ಉಡುಪಿ | RSS ಕಾರ್ಯಕ್ರಮಗಳಿಗೆ ನಿಷೇಧ ವಿಧಿಸಬೇಕೆಂಬ ಬೇಡಿಕೆಗೆ ಬೆಂಬಲ : ಸುಂದರ ಮಾಸ್ಟರ್

Date:

ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಅಂಬೇಡ್ಕರ್ ವಾದದ ರಾಜ್ಯ ಸಂಘಟನಾ ಸಂಚಾಲಕರಾದ ಸುಂದರ ಮಾಸ್ಟರ್, ಸರಕಾರಿ ಸ್ವಾಮ್ಯದ ಸ್ಥಳಗಳಲ್ಲಿ ಹಾಗೂ ಸರಕಾರದ ಅಧೀನ ಸಂಸ್ಥೆಗಳಲ್ಲಿ ಆರ್‌ಎಸ್‌ಎಸ್‌ ಕಾರ್ಯಕ್ರಮಗಳನ್ನು ನಿಷೇಧಿಸಬೇಕೆಂದು ಬಿ.ಕೆ. ಹರಿಪ್ರಸಾದ್ ಮತ್ತು ಪ್ರಿಯಾಂಕ ಖರ್ಗೆ ಅವರ ಪ್ರತಿಪಾದನೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

- Advertisement -

ಈ ಬಗ್ಗೆ ಪತ್ರಿಕಾ ಪ್ರಕಟಣೆಯ ನೀಡಿರುವ ಅವರು, ಒಂದು ನೊಂದಣಿಯೇ ಆಗದ ಸಂಘಟನೆಯಾದ ಆರ್‌ಎಸ್‌ಎಸ್‌ನ ಭಯೋತ್ಪಾದಕ ಚಟುವಟಿಕೆಗಳನ್ನು ನಿಷೇಧಿಸಬೇಕು ಎಂಬುದು ಈ ದೇಶದ ಪ್ರಜಾಪ್ರಭುತ್ವವಾದಿಗಳ ಧ್ವನಿ. ಸಂವಿಧಾನ ವಿರೋಧಿ, ರಾಷ್ಟ್ರಧ್ವಜ ವಿರೋಧಿ ಹಾಗೂ ಸಮಾನತೆ ವಿರೋಧಿ ಸಂಘಟನೆಯಾದ ಆರ್‌ಎಸ್‌ಎಸ್‌ಗೆ ಬೆಂಗಳೂರಿನ ಮುಖ್ಯರಸ್ತೆಗಳಲ್ಲಿ ಲಾಠಿ ಹಿಡಿದು ಪಥಸಂಚಲನ ಮಾಡಲು ಅನುಮತಿ ನೀಡಿರುವುದು ನಾಚಿಕೆಗೇಡಿನ ಸಂಗತಿ ಎಂದು ಅವರು ಖಂಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ನೂರು ವರ್ಷ ತುಂಬಿದ ಆರ್‌ಎಸ್‌ಎಸ್ ಈ ಪ್ರಜಾಪ್ರಭುತ್ವ ದೇಶದಿಗಾಗಿ ಮಾಡಿದ ಯಾವುದೇ ಘನಾಂದಾರಿ ಕೆಲಸದ ದಾಖಲೆ ಇಲ್ಲ. ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಒಬ್ಬರೂ ಆರ್‌ಎಸ್‌ಎಸ್ ಧುರೀಣ ಬಲಿದಾನ ಮಾಡಿದ ಉದಾಹರಣೆ ಇಲ್ಲ. ಬ್ರಿಟಿಷರ ಪರವಾಗಿ ಕೆಲಸ ಮಾಡುವ ತಪ್ಪೋಪ್ಪಿಗೆ ಪತ್ರ ಬರೆದ ಸಂಘಟನೆಯವರು ಇಂದು ದೇಶಭಕ್ತಿಯ ಪಾಠ ಬೋಧಿಸುತ್ತಿರುವುದು ವಿಪರ್ಯಾಸವಾಗಿದೆ ಎಂದು ಅವರು ಹೇಳಿದರು.

ಆರ್‌ಎಸ್‌ಎಸ್‌ನ ನೂರು ವರ್ಷಗಳ ಸಾಧನೆ ಎಂದರೆ ಚಡ್ಡಿಯಿಂದ ಪ್ಯಾಂಟಿಗೆ ಬಂದ ಅಭಿವೃದ್ದಿ ಮಾತ್ರ. ಸನಾತನ ಧರ್ಮದ ಹೆಸರಿನಲ್ಲಿ ಅಸಮಾನತೆಯನ್ನು ಬೆಳೆಸುವ, ಚಾತುರ್ವರ್ಣ ವ್ಯವಸ್ಥೆಯನ್ನು ಪೋಷಿಸುವ ಆರ್‌ಎಸ್‌ಎಸ್, ಸಮಾಜದ ಶೂದ್ರ ವರ್ಗದ ಕೈಯಿಂದಲೇ ತಮ್ಮ ಬ್ರಾಹ್ಮಣ್ಯವನ್ನು ಬಲಪಡಿಸುತ್ತಿದೆ. ಇದರ ಅರಿವು ಜನತೆ ಹೊಂದಬೇಕು.

ಬಿಜೆಪಿ ಸರ್ಕಾರದ ಮೂಲಕ ತಮ್ಮ ಅಜೆಂಡಾಗಳನ್ನು ಜಾರಿಗೊಳಿಸುತ್ತಿರುವ ಆರ್‌ಎಸ್‌ಎಸ್‌ ತೆರೆಯ ಹಿಂದೆ ನಿಂತು ರಾಜಕೀಯವನ್ನು ನಿಯಂತ್ರಿಸುತ್ತಿದೆ ಎಂದು ಆರೋಪಿಸಿದ ಅವರು, ಡಿ.ಎಸ್‌.ಎಸ್.ಗೆ ಫ್ರೀಡಂ ಪಾರ್ಕ್‌ನಲ್ಲಿ ಮಾತ್ರ ಪ್ರತಿಭಟನೆಗೆ ಅವಕಾಶ ನೀಡುವ ಈ ಸರಕಾರ, ಆರ್‌ಎಸ್‌ಎಸ್‌ಗೆ ಮುಖ್ಯರಸ್ತೆಗಳಲ್ಲಿ ಲಾಠಿ ಹಿಡಿದು ಮೆರವಣಿಗೆ ನಡೆಸಲು ಅವಕಾಶ ನೀಡುವುದರಿಂದ ಸನಾತನ ಪರ ನಿಲುವು ತೋರಿಸಿದೆ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.2ರಂದು ಟಿ. ನರಸೀಪುರದಲ್ಲಿ ಕೋಮು ಸೌಹಾರ್ದತೆಗಾಗಿ ಬೃಹತ್ ಸಮಾವೇಶ

ಟಿ. ನರಸೀಪುರ ಪಟ್ಟಣದಲ್ಲಿ ಇತ್ತೀಚೆಗೆ ಗಣೇಶ ವಿಸರ್ಜನಾ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಉಂಟಾಗಿರುವ...

ವಿಜಯಪುರ | ಸ್ಮಶಾನಕ್ಕೆ ಮೂಲಸೌಕರ್ಯ ಕಲ್ಪಿಸಲು ಆಗ್ರಹ

ವಿಜಯಪುರ ನಗರದ ಬೊಂಬಳ ಆಗಸಿ ಪ್ರದೇಶದಲ್ಲಿರುವ ಚಲವಾದಿ ಸಮಾಜದ ಸ್ಮಶಾನಕ್ಕೆ ಅಗತ್ಯ...

ಕಾರವಾರ | ಫ್ಲೈ ಓವರ್ ಕೆಳಗಿನ ಸರ್ಕಾರಿ ಜಾಗದಲ್ಲಿ ಅನಧಿಕೃತ ನರ್ಸರಿ

ಉತ್ತರ ಕನ್ನಡ ಜಿಲ್ಲೆ ಕಾರವಾರ ನಗರದ ಹೆದ್ದಾರಿ ಫ್ಲೈ ಓವರ್ ಕೆಳಭಾಗದ...

ಕೋಲಾರ | ಜಿಲ್ಲೆಗೆ ₹600 ಕೋಟಿ‌ ಬರ ಪರಿಹಾರ ನೀಡಲು ಜೆಡಿಎಸ್ ಆಗ್ರಹ

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದರೂ ರೈತರಿಗೆ ಸಮರ್ಪಕ ಬರ ಪರಿಹಾರ...