ಬೀದರ್‌ | ವ್ಯಕ್ತಿಯಲ್ಲಿ ಬದಲಾವಣೆ ಲಕ್ಷಣ ಕಂಡರೆ ಆತ್ಮಹತ್ಯೆ ತಡೆಯಲು ಸಾಧ್ಯ: ನ್ಯಾ. ಕನಕಟ್ಟೆ

Date:

  • ಆತ್ಮಹತ್ಯೆಗೆ ಒಳಗಾಗುವುದು ಒಂದೇ ಪರಿಹಾರವಲ್ಲ, ಸಮಸ್ಯೆಗಳು ಧೈರ್ಯದಿಂದ ಎದುರಿಸಬೇಕು.
  • ದೈಹಿಕ ಆರೋಗ್ಯ ಜೊತೆಗೆ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹಳ ಅವಶ್ಯಕ

ಆತ್ಮಹತ್ಯೆ ತಡೆಯಲು ಮೊದಲು ವ್ಯಕ್ತಿಯಲ್ಲಿನ ಲಕ್ಷಣಗಳನ್ನು ಕಂಡು ಹಿಡಿದು, ಅವರ ಮನ ನೋವಾಗದಂತೆ ನೋಡಿಕೊಳ್ಳಬೇಕು. ಶಿಕ್ಷಣ , ಹುದ್ದೆಯಲ್ಲಿ ಮನನೊಂದವರು ಆತ್ಮಹತ್ಯೆಗೆ ಶರಣಾಗುವುದು ಮೂಲ ಕಾರಣವಿರುವುದಿಲ್ಲ ಎಂದು ಹಿರಿಯ ಸಿವಿಲ್ ನ್ಯಾಯಧೀಶ ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿದ್ರಾಮಪ್ಪಾ ಕೆ. ಕನಕಟ್ಟೆ ಹೇಳಿದರು.

- Advertisement -

ಬೀದರ ನಗರದ ಕರ್ನಾಟಕ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ ನಡೆದ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ” ನಾವು ನಮ್ಮ ಹತ್ತಿರ ಇರುವ ವಿಷಯವನ್ನು ಬೇರೊಬ್ಬರಿಗೆ ಹಂಚಿಕೊಳ್ಳುವುದರಿಂದ ಒಳ್ಳೆಯ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಹಾಯವಾಗುತ್ತದೆ. ಓದಿನಲ್ಲಿ ಮಕ್ಕಳು ಕಡಿಮೆ ಓದಿದ್ದೇನೆ ಎಂದು ಕುಗ್ಗದೇ ಹೆಚ್ಚು ಓದಿ, ಒಳ್ಳೆ ಹುದ್ದೆಯಿದೆ ಎಂದು ಹಿಗ್ಗದೇ, ಸಮವಾಗಿರಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕೆ.ಆರ್.ಇ.ಸಂಸ್ಥೆ ಜಂಟಿ ಕಾರ್ಯದರ್ಶಿ ಸತೀಶ ಪಾಟೀಲ್ ಮಾತನಾಡಿ, “ಸಮಸ್ಯೆಗಳು ಧೈರ್ಯದಿಂದ ಎದುರಿಸಬೇಕು, ಆತ್ಮಹತ್ಯೆಗೆ ಒಳಗಾಗುವುದು ಒಂದೇ ಪರಿಹಾರವಲ್ಲ, ಮೊದಲು ಸೂಕ್ಷ್ಮ ಆಪ್ತಸಮಾಲೋಚಕರು ಮತ್ತು ಮನೋವೈದ್ಯರ ಸಲಹೆಯನ್ನು ಪಡೆಯುವಂತೆ” ಸಲಹೆ ನೀಡಿದರು.

ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ.ಕಿರಣ ಪಾಟೀಲ್ ಮಾತನಾಡಿ, “ಆತ್ಮಹತ್ಯೆಗೆ ಒಳಗಾಗುವ ಮೊದಲು ವ್ಯಕ್ತಿಯ ವರ್ತನೆಯನ್ನು ಗಮನಿಸಬೇಕು. ನಿದ್ದೆ ಬರದೆ ಇರುವುದು, ಅತೀಯಾದ ಸಿಟ್ಟು, ಸಾಮಾಜಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳದೆ ಇರುವುದು, ಒಂಟಿಯಾಗಿರುವುದು ವ್ಯಕ್ತಿಯಲ್ಲಿ ಇಂತಹ ಲಕ್ಷಣಗಳು ಕಂಡುಬಂದಲ್ಲಿ, ಮನೋವೈದ್ಯರ ಹಾಗೂ ಆಪ್ತಸಮಾಲೋಚಕರ ಸಲಹೆಯನ್ನು ಪಡೆದುಕೊಳ್ಳಬೇಕೆಂದು” ಹೇಳಿದರು.

ಕರ್ನಾಟಕ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಉಪ ಪ್ರಾಂಶುಪಾಲ ಡಾ. ಅನೀಲಕುಮಾರ ಚಿಕ್ಕಮಣನೂರ ಮಾತನಾಡಿ, “ವಿದ್ಯಾರ್ಥಿಗಳು ಮಾನಸಿಕ ಆರೋಗ್ಯವನ್ನು ಪಡೆಯಲು ಮುಜುಗರ ಪಡದೆ ಸಾಧ್ಯವಾದಲ್ಲಿ 14416 ಟೆಲಿ ಮಾನಸಾ ಟೊಲ್‌ಫ್ರೀ ನಂಬರ್‌ಗೆ ಕರೆ ಮಾಡಿ, ಪರಿಹಾರವನ್ನು ಕಂಡುಕೊಳ್ಳುವ ಬಗ್ಗೆ ಹೇಳಿದರು.

ಹಿರಿಯ ವಕೀಲ ಬಿ.ಎಸ್. ಪಾಟೀಲ್ , ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನೋವೈದ್ಯ ಡಾ. ಅಮಲ ಶರೀಫ್ ಮಾತನಾಡಿದರು. ಮಾನಸಿಕ ಆರೋಗ್ಯ ವಿಭಾಗ, ಬ್ರಿಮ್ಸ್ ಆಸ್ಪತ್ರೆಯ ಮನೋವೈದ್ಯ ಡಾ. ರಾಘವೇಂದ್ರ ವಾಗೋಲೆ ರವರು ಆತ್ಮಹತ್ಯೆ ತಡೆಗಟ್ಟುವ ಕುರಿತು ಉಪನ್ಯಾಸವನ್ನು ನೀಡಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | 57 ವರ್ಷಗಳ ಹಿಂದೆ ಎಮ್ಮೆ ಕದ್ದಿದ್ದ ಆರೋಪಿ ಬಂಧನ

ಕಾರ್ಯಕ್ರಮದಲ್ಲಿ ಹಿರಿಯ ನಿರೀಕ್ಷಣಾಧಿಕಾರಿ ವೀರಶೆಟ್ಟಿ ಚನ್ನಶೆಟ್ಟಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮನೋಶಾಸ್ತ್ರಜ್ಞ ಮಲ್ಲಿಕಾರ್ಜುನ ಗುಡ್ಡೆ, ಆಪ್ತ ಸಮಾಲೋಚಕಿ ರೇಣುಕಾ, ಆರೋಗ್ಯ ಇಲಾಖೆಯ ಸಿಬ್ಬಂದಿಗಳಾದ ಶಾಮರಾವ, ರಮೇಶ, ಅಬ್ದುಲ ಹೈ, ಇಮಾನುವೇಲ್, ಜ್ಯೋತಿ, ಬ್ರಹ್ಮರಾಂಭದೇವಿ, ಸಾಮಾಜಿಕ ಕಾರ್ಯಕರ್ತ ಪರಶುರಾಮ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗದ ವಿದ್ಯಾರ್ಥಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...