ಉಡುಪಿ | ಪಂಚ ಗ್ಯಾರಂಟಿಯೊಂದಿಗೆ ಮೊದಲು ಆರೋಗ್ಯ ಗ್ಯಾರಂಟಿ ನೀಡಲಿ : ಸುಂದರ ಮಾಸ್ತರ್ ಆಗ್ರಹ

Date:

ಅಸ್ಪೃಶ್ಯರು, ಬಡವರು, ಕೂಲಿ ಕಾರ್ಮಿಕರು ಮತ್ತು ಬುಡಕಟ್ಟು ಸಮುದಾಯದ ಜನರಿಗೆ ಮೊತ್ತಮೊದಲಾಗಿ ಆರೋಗ್ಯ ಗ್ಯಾರಂಟಿ ನೀಡಬೇಕು. ಜನರು ಆರೋಗ್ಯದಿಂದ ಬದುಕಿದರೆ ಮಾತ್ರ ಸರ್ಕಾರದ ಪಂಚ ಗ್ಯಾರಂಟಿಗಳು ಅರ್ಥಪೂರ್ಣವಾಗುತ್ತವೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದದ ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ತರ್ ಒತ್ತಾಯಿಸಿದರು.

- Advertisement -

ಫೆಬ್ರವರಿ 2ರಿಂದ 17ರವರೆಗೆ ರಾಜ್ಯದ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ನಡೆಯಲಿರುವ ಆರೋಗ್ಯ ಹಕ್ಕಿನ ಜಾಥಾ ಕುರಿತು ಮಾತನಾಡಿದ ಅವರು, ಸರ್ಕಾರದ ಆರೋಗ್ಯ ನೀತಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಸರ್ಕಾರಿ ಆಸ್ಪತ್ರೆಗಳನ್ನು ಖಾಸಗಿಯವರ ಸಹಭಾಗಿತ್ವಕ್ಕೆ (PPP – Public Private Partnership) ವಹಿಸಲಾಗುತ್ತಿದೆ. ಬಹುತೇಕ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ಕೊರತೆ ಇದೆ. ವೈದ್ಯರು ಹೊರಗಿನ ಖಾಸಗಿ ಮೆಡಿಕಲ್‌ಗಳಿಗೆ ಚೀಟಿ ಬರೆದು ಕೊಡುತ್ತಿರುವುದು ಸಾಮಾನ್ಯವಾಗಿದೆ. ಸರ್ಕಾರಿ ಆಸ್ಪತ್ರೆಗಳನ್ನೇ ಅವಲಂಬಿಸಿರುವ ದಲಿತರು, ಬುಡಕಟ್ಟು ಸಮುದಾಯದವರು ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ಚಿಕಿತ್ಸೆಯನ್ನು ಭರಿಸಲು ಆಗದೆ ಚಿಕ್ಕ ವಯಸ್ಸಿನಲ್ಲೇ ಜೀವ ಕಳೆದುಕೊಳ್ಳುವಂತಾಗಿದೆ ಎಂದು ಅವರು ದೂರಿದರು.

ಖಾಸಗಿ ಸಹಭಾಗಿತ್ವದ ಹೆಸರಿನಲ್ಲಿ ನಡೆಯುತ್ತಿರುವ ಸರ್ಕಾರಿ ಆಸ್ಪತ್ರೆಗಳು ಭಾರೀ ಚಿಕಿತ್ಸಾ ವೆಚ್ಚ ವಿಧಿಸುತ್ತಿದ್ದು, ಇದರಿಂದ ಬಡವರು ಸಂವಿಧಾನ ದತ್ತವಾದ ಆರೋಗ್ಯ ಹಕ್ಕಿನಿಂದ ವಂಚಿತರಾಗುತ್ತಿದ್ದಾರೆ. ಈ ಕಾರಣದಿಂದಲೇ PPP ವ್ಯವಸ್ಥೆಯನ್ನು ಕೂಡಲೇ ಕೈಬಿಡಬೇಕು ಎಂದು ಸುಂದರ ಮಾಸ್ತರ್ ಆಗ್ರಹಿಸಿದರು.

PPP ವ್ಯವಸ್ಥೆಯನ್ನು ತಕ್ಷಣ ರದ್ದುಗೊಳಿಸದಿದ್ದರೆ, ಮುಂದಿನ ದಿನಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಬುಡಕಟ್ಟು ಸಮುದಾಯದವರು ಹಾಗೂ ದಲಿತರು ಸರ್ಕಾರದ ಇತರ ಗ್ಯಾರಂಟಿಗಳನ್ನೂ ತಿರಸ್ಕರಿಸುವ ಪರಿಸ್ಥಿತಿ ಎದುರಾಗಬಹುದು ಎಂದು ಅವರು ಎಚ್ಚರಿಸಿದರು.

ಸರ್ಕಾರಿ ಆಸ್ಪತ್ರೆಗಳ ಅವ್ಯವಸ್ಥೆ ವಿರೋಧಿಸಿ ರಾಜ್ಯಾದ್ಯಂತ ನಡೆಯಲಿರುವ ಪ್ರತಿಭಟನಾ ಜಾಥೆಯ ಭಾಗವಾಗಿ, ಉಡುಪಿಯಲ್ಲಿ ಫೆಬ್ರವರಿ 10ರಂದು (ಮಂಗಳವಾರ) ಕೊರಗ ಒಕ್ಕೂಟ ಹಾಗೂ ಇತರೆ ಸಹಭಾಗಿ ಸಂಘಟನೆಗಳೊಂದಿಗೆ “ಆರೋಗ್ಯ ಹಕ್ಕಿನ ಜಾಥಾ” ಮಣಿಪಾಲ ಟೈಗರ್ ಸರ್ಕಲ್‌ನಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ನಡೆಯಲಿದೆ ಎಂದು ತಿಳಿಸಿದರು.

ಈ ಜಾಥಾದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಡವರು, ಕೂಲಿ ಕಾರ್ಮಿಕರು, ಬುಡಕಟ್ಟು ಸಮುದಾಯದವರು ಹಾಗೂ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಭಾಗವಹಿಸಬೇಕು ಎಂದು ಸುಂದರ ಮಾಸ್ತರ್ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದದ ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ ಅವರು ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.2ರಂದು ಟಿ. ನರಸೀಪುರದಲ್ಲಿ ಕೋಮು ಸೌಹಾರ್ದತೆಗಾಗಿ ಬೃಹತ್ ಸಮಾವೇಶ

ಟಿ. ನರಸೀಪುರ ಪಟ್ಟಣದಲ್ಲಿ ಇತ್ತೀಚೆಗೆ ಗಣೇಶ ವಿಸರ್ಜನಾ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಉಂಟಾಗಿರುವ...

ವಿಜಯಪುರ | ಸ್ಮಶಾನಕ್ಕೆ ಮೂಲಸೌಕರ್ಯ ಕಲ್ಪಿಸಲು ಆಗ್ರಹ

ವಿಜಯಪುರ ನಗರದ ಬೊಂಬಳ ಆಗಸಿ ಪ್ರದೇಶದಲ್ಲಿರುವ ಚಲವಾದಿ ಸಮಾಜದ ಸ್ಮಶಾನಕ್ಕೆ ಅಗತ್ಯ...

ಕಾರವಾರ | ಫ್ಲೈ ಓವರ್ ಕೆಳಗಿನ ಸರ್ಕಾರಿ ಜಾಗದಲ್ಲಿ ಅನಧಿಕೃತ ನರ್ಸರಿ

ಉತ್ತರ ಕನ್ನಡ ಜಿಲ್ಲೆ ಕಾರವಾರ ನಗರದ ಹೆದ್ದಾರಿ ಫ್ಲೈ ಓವರ್ ಕೆಳಭಾಗದ...

ಕೋಲಾರ | ಜಿಲ್ಲೆಗೆ ₹600 ಕೋಟಿ‌ ಬರ ಪರಿಹಾರ ನೀಡಲು ಜೆಡಿಎಸ್ ಆಗ್ರಹ

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದರೂ ರೈತರಿಗೆ ಸಮರ್ಪಕ ಬರ ಪರಿಹಾರ...