ಶಿಕ್ಷಕರೊಬ್ಬರು ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿರುವ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್‌ನಲ್ಲಿರುವ ಖಾಸಗಿ ಶಾಲೆಯಲ್ಲಿ ನಡೆದಿದೆ. ಹಲ್ಲೆಗೈದ ಶಿಕ್ಷಕನನ್ನು ಹುಮ್ನಾಬಾದ್ ಪೊಲೀಸರು ಬಂಧಿಸಿದ್ದು, ಆತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.
ನಗರೇಶ್ವರ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ದೈಹಿಕ ಶಿಕ್ಷಕ ರಮೇಶ್ ಬಂಧಿತ ಆರೋಪಿ. ಆತನ ವಿರುದ್ಧ ವಿದ್ಯಾರ್ಥಿಗಳ ಪೋಷಕರು ದೂರು ನೀಡಿದ್ದಾರೆ. ತರಗತಿಯಲ್ಲಿ ವಿದ್ಯಾರ್ಥಿಗಳು ಗಲಾಟೆ ಮಾಡಿದ್ದಾರೆ ಎಂಬ ಕಾರಣಕ್ಕೆ ಆ ವಿದ್ಯಾರ್ಥಿಗಳನ್ನು ಬೆತ್ತಲೆಗೊಳಿಸಿ ಶಿಕ್ಷಕ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಹಲ್ಲೆಯ ವಿಚಾರವನ್ನು ಯಾರಿಗೂ ಹೇಳದಂತೆ ಶಿಕ್ಷಕ ಬೆದರಿಕೆಯನ್ನೂ ಹಾಕಿದ್ದರು ಎಂದು ಕೂಡ ಆರೋಪಿಸಲಾಗಿದೆ.