ಮೈಸೂರು | ಇಂಧನ ದರ ಏರಿಕೆ ಖಂಡಿಸಿ ಎಸ್‌ಯುಸಿಐ(ಸಿ) ಪ್ರತಿಭಟನೆ

Date:

ಕೇಂದ್ರ ಬಿಜೆಪಿ ಸರ್ಕಾರ ಕಳೆದ 10 ದಿನಗಳಲ್ಲಿ ನಾಲ್ಕು ಬಾರಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳನ್ನು ಏರಿಕೆ ಮಾಡಿರುವ ಕ್ರಮವನ್ನು ಖಂಡಿಸಿ ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷದ ಮೈಸೂರು ಜಿಲ್ಲಾ ಸಮಿತಿಯು ನಗರದಲ್ಲಿ ಪ್ರತಿಭಟನೆ ನಡೆಸಿತು.

- Advertisement -

ನಗರದ ರಾಮಸ್ವಾಮಿ ವೃತ್ತದ ಬಳಿ ಸೇರಿದ್ದ ಪ್ರತಿಭಟನಾಕಾರರು ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ಇಂಧನ ದರ ಏರಿಕೆಯನ್ನು ತಕ್ಷಣ ವಾಪಸ್ ಪಡೆಯುವಂತೆ ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಮುಖಂಡರು, ಪಶ್ಚಿಮ ಏಷ್ಯಾದ ಯುದ್ಧದ ಕಾರಣದಿಂದ ಕಚ್ಚಾತೈಲದ ಬೆಲೆ ಏರಿಕೆಯಾಗಿದೆ ಎಂಬ ನೆಪವನ್ನು ಕೇಂದ್ರ ಸರ್ಕಾರ ನೀಡುತ್ತಿದೆ. ಆದರೆ ಯುದ್ಧ ಆರಂಭವಾದದ್ದು ಫೆಬ್ರವರಿ 28ರಂದು. ಪಂಚರಾಜ್ಯಗಳ ಚುನಾವಣೆಯ ಫಲಿತಾಂಶ ಪ್ರಕಟವಾಗುವವರೆಗೆ ತೈಲ ದರ ಏರಿಕೆಯನ್ನು ತಡೆಹಿಡಿದಿದ್ದಕ್ಕೆ ಬಿಜೆಪಿ ಸರ್ಕಾರವೇ ಉತ್ತರಿಸಬೇಕು ಎಂದು ಪ್ರಶ್ನಿಸಿದರು.

ಅಡುಗೆ ಅನಿಲ ಹಾಗೂ ಸಿಎನ್‌ಜಿ ದರಗಳನ್ನೂ ಏರಿಕೆ ಮಾಡಿರುವುದರಿಂದ ಜನಸಾಮಾನ್ಯರು, ಹೋಟೆಲ್ ಉದ್ಯಮಿಗಳು, ಆಟೋ ಚಾಲಕರು ಸೇರಿದಂತೆ ವಿವಿಧ ವರ್ಗದ ಜನರಿಗೆ ಆರ್ಥಿಕ ಹೊರೆ ಹೆಚ್ಚಾಗಿದೆ ಎಂದು ದೂರಿದರು.

ಕೋವಿಡ್ ಅವಧಿಯಲ್ಲಿ ಹಾಗೂ ನಂತರ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಕುಸಿದಾಗ ಅಥವಾ ರಷ್ಯಾದಿಂದ ರಿಯಾಯಿತಿ ದರದಲ್ಲಿ ತೈಲ ಖರೀದಿಸಿದಾಗ ಅದರ ಪ್ರಯೋಜನವನ್ನು ಜನರಿಗೆ ನೀಡದೇ, ಬದಲಿಗೆ ಕೇಂದ್ರ ಸರ್ಕಾರ ಅಬಕಾರಿ ಸುಂಕವನ್ನು ಹೆಚ್ಚಿಸಿದೆ ಎಂದು ಟೀಕಿಸಿದರು.

ಕಳೆದ 12 ವರ್ಷಗಳ ಬಿಜೆಪಿ ಆಡಳಿತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ರೂಪದಲ್ಲಿ ಕೇಂದ್ರ ಸರ್ಕಾರ ರೂ.43 ಲಕ್ಷ ಕೋಟಿ ಸಂಗ್ರಹಿಸಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಇಂಧನ ದರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ತೆರಿಗೆಯೇ ಪ್ರಮುಖ ಪಾಲು ಹೊಂದಿದೆ ಎಂದು ಹೇಳಿದರು.

ಈ ವಿಡಿಯೋ ವೀಕ್ಷಿಸಿ:https://youtu.be/AZ7t09oFqBM?si=zbu7mUsSm2Z7zX6L

ಇಂಧನ ದರ ಏರಿಕೆಯಿಂದ ಸಾರಿಗೆ ವೆಚ್ಚ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದು, ಜನರ ನೈಜ ಆದಾಯ ಕುಸಿಯುತ್ತಿದೆ. ಹೊಸ ಉದ್ಯೋಗಗಳೂ ಸೃಷ್ಟಿಯಾಗುತ್ತಿಲ್ಲ. ಆದ್ದರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಮ್ಮ ತೆರಿಗೆಗಳನ್ನು ಕಡಿತಗೊಳಿಸಿ, ಪರ್ಯಾಯ ಇಂಧನ ಮೂಲಗಳನ್ನು ಹುಡುಕಬೇಕು. ಜೊತೆಗೆ ಅಮೆರಿಕಾ ಮತ್ತು ಇಸ್ರೇಲ್ ದೇಶಗಳು ತಮ್ಮ ಸ್ವಾರ್ಥಕ್ಕಾಗಿ ಯುದ್ಧ ಹೂಡದಂತೆ ಜಾಗತಿಕ ಮಟ್ಟದಲ್ಲಿ ಒತ್ತಡ ತರಬೇಕು ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ?ಮಂಡ್ಯ | ಬಲಮುರಿ ನಿಷೇಧಾಜ್ಞೆ ನಡುವೆಯೂ ನೀರಿನಾಟ; ಜೀವಕ್ಕೆ ಸಂಚಕಾರ

ಪ್ರತಿಭಟನೆಯಲ್ಲಿ ಎಸ್‌ಯುಸಿಐ(ಸಿ) ಜಿಲ್ಲಾ ಕಾರ್ಯದರ್ಶಿ ಬಿ. ರವಿ, ಜಿಲ್ಲಾ ಸಮಿತಿಯ ಸದಸ್ಯರಾದ ಎಂ. ಉಮಾದೇವಿ, ಚಂದ್ರಶೇಖರ ಮೇಟಿ, ಸಂಧ್ಯಾ ಪಿ.ಎಸ್., ಸೀಮಾ ಜಿ.ಎಸ್., ಯಶೋಧರ್, ಹರೀಶ್, ಸುನಿಲ್, ಸುಮಾ, ಬಸವರಾಜು, ಚಂದ್ರಕಲಾ, ನೀತು ಶ್ರೀ, ಪುಷ್ಪ, ರಣಜಿತ್, ಪೂರ್ಣಿಮಾ, ನಿತಿನ್ ಮೊದಲಾದವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...

ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಅ.17ರಂದು ಬ್ರಹ್ಮಾವರದಲ್ಲಿ ಬೃಹತ್ ಹಕ್ಕೊತ್ತಾಯ ಸಭೆ

ಉಡುಪಿ ಜಿಲ್ಲೆಯಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಬೇಕೆಂಬ ಕರಾವಳಿ ಭಾಗದ ಜನರ ಬಹುದಿನಗಳ...

ವಿಜಯಪುರ | SIR ರದ್ದತಿಗೆ ಆಗ್ರಹಿಸಿ CPIMನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...