ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ಸೋಮವಾರ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ್ ಪಾಟೀಲ್, ವಿಧಾನ ಪರಿಷತ್ ಸದಸ್ಯ ರಘುನಾಥ್ ಮಲ್ಕಾಪುರೆ, ಮಾಜಿ ಶಾಸಕರು ಹಾಗೂ ಮರಾಠ ನಿಗಮ ಮಂಡಳಿ ಮಾಜಿ ಅಧ್ಯಕ್ಷ ಎಂ. ಜಿ. ಮುಳೆ ಹಾಗೂ ಮುಖಂಡ ಬಸವರಾಜ್ ಆರ್ಯ ಅವರೊಂದಿಗೆ ತೆರಳಿ ಬೀದರ್ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆದ ಗೋವಿಂದ ರೆಡ್ಡಿ ಅವರಿಗೆ ಉಮೇದುವಾರಿಕೆ ಪತ್ರ ಸಲ್ಲಿಸಿದರು.
ಇಂದು ಸರಳ, ಸಾಂಕೇತಿಕವಾಗಿ ನಾಮಪತ್ರ ಪತ್ರ ಸಲ್ಲಿಸಿದ್ದಾರೆ. ಏಪ್ರಿಲ್ 18ರ ಗುರುವಾರ ಬೀದರ್ ಪಕ್ಷದ ಕಾರ್ಯಕರ್ತರ ಜನಬೆಂಬಲದೊಂದಿಗೆ ಮತ್ತೊಮ್ಮೆ ನಾಮಪತ್ರ ಸಲ್ಲಿಸಲಿದ್ದಾರೆ ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ವಿಜಯಪುರ | ಸಾವಿರಾರು ಬೆಂಬಲಿಗರೊಂದಿಗೆ ರಾಜು ಆಲಗೂರು ನಾಮಪತ್ರ ಸಲ್ಲಿಕೆ; ಬಿಸಿಲನ್ನೂ ಲೆಕ್ಕಿಸದೆ ಮೊಳಗಿದ ಕಾಂಗ್ರೆಸ್ ಜೈಕಾರ
ಎರಡು ಅವಧಿಗೆ ಸಂಸದರಾಗಿ ಆಯ್ಕೆಯಾದ ಭಗವಂತ ಖೂಬಾರವರು ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.