ಬೀದರ್‌ | ಸ್ವಾತಂತ್ರ್ಯದ ಪ್ರಥಮ ಕಿಡಿ ಹೊತ್ತಿಸಿದ ಸುಭಾಷ ಚಂದ್ರ ಬೋಸ್ : ಓಂಪ್ರಕಾಶ ರೊಟ್ಟೆ

Date:

ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟದ ಕಿಡಿ ಹೊತ್ತಿಸಿದವರಲ್ಲಿ ನೇತಾಜಿ ಸುಭಾಷ ಚಂದ್ರ ಬೋಸ್‌ ಅವರು ಪ್ರಥಮರಾಗಿದ್ದಾರೆ ಎಂದು ವಿಶ್ವಕ್ರಾಂತಿ ದಿವ್ಯಪೀಠದ ಅಧ್ಯಕ್ಷ ಓಂಪ್ರಕಾಶ ರೊಟ್ಟೆ ಅಭಿಪ್ರಾಯಪಟ್ಟರು.

- Advertisement -

ಭಾಲ್ಕಿ ಪಟ್ಟಣದ ಸುಭಾಷ ಚಂದ್ರಬೋಸ್ ವೃತ್ತದಲ್ಲಿ ಗುರುವಾರ ನೇತಾಜಿ ಅಭಿಮಾನಿ ಬಳಗ ಹಾಗು ವಿಶ್ವಕ್ರಾಂತಿ ದಿವ್ಯಪೀಠದ ಸಹಯೋಗದಲ್ಲಿ ಆಯೋಜಿಸಿದ ನೇತಾಜಿ ಸುಭಾಷ ಚಂದ್ರಬೋಸ್ ಜಯಂತಿ ಮಹೋತ್ಸವದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಸುಭಾಷಚಂದ್ರ ಬೋಸ್ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಆಜಾದ್ ಹಿಂದ್ ಫೌಜ್ ಸ್ಥಾಪಿಸಿದರು. ದೇಶದ ಸ್ವಾತಂತ್ರ್ಯ ಹೋರಾಟದ ಮುಂಚೂಣಿಯಲ್ಲಿದ್ದ ನೇತಾಜಿಯವರು ಇಂಗ್ಲೀಷರಿಗೆ ಸಿಂಹ ಸ್ವಪ್ನವಾಗಿದ್ದರು. ಅವರ ಹೋರಾಟದ ಫಲವಾಗಿಯೇ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ಇಂದಿನ ಯುವ ಸಮೂಹ ಗಾಂಧೀಜಿ, ಚಂದ್ರಶೇಖರ್‌ ಆಜಾದ್‌, ನೇತಾಜಿ, ಭಗತ್‌ ಸಿಂಗ್‌ ಸೇರಿದಂತೆ ಅನೇಕ ಮಹಾತ್ಮರ ಆದರ್ಶಗಳು ಪಾಲಿಸಬೇಕುʼ ಎಂದು ತಿಳಿಸಿದರು.

ಭಾಲ್ಕಿ ಪುರಸಭೆ ಸದಸ್ಯ ಪಾಂಡುರಗ ಯಾದವರಾವ ಕನಸೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ʼಸ್ವಾಮಿ ವಿವೇಕಾನಂದರ ವಿಚಾರಧಾರೆಗಳಿಂದ ಪ್ರಭಾವಿತರಾದ ನೇತಾಜಿ ಸುಭಾಷ ಚಂದ್ರಬೋಸ್ ಅವರು ಭಾರತದ ಸ್ವಾತಂತ್ರ್ಯಕ್ಕಾಗಿಯೇ ಹಗಲಿರಳು ಹೋರಾಡಿದರು.ಇಂತಹ ಮಹಾನ್ ವ್ಯಕ್ತಿಯ ತತ್ವಾದರ್ಶಗಳನ್ನು ನಾವು ಮುನ್ನಡೆಸಬೇಕುʼ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಅಪರಿಚಿತ ವಾಹನ ಡಿಕ್ಕಿ : ಮಹಾರಾಷ್ಟ್ರ ಮೂಲದ ಇಬ್ಬರ ಸಾವು

ಕಾರ್ಯಕ್ರಮದಲ್ಲಿ ಕನ್ನಡಪರ ಸಂಘಟನೆಯ ಮುಖಂಡ ಜಯರಾಜ ಕೊಳ್ಳಾ ಹಾಗೂ ಪ್ರಮುಖರಾದ ಗೋವಿಂದರಾವ ಬಿರಾದಾರ್‌, ಪ್ರಭು ಡಿಗ್ಗೆ,ಸಂತೋಷ ಹಡಪದ, ವೆಂಕಟರಾವ್‌ ಬಿರಾದರ್‌, ಇಂಧ್ರಜಿತ್‌ ಪಾಂಚಾಳ, ರಾಜೇಂದ್ರ ಪಾಟೀಲ್‌, ಸಂತೋಷ ಪಾಟೀಲ್‌, ದೀಪಕ ಸಿಂಧೆ, ಸಂತೋಷ ಬಿಜಿ ಪಾಟೀಲ್‌, ಪ್ರಭಾಕರ ಬೆಳಕೆರೆ ಸೇರಿದಂತೆ ವಿದ್ಯಾರ್ಥಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...