ಸುಬ್ರಹ್ಮಣ್ಯ | ಇಂದಿನಿಂದ ಕುಮಾರ ಪರ್ವತಕ್ಕೆ ಚಾರಣ: ಆನ್‌ಲೈನ್‌ ನೋಂದಣಿ ಮಾಡಿದರಷ್ಟೇ ಅವಕಾಶ

Date:

Advertisements

ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಪುಷ್ಪಗಿರಿ ವನ್ಯಧಾಮ ವ್ಯಾಪ್ತಿಯ ಕುಮಾರ ಪರ್ವತ ಚಾರಣಕ್ಕೆ ಇಂದಿನಿಂದ(ಅ.6) ಆರಂಭಗೊಂಡಿದ್ದು, ಆನ್‌ಲೈನ್‌ ಮೂಲಕ ನೋಂದಾಯಿಸಿದವರಿಗೆ ಮಾತ್ರ ಚಾರಣಕ್ಕೆ ಅವಕಾಶ ಇರಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕುಮಾರ ಪರ್ವತಕ್ಕೆ ಚಾರಣಕ್ಕೆ ತೆರಳಲು ಕುಕ್ಕೆ ಸಮೀಪದ ದೇವರಗದ್ದೆ ಎಂಬಲ್ಲಿಂದ ಅರಣ್ಯ ಪ್ರವೇಶಿಸಬೇಕು. ಸೋಮವಾರ ಪೇಟೆ ಬಳಿಯಿಂದಲೂ ಚಾರಣ ಆರಂಭಿಸಬಹುದು. ಕಳೆದ ವರ್ಷ ಕುಮಾರ ಪರ್ವತ ಚಾರಣಕ್ಕೆ ಭಾರೀ ಸಂಖ್ಯೆಯ ಚಾರಣಿಗರು ಬಂದಿದ್ದರಿಂದ ಸೀಮಿತ ಚಾರಣಿಗರಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಈ ವರ್ಷದಿಂದ ಆನ್‌ಲೈನ್ ಬುಕ್ಕಿಂಗ್, ಹೊಸ ಮಾರ್ಗಸೂಚಿಯೊಂದಿಗೆ ಪರಿಸರ ಸ್ನೇಹಿ ಚಾರಣಕ್ಕೆ ಅವಕಾಶ ನೀಡುವ ಬಗ್ಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಇತ್ತೀಚೆಗೆ ಮಾಹಿತಿ ನೀಡಿದ್ದರು.

ಈ ವರ್ಷದಿಂದ ಅರಣ್ಯ ಇಲಾಖೆಯ ಅರಣ್ಯ ವಿಹಾರ ಎಂಬ ವೆಬ್‌ಸೈಟ್‌ನಲ್ಲಿ ನೋಂದಣಿ ಮಾಡಿಸಿಕೊಂಡು ಚಾರಣ ಕೈಗೊಳ್ಳಬಹುದು. ದಿನಕ್ಕೆ 335 ಚಾರಣಿಗರಿಗೆ ಮಾತ್ರ ಅವಕಾಶ ಇರಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Advertisements

ಕುಕ್ಕೆ ಸುಬ್ರಹ್ಮಣ್ಯ – ಕುಮಾರಪರ್ವತ, ಕೊಡಗಿನ ಬೀದಹಳ್ಳಿ – ಕುಮಾರಪರ್ವತ – ಬೀದಹಳ್ಳಿ, ಬೀದಹಳ್ಳಿ- ಕುಮಾರಪರ್ವತ – ಸುಬ್ರಹ್ಮಣ್ಯ ಎಂಬ ಮೂರು ಆಯ್ಕೆಗಳನ್ನು ಪ್ರವೇಶ ಚಾರಣ ಮಾರ್ಗ ಆಯ್ಕೆ ಆನ್‌ಲೈನ್‌ ಬುಕ್ಕಿಂಗ್‌ನಲ್ಲಿ ಸೂಚಿಸಲಾಗಿದೆ.

ಕುಮಾರಪರ್ಚತ

ಕುಮಾರ ಪರ್ವತಕ್ಕೆ ಚಾರಣ ಕೈಗೊಳ್ಳುವವರು ಗಿರಿಗದ್ದೆಯಲ್ಲಿ ವಾಸ್ತವ್ಯ ಮಾಡಿ ಮರುದಿನ ಬೆಳಗ್ಗೆ ಕುಮಾರ ಪರ್ವತದ ಮೇಲಿನ ಸ್ಥಳಕ್ಕೆ ತೆರಳುತ್ತಿದ್ದರು. ಆದರೆ, ಈ ಬಾರಿ ಗಿರಿಗದ್ದೆಯಲ್ಲಿ ತಂಗುವುದನ್ನು ನಿರ್ಬಂಧಿಸಲಾಗಿದೆ.

ಕುಮಾರ ಪರ್ವತ ಚಾರಣ ಪ್ರವೇಶಕ್ಕೆ ಬೆಳಗ್ಗೆ 6ರಿಂದ 9ರ ಅವಧಿಯಲ್ಲಿ ಪ್ರವೇಶಿಸಬೇಕು. 11 ಗಂಟೆಗೆ ಗಿರಿಗದ್ದೆಯಿಂದ ಮೇಲಿನ ಪ್ರದೇಶಕ್ಕೆ ತೆರಳಬೇಕು. ಸಂಜೆ 6 ಗಂಟೆಗೂ ಮುನ್ನ ಚಾರಣದಿಂದ ನಿರ್ಗಮಿಸಬೇಕು. ಚಾರಣದ ಮಧ್ಯೆ ತಂಗಲು ಅವಕಾಶ ಇಲ್ಲ ಎಂಬುದೂ ಸೇರಿದಂತೆ ವಿವಿಧ ಮಾರ್ಗಸೂಚಿಗಳನ್ನು ಅರಣ್ಯ ಇಲಾಖೆ ಹೊರಡಿಸಿದೆ. ಅವುಗಳನ್ನು ಪಾಲಿಸದಿದ್ದಲ್ಲಿ ಸೂಕ್ತ ಕ್ರಮದ ಎಚ್ಚರಿಕೆಯನ್ನೂ ಕೂಡ ಚಾರಣಿಗರಿಗೆ ನೀಡಲಾಗಿದೆ.

ಇದನ್ನು ಓದಿದ್ದೀರಾ? ಮಂಗಳೂರು | ಮಾಜಿ ಶಾಸಕ ಮೊಯ್ದಿನ್ ಬಾವ ಸಹೋದರ ನಾಪತ್ತೆ: ಸೇತುವೆ ಮೇಲೆ ಕಾರು ಪತ್ತೆ

ಗಿರಿಗದ್ದೆಯಲ್ಲಿ ಈ ಬಾರಿ ತಂಗಲು ಅವಕಾಶ ನಿರ್ಬಂಧಿಸಿರುವುದರಿಂದ ಸುಬ್ರಹ್ಮಣ್ಯದಿಂದ ಸುಮಾರು 12 ಕಿ.ಮೀ. ದೂರದ ಕಠಿಣ ಹಾದಿಯ ಕುಮಾರ ಪರ್ವತವನ್ನು ಗರಿಷ್ಠ 12 ಗಂಟೆಯೊಳಗೆ ವೀಕ್ಷಿಸಿ ಹಿಂದಿರುಗುವಂತೆ ಚಾರಣಿಗರಿಗೆ ನಿರ್ದೇಶನ ನೀಡಲಾಗಿದೆ.

ಆನ್‌ಲೈನ್ ಮೂಲಕ ನೋಂದಣಿ ಮಾಡಬೇಕಾದ ವೆಬ್‌ಸೈಟ್ ವಿಳಾಸ: ನೋಂದಣಿ ಮಾಡಲು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಬಹುದು.
https://aranyavihaara.karnataka.gov.in/login

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X