ಉಡುಪಿ | ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷನ ಆಡಿಯೋ ವೈರಲ್, ಸುಮೋಟೊ ಕೇಸ್ ದಾಖಲಿಸುವಂತೆ ಒತ್ತಾಯ

Date:

ಕಾರ್ಕಳದ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷನೊಬ್ಬ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ಮಾತನಾಡಿದ ಆಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಇದೊಂದು ಅಘಾತಕಾರಿ ಬೆಳವಣಿಗೆಯಾಗಿದೆ, ಪೋಲಿಸ್ ಇಲಾಖೆ ತಕ್ಷಣ ಈತನ ಮೇಲೆ ಸುಮೋಟೋ ಕೇಸು ದಾಖಲಿಸಿ ತನಿಖೆ ನಡೆಸಬೇಕೆಂದು ಯುವ ಕಾಂಗ್ರೆಸ್ ಆಗ್ರಹಿಸುತ್ತದೆ ಎಂದು ಕಾರ್ಕಳ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್‌ ಅಧ್ಯಕ್ಷರಾದ ಸೂರಜ್ ಶೆಟ್ಟಿ ನಕ್ರೆ ಆಗ್ರಹಿಸಿದ್ದಾರೆ.

- Advertisement -

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷನಾಗಿದ್ದು ಕಾರ್ಕಳದ ಪ್ರತಿಷ್ಠಿತ ಕಾಲೇಜೊಂದರಲ್ಲಿ ಉಪನ್ಯಾಸಕನಾಗಿರುವಾತ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ಮಾತನಾಡಿ ತಾನು ಹೇಳಿದ ಜಾಗಕ್ಕೆ ಬಾ ಎನ್ನುತ್ತಾ ತನ್ನೊಂದಿಗೆ ಸಹಕರಿಸುವಂತೆ ಪೀಡಿಸಿ ಮಾತನಾಡಿದ ಆಡಿಯೊ ವೈರಲ್ ಆಗುತ್ತಿರುವುದು ಸಭ್ಯ ನಾಗರಿಕರು ತಲೆ ತಗ್ಗಿಸುವಂತಾಗಿದೆ. ವಿದ್ಯಾರ್ಥಿನಿಯರ ಸುರಕ್ಷತೆಯ ದೃಷ್ಟಿಯಿಂದ ಈ ವ್ಯಕ್ತಿಯನ್ನು ಕಾಲೇಜಿನ ಆಡಳಿತ ಮಂಡಳಿ ತಕ್ಷಣ ಈತನ ಉಪನ್ಯಾಸಕ ಹುದ್ದೆಯಿಂದ ವಜಾಗೊಳಿಸಬೇಕು ಹಾಗೂ ಉಡುಪಿ ಜಿಲ್ಲಾ ಬಿಜೆಪಿ ಇಂತಾ ಹೆಣ್ಣುಬಾಕ ವ್ಯಕ್ತಿಯನ್ನು ಹುದ್ದೆಯಿಂದ ಮತ್ತು ಪಕ್ಷದಿಂದ ಉಚ್ಚಾಟಿಸಿ ತನ್ನ ಸಾರ್ವಜನಿಕ ಹಿತಾಸಕ್ತಿಯನ್ನು ಕಾಪಾಡಬೇಕು ಎಂದು ಯುವ ಕಾಂಗ್ರೆಸ್‌ ಒತ್ತಾಯಿಸುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...
1005755650

ವಿದ್ಯಾರ್ಥಿನಿಯರೊಂದಿಗೆ ಈತನ ವರ್ತನೆ ಅಘಾತಕಾರಿಯಾಗಿದೆ, ಕಾರ್ಕಳದಲ್ಲಿ ಇಷ್ಟರವರೆಗೆ ಶಿಕ್ಷಕರು ಈ ರೀತಿಯ ವರ್ತನೆ ತೋರಿದ ಇತಿಹಾಸವಿಲ್ಲ, ಈತನ ವರ್ತನೆಯಿಂದ ಶಿಕ್ಷಕ ವರ್ಗಕ್ಕೂ ಕಳಂಕವಾಗಿದೆ. ಈ ಹಿಂದೆಯೂ ಈತ ಇಂತದ್ದೇ ಅಸಭ್ಯ ಚಟುವಟಿಕೆ ನಡೆಸಿದ ಕಾರಣಕ್ಕೆ ಕಾರ್ಕಳದ ಪ್ರತಿಷ್ಠಿತ ಕಾಲೇಜಿನ ಉದ್ಯೋಗದಿಂದ ವಜಾಗೊಂಡಿದ್ದ. ಹೆಣ್ಣುಮಕ್ಕಳಿಗೆ, ವಿದ್ಯಾರ್ಥಿನಿಯರಿಗೆ ಪೀಡಿಸುವ ಈತನ ಆಡಿಯೊದಿಂದ ಹೆತ್ತವರು ಮತ್ತು ವಿದ್ಯಾರ್ಥಿನಿಯರು ಆತಂಕಕ್ಕೆ ಒಳಗಾಗಿದ್ದು ಈ ರೀತಿಯ ಅನಾಚಾರದ ಕೆಲಸ ಮಾಡುವ ವ್ಯಕ್ತಿಯನ್ನು ಬಿಜೆಪಿ ಇನ್ನೂ ಪಕ್ಷದ ಹುದ್ದೆಯಲ್ಲಿ ಮುಂದುವರಿಸಿರುವುದು ಶೋಭೆಯಲ್ಲ, ಬಿಜೆಪಿಯ ನಾಯಕರು ಇನ್ನಾದರೂ ಎಚ್ಚೆತ್ತು ಈತನನ್ನು ಪಕ್ಷದಿಂದ ವಜಾ ಮಾಡಬೇಕು ಮತ್ತು ಸಂಭಂದಪಟ್ಟ ಕಾಲೇಜಿನ ಆಡಳಿತ ಮಂಡಳಿ ಈತನನ್ನು ಉದ್ಯೋಗದಿಂದ ವಜಾ ಮಾಡಬೇಕು ಮತ್ತು ಪೋಲಿಸ್ ಇಲಾಖೆ ಈತನ ವಿರುದ್ದ ಸುಮೋಟೋ ಕೇಸು ದಾಖಲಿಸಿ ಈತನನ್ನು ಬಂಧಿಸಿ ತನಿಖೆ ನಡೆಸಬೇಕು. ಇಂತಾ ಗೋಮುಖ ವ್ಯಾಘ್ರ ಸ್ತ್ರೀ ಪೀಡಕರನ್ನು ಕಾನೂನಿನ ಕುಣಿಕೆಗೆ ಒಪ್ಪಿಸದಿದ್ದರೆ ಹೆಣ್ಣುಮಕ್ಕಳಿಗೆ, ವಿದ್ಯಾರ್ಥಿನಿಯರಿಗೆ ಅಪಾಯವಿದೆ, ಹಾಗಾಗಿ ಈತನ ವಿರುದ್ಧ ಪೋಲಿಸ್ ಇಲಾಖೆ ತಕ್ಷಣ ಕೇಸು ದಾಖಲಿಸಿ ಬಂಧನ ಮಾಡಬೇಕು ತಪ್ಪಿದಲ್ಲಿ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಕಾರ್ಕಳ ಯುವ ಕಾಂಗ್ರೆಸ್ ಅಧ್ಯಕ್ಷರಾದ ಸೂರಜ್ ಶೆಟ್ಟಿ ನಕ್ರೆ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಡಗೋಡ | ಆರೋಗ್ಯ ವ್ಯವಸ್ಥೆ ಸುಧಾರಣೆಗೆ ಸಚಿವರಿಗೆ ಮನವಿ

ಮುಂಡಗೋಡ: ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಅಗತ್ಯ ಮೂಲಭೂತ ಸೌಕರ್ಯ ಹಾಗೂ...

ಯಾದಗಿರಿ | ಎಕರೆಗೆ ₹25 ಸಾವಿರ ಬರ ಪರಿಹಾರ, ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡುವಂತೆ ರೈತ ಸಂಘ ಆಗ್ರಹ

ಯಾದಗಿರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಪ್ರತಿ ರೈತರ...

ಕುಮಟಾ | ದೇವಿಮನೆ ಘಟ್ಟದಲ್ಲಿ KSRTC ಬಸ್ ಕಂದಕಕ್ಕೆ; 18 ಮಂದಿಗೆ ಗಾಯ

ಕುಮಟಾ: ತಾಲೂಕಿನ ದೇವಿಮನೆ ಘಟ್ಟದ 2ನೇ ತಿರುವಿನ ಬಳಿ ಗುರುವಾರ ರಾತ್ರಿ...

ಯಾದಗಿರಿ | ಸಮರ್ಪಕ ಕೂಲಿ ಪಾವತಿಗೆ ಆಗ್ರಹ: ರಸ್ತಾಪುರ ಗ್ರಾಪಂ ಕಚೇರಿ ಎದುರು ರೈತ ಸಂಘ ಧರಣಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಮಾಡಿರುವ...