳವಳಿ ಹಾಗೂ ಪ್ರಾಜಾಸತ್ತಾತ್ಮಕ ಮೌಲ್ಯಗಳಿಂದ ದೂರ ಉಳಿಯುವುದಲ್ಲದೆ ತಮ್ಮ ಹಕ್ಕಿಗಾಗಿಯೂ ಹೋರಾಟ ಮಾಡುವುದನ್ನು ಸಹ ಮರೆತಿರುವುದು ನೋವಿನ ಸಂಗತಿ” ಎಂದು ಹೇಳಿದರು.

” ಜಾತಿ ತಾರತಮ್ಯ ಹೆಚ್ಚಾಗುತ್ತಿರುವ ಈ ದುರಿತ ಕಾಲದಲ್ಲಿ ವಿದ್ಯಾರ್ಥಿಗಳು ಮುಕ್ತವಾಗಿ ಯೋಚಿಸಬೇಕು. ಶೋಷಿತರು, ಅನ್ಯಾಯಕ್ಕೆ ಒಳಗಾದವರು, ಸರ್ಕಾರದ ಜನ ವಿರೋಧಿ ಕ್ರಮಗಳ ವಿರುದ್ಧ ನಡೆಯುವ ಹೋರಾಟಗಳಲ್ಲಿ ಪಾಲ್ಗೊಳ್ಳಬೇಕು. ಶತಮಾನಗಳ ಕಾಲ ದಾಸ್ಯದಲ್ಲಿದ್ದ ಶೋಷಿತರು ಮತ್ತು ಮಹಿಳೆಯರ ವಿಮೋಚನೆಗಾಗಿ ಬಾಬಾ ಸಾಹೇಬ ಬಿ. ಆರ್. ಅಂಬೇಡ್ಕರ್ ಅವರು ತಮ್ಮ ಜೀವಮಾನವನ್ನು ಮುಡಿಪಿಟ್ಟರು. ಅವರ ಶ್ರಮ, ತ್ಯಾಗ ಅಪರಿಮಿತವಾದದ್ದು.

Advertisements

ಅಂಬೇಡ್ಕರ್ ಅವರನ್ನು ಜಾತಿಗೆ ಸೀಮಿತ ಮಾಡದೇ ವಿದ್ಯಾರ್ಥಿಗಳು ಮುಕ್ತವಾಗಿ ಓದಬೇಕು. ಜ್ಞಾನ ಸಂಪಾದನೆಗೆ ಅವರು ಪಟ್ಟ ಶ್ರಮದಿಂದ ಸ್ಫೂರ್ತಿ ಪಡೆದು ಅಧ್ಯಯನ ಶೀಲರಾಗಬೇಕು. ಸ್ಪರ್ಧಾತ್ಮಕ ಬದುಕಿನಲ್ಲಿ ಭವಿಷ್ಯ ರೂಪಿಸಿಕೊಳ್ಳುವುದು ಸುಲಭವಲ್ಲ. ರ‍್ಯಾಂಕ್ ಪಡೆದರು ವಿಶೇಷವಾದ ಕೌಶಲ್ಯ ಅತ್ಯಗತ್ಯವಾಗಿದೆ. ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಆಗ ಬದುಕು ಸಮೃದ್ಧವಾಗುತ್ತದೆ. ನಾಯಕತ್ವ ಗುಣವೂ ಬೆಳೆಯುತ್ತದೆ ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ?ಮೈಸೂರು | ದಲಿತ ಮಹಿಳೆ ಜಮೀನಿಗೆ ದಾರಿ ನೀಡದ ಸವರ್ಣಿಯರು; ಬೆಳೆ ಬೆಳೆಯಲಾರದೆ ಪಾಳು ಬಿದ್ದ ಭೂಮಿ

ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಡಾ. ಬಿ.ಚಂದ್ರಶೇಖರ, ಪ್ರಾಂಶುಪಾಲ ಪ್ರೊ. ಅಬ್ದುಲ್ ರಹಿಮಾನ್, ಸಹ ಪ್ರಾಧ್ಯಾಪಕಿ ಡಾ. ಎಚ್. ಸಿ.ಪ್ರಮೀಳಾ, ಡಾ. ಸಿ. ದಾಕ್ಷಾಯಿಣಿ, ನಿಲಯ ಪಾಲಕಿ ಸಿ.ಪದ್ಮಾ ಹಾಗೂ ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X