ಸುಳ್ಯ ತಾಲ್ಲೂಕಿನ ಚೆಂಬು ಗ್ರಾಮದ ದಬ್ಬಡ್ಕದಲ್ಲಿ ಆನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ದಬ್ಬಡ್ಕ ಕೊಪ್ಪದ ಶಿವಪ್ಪ (72) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಅವರು ಆ.6 ರಂದು ರಾತ್ರಿ 11 ಗಂಟೆಗೆ ಮನೆಯ ಹತ್ತಿರ ನಾಯಿ ಬೊಗಳುತ್ತಿರುವ ಶಬ್ದ ಕೇಳಿ ತೋಟದ ಕಡೆ ಹೋದ ಸಂದರ್ಭದಲ್ಲಿ ಆನೆ ತುಳಿದಿದು ಸಾಯಿಸಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ಸಂಪಾಜೆ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ದಾರಿ ಮಧ್ಯೆ ಮೃತ ಪಟ್ಟಿದ್ದಾರೆ.
ಇದನ್ನೂ ಓದಿ: ಧರ್ಮಸ್ಥಳ | ಯೂಟ್ಯೂಬರ್‌ಗಳ ಮೇಲೆ ಹಲ್ಲೆ ಪ್ರಕರಣ: ಓರ್ವ ಆರೋಪಿಯ ಬಂಧನ
ತಾಲ್ಲೂಕಿನ ಹಲವು ಭಾಗಗಳಲ್ಲಿ ನಿರಂತರ ಆನೆ ದಾಳಿಯಿಂದ ಕಂಗಾಲಾಗಿದ್ದ ಕೃಷಿಕರಿಗೆ ರೈತನ ಸಾವು ಅರಣ್ಯ ಇಲಾಖೆಯ ವಿರುದ್ಧದ ಆಕ್ರೋಶಕ್ಕೆ ಕಾರಣವಾಗಿದೆ. ಆನೆ ದಾಳಿ ಮಾಡುತ್ತಿರುವ ಬಗ್ಗೆ ಹಾಗೂ ಆನೆ ಓಡಿಸಲು ಕ್ರಮ ಕೈಗೊಳ್ಳಬೇಕೆಂದು ಹಲವು ಬಾರಿ ಅಧಿಕಾರಿಗಳಿಗೆ ಮನವಿ ನೀಡಿದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಇಲ್ಲಿ ಆಗುತ್ತಿರುವ ರೈತ ಸಾವಿಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ನೇರ ಕಾರಣ ಎಂದು ನಿವಾಸಿಗಳು ಆಕ್ರೋಶ ಹೊರಹಾಕಿದ್ದಾರೆ.
