ಮೈಸೂರಿನ ಶಾರದ ವಿಲಾಸ ಕಾನೂನು ಕಾಲೇಜಿನಲ್ಲಿ ವಿದ್ಯಾರ್ಥಿಗಳಾದ ಅಭಿಷೇಕ್, ಸುಮಂತ್, ಪ್ರದೀಪ್, ರಾಮಕೃಷ್ಣ ಪುಂಡಾಟಿಕೆ ನಡೆಸಿ, ಗೋಡೆಗಳಲ್ಲಿ ಆಕ್ಷೇಪಾರ್ಹ ಬರಹಗಳನ್ನು ರಾಜಾರೋಷವಾಗಿ ಅಂಟಿಸಿದ್ದಾರೆ. ಕಾಲೇಜಿನ ವ್ಯವಸ್ಥಾಪಕ ಸಮಿತಿ ವಿರುದ್ಧವು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಇದುವರೆಗೆ ಯಾವುದೇ ಶಿಸ್ತು ಕ್ರಮ ಕೈಗೊಳ್ಳದ ಆಡಳಿತ ಮಂಡಳಿಯ ವಿರುದ್ಧ ಇನ್ನಿತರೇ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ನ್ಯಾಯ ಕೊಡಿಸುವಂತೆ ಮನವಿ ಸಲ್ಲಿಸಿದ್ದಾರೆ.
ಕಾನೂನು ಕಾಲೇಜಿನಲ್ಲಿ ಏರ್ಪಡಿಸಲಾಗಿದ್ದ ಅಣುಕು ನ್ಯಾಯಾಲಯ ಸ್ಪರ್ಧೆಯನ್ನ ಕಾಲೇಜಿನ ಮೂರನೆ ವರ್ಷದ ನಾಲ್ಕನೇ ಸೆಮಿಸ್ಟರ್ ನ ಕೆಲ ವಿದ್ಯಾರ್ಥಿಗಳು ಪುಂಡಾಟಿಕೆ ಮೆರೆದು ಅಣಕು ನ್ಯಾಯಾಲಯ ನಿಲ್ಲುವಂತೆ ಮಾಡಿದ್ದಲ್ಲದೆ, ಅವಾಚ್ಯವಾಗಿ ನಿಂದಿಸಿದ್ದಾರೆ ಎಂದು ವಿದ್ಯಾರ್ಥಿ ಕಾಳಿಂಗರಾಜ ಆರೋಪ ಮಾಡಿದ್ದಾರೆ.
ಸಾರ್ವಜನಿಕವಾಗಿ ನಿಂದಿಸಿದ್ದಲ್ಲದೇ ಕಾಲೇಜಿನ ಕಾರಿಡಾರ್ ಗೋಡೆಗಳ ಮೇಲೆ ಅಸಭ್ಯವಾಗಿ ಬರೆದು ಎಲ್ಲರಿಗೂ ಕಾಣುವ ಜಾಗದಲ್ಲಿ ಅಂಟಿಸಿ ಕಾಲೇಜಿನ ಶಾಂತಿಯನ್ನ ಹಾಳು ಮಾಡುತಿದ್ದು ವಿದ್ಯಾರ್ಥಿಗಳಿಗೆ ತೊಂದರೆ ಆಗುವಂತೆ ನಡೆದುಕೊಳ್ಳುತ್ತಿದ್ದಾರೆ.

ಇದೆಲ್ಲವೂ ಸರಿ ಸುಮಾರು 13 ದಿನಗಳ ಹಿಂದೆ ನಡೆದಿದ್ದು, ಕ್ರಮ ಕೈಗೊಳ್ಳುವಂತೆ ಪದೇ ಪದೆ ಮನವಿ ಸಲ್ಲಿಸಿದ್ದರು, ತಪ್ಪಿತಸ್ಥರ ಮೇಲೆ ಆಡಳಿತ ಮಂಡಳಿ ಯಾವುದೇ ಕ್ರಮ ಕೈಗೊಂಡಿಲ್ಲ. ಆದ್ದರಿಂದ, ಇಂದು ಎಲ್ಲಾ ವಿದ್ಯಾರ್ಥಿಗಳು ಸೇರಿ ಪ್ರತಿಭಟನೆ ನಡೆಸಿ ಡೀನ್ ಎ. ಎನ್. ಬೊಳ್ಳಮ್ಮ ಅವರಿಗೆ ಮನವಿ ಪತ್ರ ಸಲ್ಲಿಸಿದ್ದೇವೆ.
ಡೀನ್ ಅವರು ಒಂದೆರೆಡು ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ಲಿಖಿತ ರೂಪದಲ್ಲಿ ನೀಡಿದ್ದಾರೆ. ಒಂದು ವೇಳೆ ಯಾವುದೇ ಕ್ರಮ ಕೈಗೊಳ್ಳದಿದ್ದರೆ ಅಹೋರಾತ್ರಿ ಧರಣಿ ನಡೆಸುತ್ತೇವೆ ಎಂದರು.
ಈ ಸುದ್ದಿ ಓದಿದ್ದೀರಾ? ಮೈಸೂರು | ಮುಸ್ಲೀಮ್ ನಿಯೋಗದಿಂದ ಜಿಲ್ಲಾಧಿಕಾರಿಯವರಿಗೆ ಮನವಿ ಪತ್ರ ಸಲ್ಲಿಕೆ

ಪ್ರತಿಭಟನೆಯಲ್ಲಿ ಅನ್ನಪೂರ್ಣ, ಪ್ರಸನ್ನ, ಸ್ನೇಹ, ರಾಮಕೃಷ್ಣ, ಕೃಷ್ಣವೇಣಿ, ಜೀವನ್ ಸೇರಿದಂತೆ ಇನ್ನಿತರ ವಿದ್ಯಾರ್ಥಿಗಳು ಇದ್ದರು.