ಉಡುಪಿ | ಸುನ್ನೀ ಕೋ-ಓರ್ಡಿನೇಶನ್ ವತಿಯಿಂದ ಜಿಲ್ಲಾಧಿಕಾರಿ ಭೇಟಿ

Date:

ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಅಧಿಕಾರ ಸ್ವೀಕರಿಸಿದ ಶ್ರೀಮತಿ ಸ್ವರೂಪ ಟಿ ಕೆ ಅವರನ್ನು ಉಡುಪಿ ಜಿಲ್ಲೆಯ ಪ್ರಮುಖ ಹತ್ತು ಸಂಘಟನೆಗಳ ಒಕ್ಕೂಟವಾದ ಸುನ್ನಿ ಕೋ ಓಡಿನೇಷನ್ ಉಡುಪಿ ಜಿಲ್ಲಾ ಸಮಿತಿಯ ನಿಯೋಗ ಜಿಲ್ಲಾಧಿಕಾರಿಯನ್ನು ಭೇಟಿಯಾಗಿ ಹೂವು ಗುಚ್ಛ ನೀಡುವ ಮೂಲಕ ಶುಭ ಹಾರೈಸಿದರು.

- Advertisement -

ಚುನಾವಣೆಯ ಮೊದಲು ಕಾಂಗ್ರೆಸ್ ಸರಕಾರ ಮುಸ್ಲಿಮರಿಗೆ ನೀಡಿದ ಆಶ್ವಾಸನೆಗಳನ್ನು ಪೂರ್ತಿಗೊಳಿಸುವ ಬಗ್ಗೆ ಜಿಲ್ಲಾಧಿಕಾರಿಯ ಮೂಲಕ ಸರಕಾರಕ್ಕೆ ಜ್ಙಾಪಕ ಪತ್ರ ನೀಡಲಾಯಿತು. ಮುಖ್ಯವಾಗಿ 2ಬಿ ಮೀಸಲಾತಿ ಮರು ಸ್ಥಾಪಿಸಬೇಕು, ಶಿಕ್ಷಣ ಕೇಂದ್ರಗಳಲ್ಲಿ ಹಿಜಾಬ್ ನಿಷೇಧವನ್ನು ತೆರವುಗೊಳಿಸಬೇಕು, ಉಡುಪಿ ಜಿಲ್ಲೆಯಲ್ಲಿ ಬೇರು ಬಿಡುತ್ತಿರುವ ಕೋಮುವಾದವನ್ನು, ಕೋಮು ಸಂಘರ್ಷಗಳನ್ನು ಹಾಗೂ ಕೋಮುವಾದಿ ಹೇಳಿಕೆಗಳಿಗೆ ಕಡಿವಾಣ ಹಾಕಬೇಕು ಹಾಗೂ ಕೋಮು ಸಂಘರ್ಷಕ್ಕೆ ಎಡೆ ಮಾಡಿಕೊಡುವ ಹೇಳಿಕೆಗಳನ್ನು ನೀಡುವವರಿಗೆ ಜಾಮೀನು ರಹಿತ ಕಾಯ್ದೆಗಳ ಮೂಲಕ ಸೂಕ್ತ ಶಿಕ್ಷೆಯನ್ನು ನೀಡಬೇಕು, ಜೈಲಿನಲ್ಲಿರುವ ಅಮಾಯಕ ಯುವಕರನ್ನು ಬಿಡುಗಡೆಗೊಳಿಸಬೇಕು ಇಂತಹ ಹಲವು ಬೇಡಿಕೆಗಳ ಪಟ್ಟಿಯನ್ನು ಜಿಲ್ಲಾಧಿಕಾರಿಯ ಮೂಲಕ ಸರಕಾರಕ್ಕೆ ಜ್ಞಾಪಕ ಪತ್ರ ಸಲ್ಲಿಸಿ ಶೀಘ್ರ ಪರಿಹಾರಕ್ಕಾಗಿ ಜಿಲ್ಲಾಧಿಕಾರಿಯ ಮೂಲಕ ಸರಕಾರಕ್ಕೆ ಒತ್ತಾಯಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ನಿಯೋಗದಲ್ಲಿ ಜಿಲ್ಲಾ ಸುನ್ನೀ ಕೋ-ಓಡಿನೇಶನ್ ಸಮಿತಿಯ ಅಧ್ಯಕ್ಷರಾದ ಕೆ ಎ ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ, ಪ್ರಧಾನ ಕಾರ್ಯದರ್ಶಿ ಸುಭಾನ್ ಅಹ್ಮದ್ ಹೊನ್ನಾಳ, ಕೋಶಾಧಿಕಾರಿ ವಸೀಮ್ ಭಾಷಾ ಕುಂದಾಪುರ, ಕಾರ್ಯದರ್ಶಿಗಳಾದ ವೈ ಎಂ ಇಲಿಯಾಸ್ ಕಟಪಾಡಿ ಕಾನೂನು ಸಲಹೆಗಾರ ಅಡ್ವೋಕೇಟ್ ಹಬೀಬ್ ಸಂತೋಷ್ ನಗರ ನಿರ್ದೇಶಕರಾದ ಸೈಯ್ಯದ್ ಫರೀದ್ ಸಾಹೇಬ್ ಉಡುಪಿ, ಯು ಜೆ ಹನೀಫ್ ಅಂಬಾಗಿಲು ಹಾಗೂ ಸಂಘಟನೆಯ ಇತರ ನಾಯಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಬಂಜಾರ ಸಮುದಾಯ ಒಗ್ಗಟಾದರೆ ನಮ್ಮ ಹಕ್ಕು ಪಡೆಯಲು ಸಾಧ್ಯ: ವಿಜಯ ಜಾಧವ

"ಆಲ್ ಇಂಡಿಯಾ ಬಂಜಾರ ಸೇವಾ ಸಂಘ ಏಕೈಕ ಗಟ್ಟಿಯಾದ ಸಂಘಟನೆ ಇದಾಗಿದೆ....

ವಿಜಯಪುರ | ಮತದಾರರ ಹೆಸರಳಿಸಲು ನಕಲಿ ಮರಣ ಪ್ರಮಾಣಪತ್ರ ಬಳಕೆ; ತನಿಖೆಗೆ ಕಾಂಗ್ರೆಸ್ ಒತ್ತಾಯ

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದಲ್ಲಿ ಜೀವಂತ ಮತದಾರರನ್ನು ಮೃತಪಟ್ಟಿದ್ದಾರೆಂದು ತೋರಿಸಿ ಮತದಾರರ...

ಹಾಸನ | ಚನ್ನಕೇಶವ ದೇಗುಲದ ಸುತ್ತ ತಳ್ಳುಗಾಡಿ ತೆರವಿಗೆ ಸಾರ್ವಜನಿಕರ ಒತ್ತಾಯ 

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಬೇಲೂರಿನ ವಿಶ್ವವಿಖ್ಯಾತ ಚನ್ನಕೇಶವ ಸ್ವಾಮಿ ದೇಗುಲದ...

ಚಿಕ್ಕಮಗಳೂರು | ಏಷ್ಯನ್ ಗೇಮ್ಸ್: ಕಂಚಿನ ಪದಕ ಗೆದ್ದ ಸ್ನೇಹ ಎಸ್. ಎಸ್ ಗೆ ಟಿ.ಡಿ ರಾಜೇಗೌಡ ಅಭಿನಂದಿಸಿದ್ದಾರೆ 

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ 2026ರ ಏಷ್ಯನ್ ಗೇಮ್ಸ್‌ನ ಮಿಶ್ರ 4x100...