ಪ್ರಚೋದನಾಕಾರಿ ಭಾಷಣ | ಭಜರಂಗದಳ ಮುಖಂಡರ ವಿರುದ್ಧ ಎಫ್ಐಆರ್ ದಾಖಲಿಸಿದ ಕಾರ್ಕಳ ಪೊಲೀಸರು

Date:

  • ಭಜರಂಗದಳದ ಮುಖಂಡ ಪುನೀತ್ ಅತ್ತಾವರ, ಸಂಪತ್ ವಿರುದ್ಧ ಎಫ್ಐಆರ್
  • ಗೋವು ಕಡಿಯುವವರ ಕೈ ಕಡಿಯಲು ಕರೆ ನೀಡಿದ್ದ ವಿಡಿಯೋ ವೈರಲ್

ಪ್ರಚೋದನಾಕಾರಿ ಭಾಷಣದ ಮಾಡಿದ್ದ ಹಿನ್ನೆಲೆಯಲ್ಲಿ ಭಜರಂಗದಳದ ಮುಖಂಡರ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಭಜರಂಗದಳದ ಮಂಗಳೂರು ವಿಭಾಗದ ಸಹ ಸಂಯೋಜಕ ಪುನೀತ್‌ ಅತ್ತಾವರ ಹಾಗೂ ಕಾರ್ಕಳ ನಗರ ಬಜರಂಗದಳ ಸಂಚಾಲಕ ಸಂಪತ್‌ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆ. 13ರಂದು ಕಾರ್ಕಳ ನಗರ ಬಜರಂಗದಳ ವತಿಯಿಂದ ಕಾರ್ಕಳದಲ್ಲಿ ನಡೆದ ಪಂಜಿನ ಮೆರವಣಿಗೆ ಸಭಾ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಪುನೀತ್‌ ಅತ್ತಾವರ, ‘ಬ್ಯಾರಿ(ಕರಾವಳಿಯ ಮುಸಲ್ಮಾನರು) ಯಾವ ಕೈಯಿಂದ ಗೋಮಾತೆಯನ್ನು ಕಡಿಯುತ್ತಾನೋ, ಅವನ ದೇಹದಿಂದ ಅದೇ ಕೈಯನ್ನು ಬೇರ್ಪಡಿಸುವ ಸಂಕಲ್ಪ ತೊಡಬೇಕು’ ಎಂದು ಪ್ರಚೋದನಕಾರಿ ಹೇಳಿದ ನೀಡಿದ್ದರು. ಈ ಹೇಳಿಕೆಯ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪುನೀತ್ ಅತ್ತಾವರ ಅವರ ಭಾಷಣದ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮ ಮತ್ತು ವಾಟ್ಸ್​ಆ್ಯಪ್‌ನಲ್ಲಿ ಹರಿದಾಡಿದ್ದು ಚರ್ಚೆಗೆ ಗ್ರಾಸವಾಗಿತ್ತು. ತಕ್ಷಣ, ಪೊಲೀಸರು ಕ್ರಮ ಕೈಗೊಂಡು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ಹಾಳಾಗಿದೆ ಆರೋಗ್ಯ ಉಪಕೇಂದ್ರ; ಗ್ರಾಮಸ್ಥರಿಗೆ ಆರೋಗ್ಯ ಸೇವೆಯೂ ದೂರ

ಚಿಕ್ಕಂದವಾಡಿಯಲ್ಲಿ ಒಂದು ಪ್ರಾಥಮಿಕ ಆರೋಗ್ಯ ಉಪ ಕೇಂದ್ರವಿದೆ. ಆದರೆ, ಅದು ನಿಜಕ್ಕೂ...

ಗದಗ | ಬಡವರ, ಸಣ್ಣ ರೈತರ ಪ್ರಕರಣಗಳ ಪರಿಹಾರಕ್ಕಾಗಿ ಹೊಸ ಕಾನೂನು ಜಾರಿ: ಸಚಿವ ಎಚ್‌.ಕೆ ಪಾಟೀಲ್

ಬಡವರ, ಸಣ್ಣ ರೈತರ ಪ್ರಕರಣಗಳ ಪರಿಹಾರಕ್ಕಾಗಿ ಮಾರ್ಚ್ 4ರಂದು ರಾಜ್ಯಾದ್ಯಂತ ನೂತನ...

ವಿಜಯಪುರ | ಭಾರತೀಯರು ಸಹಬಾಳ್ವೆಯಿಂದ ಜೀವನ ಸಾಗಿಸಬೇಕು: ಡಾ. ಅಸಂಗ ವಾಂಖೇಡೆ

ಭಾರತೀಯರಾದ ಎಲ್ಲರೂ ಸಮಭಾವ ಸಹಬಾಳ್ವೆಯಿಂದ ಜೀವನವನ್ನು ಸಾಗಿಸಬೇಕು ಎಂದು ಅಮೇರಿಕದ ಆಕ್ಸ್‌ಫರ್ಡ್...

ಗದಗ | ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ

ಪ್ರತೀ ತಿಂಗಳು ಪಂಚ ಗ್ಯಾರಂಟಿಗಳಾದ ಅನ್ನಭಾಗ್ಯ ಯೋಜನೆಯಡಿ 12ಕೋಟಿ, ಗೃಹಲಕ್ಷ್ಮಿ ಯೋಜನೆಗೆ...