ಮೈಸೂರು | ಕಾನ್ವೋಕೇಶನ್ ಶುಲ್ಕ ಪಾವತಿಗೆ ವಿದ್ಯಾರ್ಥಿಗಳ ಪರದಾಟ: ಇ-ಗವರ್ನನ್ಸ್ ವ್ಯವಸ್ಥೆಗೆ ಒತ್ತಾಯ

Date:

ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಹಾಲ್ ಅಂಗಳದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಕಾನ್ವೋಕೇಶನ್ ಶುಲ್ಕ ಪಾವತಿ ಮಾಡಲು ಅವಕಾಶ ನೀಡಿರುವ ಹಿನ್ನೆಲೆ, ಮಾನಸಗಂಗೋತ್ರಿಯ ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಕಳೆದ ಒಂದು ವಾರದಿಂದ ಬ್ಯಾಂಕ್ ಮುಂದೆ ಉದ್ದ ಸಾಲಿನಲ್ಲಿ ನಿಂತು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

- Advertisement -

ಕಾನ್ವೋಕೇಶನ್ ಶುಲ್ಕ ಪಾವತಿಗೆ ಒಂದೇ ಬ್ಯಾಂಕ್ ಶಾಖೆಯಲ್ಲಿ ಚಲನ್ ಮೂಲಕ ಹಣ ಪಾವತಿಸುವ ವ್ಯವಸ್ಥೆ ಮಾಡಿರುವುದರಿಂದ ಪ್ರತಿದಿನ ನೂರಾರು ವಿದ್ಯಾರ್ಥಿಗಳು ಬ್ಯಾಂಕ್ ಮುಂದೆ ಸರತಿ ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ವಿಶ್ವವಿದ್ಯಾಲಯವು ಅರ್ಜಿ ಸಲ್ಲಿಕೆ ಹಾಗೂ ದಾಖಲಾತಿ ಪ್ರಕ್ರಿಯೆಗಳನ್ನು ಈಗಾಗಲೇ ಆನ್‌ಲೈನ್ ಮೂಲಕ ನಡೆಸುತ್ತಿದ್ದರೂ, ಶುಲ್ಕ ಪಾವತಿಗೆ ಮಾತ್ರ ಹಳೆಯ ಪದ್ಧತಿಯನ್ನೇ ಮುಂದುವರಿಸಿರುವುದು ವಿದ್ಯಾರ್ಥಿಗಳ ಅಸಮಾಧಾನಕ್ಕೆ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿಕ್ಕು ತೋಚದೆ ತಬ್ಬಿಬ್ಬಾಗಿರುವ ಚುನಾವಣಾ ಆಯೋಗ: ದಿನೇ ದಿನೆ...

ಸೆಪ್ಟೆಂಬರ್ 23ರ 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯ ವರದಿಯ ನಂತರ ಆಯೋಗ ಹಲವು ಸ್ಪಷ್ಟನೆಗಳನ್ನು ನೀಡಿದ್ದರೂ, ಒಂದು ಮುಖ್ಯ ಪ್ರಶ್ನೆಗೆ ಇನ್ನೂ ಉತ್ತರವಿಲ್ಲ: ಕಾನೂನುಬದ್ಧವಾಗಿ ಮತದಾರರ ಪಟ್ಟಿಯಲ್ಲಿದ್ದ 16 ಲಕ್ಷಕ್ಕೂ ಹೆಚ್ಚು ಜನರ...

ಸ್ಟಿಂಗ್ ಆಪರೇಷನ್ | ಭ್ರಷ್ಟಾಚಾರ ಬಯಲಿಗೆಳೆಯುವ ಸಾಧನವಾಗಬೇಕೇ ವಿನಾ...

ಆಡಳಿತ ಪಕ್ಷವನ್ನು ಪ್ರಶ್ನಿಸುವುದು ಪ್ರಜಾಪ್ರಭುತ್ವದ ಮೂಲಭೂತ ಕರ್ತವ್ಯ. ಆದರೆ, ವಿರೋಧ ಪಕ್ಷಗಳಿಗೂ ತಮ್ಮ ಆರೋಪಗಳನ್ನು ಸಮರ್ಥಿಸುವ ಹೊಣೆಗಾರಿಕೆ ಇದೆ. ರಾಜಕೀಯ ಲಾಭಕ್ಕಾಗಿ ಗಂಭೀರ ಆರೋಪಗಳನ್ನು ಮುಂದಿಡುವುದು ಮತ್ತು ಅವುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವ ಪ್ರಕ್ರಿಯೆಯನ್ನು...

ಬೇಡ್ತಿ ನದಿ ತಿರುವು ಯೋಜನೆಯೂ, ಬೊಮ್ಮಾಯಿ-ಕಾಗೇರಿ ಪೀಕಲಾಟವೂ

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇದ್ದಕ್ಕಿದ್ದಂತೆಯೇ ಬೇಡ್ತಿ-ವರದಾ ಮತ್ತು ಬೇಡ್ತಿ-ಧರ್ಮ-ವರದಾ ನದಿ ಜೋಡಣೆ ಎಂಬ ಅವಳಿ ಗುಮ್ಮಗಳು ಎದ್ದು ಕುಳಿತು ಬೆಚ್ಚಿ ಬೀಳಿಸಿವೆ. ಸ್ವರ್ಣವಲ್ಲೀ ಸ್ವಾಮಿ, ಎಂಪಿ ಕಾಗೇರಿ ಮತ್ತು...

ವಿದ್ಯಾರ್ಥಿ ತೇಜಸ್ ಕುಮಾರ್ ಮಾತನಾಡಿ, “ಬ್ಯಾಂಕ್‌ನಲ್ಲಿ ಇತರೆ ಕೆಲಸಗಳಿಗೆ ಬರುವ ಸಾರ್ವಜನಿಕರಿಗೂ ಇದರಿಂದ ತೊಂದರೆ ಆಗುತ್ತಿದೆ. ನೂರು ವರ್ಷಕ್ಕಿಂತ ಹೆಚ್ಚು ಇತಿಹಾಸ ಹೊಂದಿರುವ ಮೈಸೂರು ವಿಶ್ವವಿದ್ಯಾಲಯವು ಶುಲ್ಕ ಪಾವತಿಗೆ ಅಧಿಕೃತ ಆನ್‌ಲೈನ್ ಜಾಲತಾಣ ರೂಪಿಸಿ ವಿದ್ಯಾರ್ಥಿಗಳು ಸಾಲುಗಟ್ಟಿ ನಿಲ್ಲುವ ಪರಿಸ್ಥಿತಿ ತಪ್ಪಿಸಬೇಕು” ಎಂದು ಒತ್ತಾಯಿಸಿದರು.

1000317263

“ಪ್ರತಿದಿನ ಗಂಟೆಗಟ್ಟಲೆ ಸರತಿ ಸಾಲಿನಲ್ಲಿ ನಿಲ್ಲಬೇಕಾಗುತ್ತಿದೆ. ವಿದ್ಯಾರ್ಥಿಗಳಿಗೆ ಕೂರಲು ಆಸನ ವ್ಯವಸ್ಥೆ, ನೆರಳಿಗಾಗಿ ಚಾವಣಿ ಹಾಗೂ ಕುಡಿಯುವ ನೀರಿನಂತಹ ಮೂಲ ಸೌಲಭ್ಯಗಳನ್ನೂ ಕಲ್ಪಿಸಿಲ್ಲ. ಇದು ಅತ್ಯಂತ ಶೋಚನೀಯ ಪರಿಸ್ಥಿತಿ” ಎಂದು ಅವರು ಆರೋಪಿಸಿದರು.

ಸರ್ಕಾರಿ ಅನುದಾನಿತ ವಿಶ್ವವಿದ್ಯಾಲಯವಾಗಿ ವಿದ್ಯಾರ್ಥಿಗಳಿಗೆ ವೇಗವಾದ ಹಾಗೂ ಪಾರದರ್ಶಕ ಸೇವೆ ಒದಗಿಸುವ ನಿಟ್ಟಿನಲ್ಲಿ ಇ-ಆಡಳಿತ (E-Governance) ವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.

ಈ ಸುದ್ದಿ ಓದಿದ್ದೀರಾ?ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸಿಎಂ ಸಿದ್ದರಾಮಯ್ಯಗೆ ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ’ ವರದಿ ಸಲ್ಲಿಕೆ

ಇದೀಗಲಾದರೂ ಸಂಬಂಧಪಟ್ಟ ಆಡಳಿತ ಮಂಡಳಿ ಈ ಸಮಸ್ಯೆಯತ್ತ ಗಮನ ಹರಿಸಿ, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲು ಕ್ರಮ ಕೈಗೊಳ್ಳುವರೇ ಎಂಬುದನ್ನು ಕಾದು ನೋಡಬೇಕಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಕಬ್ಬು ಬೆಳೆಗಾರರು; ಬೈಪಾಸ್ ರಸ್ತೆ ತಡೆದು ಪ್ರತಿಭಟನೆ

ಕಬ್ಬಿಗೆ ಬೆಂಬಲ ಬೆಲೆ ಘೋಷಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ...

ಬಾಗಲಕೋಟೆ | ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಆದ್ಯತೆ ನೀಡಿ; ಅಧಿಕಾರಿಗಳಿಗೆ ವಿ.ರಶ್ಮಿ ಮಹೇಶ ಸೂಚನೆ

ಬಾಗಲಕೋಟೆ ಜಿಲ್ಲೆಯಲ್ಲಿ ಶೈಕ್ಷಣಿಕ ಪ್ರಗತಿ ಹಾಗೂ ಶಾಲಾ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ...

ಅ.15ರಂದು ದ.ಕ., ಉಡುಪಿ ಜಿಲ್ಲೆಗಳಿಗೆ ಸಿಎಂ ಡಿಕೆ ಶಿವಕುಮಾರ್ ಭೇಟಿ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅ.15ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ...

ರಾಯಚೂರು | ಕಸ ಹಾಕಿದರೆ ₹50 ಸಾವಿರ ದಂಡ: ಮಹಾನಗರ ಪಾಲಿಕೆ ಎಚ್ಚರಿಕೆ

ನಗರ ವ್ಯಾಪ್ತಿಯ ಖಾಲಿ ನಿವೇಶನಗಳಲ್ಲಿ ಕಸದ ರಾಶಿ ಹಾಗೂ ಕಟ್ಟಡ ಭಗ್ನಾವಶೇಷಗಳನ್ನು...