ಕಾರವಾರಕ್ಕೆ ಶೀಘ್ರವೇ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು: ಬಜೆಟ್‌ನಲ್ಲಿ ಘೋಷಣೆಯ ಭರವಸೆ ನೀಡಿದ ಸಿಎಂ

Date:

ಉತ್ತರ ಕನ್ನಡ ಜಿಲ್ಲೆಯ ಜನರ ದಶಕಗಳ ಕನಸಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಮಂಜೂರು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಭಾನುವಾರ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಕ್ರಿಮ್ಸ್) ಆವರಣದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಅವರು ಈ ವಿಷಯವನ್ನು ಪ್ರಕಟಿಸಿದರು.

- Advertisement -

ಮುಖ್ಯಮಂತ್ರಿಗಳು ಒಟ್ಟು ಸುಮಾರು 200 ಕೋಟಿ ರೂಪಾಯಿಗೂ ಅಧಿಕ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಪ್ರಮುಖವಾಗಿ, 198.27 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ 450 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡವನ್ನು ಉದ್ಘಾಟಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಇದರೊಂದಿಗೆ, ಯಲ್ಲಾಪುರ ತಾಲೂಕಿನ ಖಾನಾಪುರ–ತಾಳಗುಪ್ಪಾ ರಾಜ್ಯ ಹೆದ್ದಾರಿ-93ರಲ್ಲಿ 720.81 ಲಕ್ಷ ರೂ. ವೆಚ್ಚದ ಸೇತುವೆ,ಯಲ್ಲಾಪುರದಲ್ಲಿ 202.89 ಲಕ್ಷ ರೂ. ವೆಚ್ಚದ ನಿರೀಕ್ಷಣಾ ಮಂದಿರ, ಮುಂಡಗೋಡಿನಲ್ಲಿ 248.18 ಲಕ್ಷ ರೂ. ವೆಚ್ಚದ ಹೊಸ ಪ್ರವಾಸಿ ಮಂದಿರ ಇವುಗಳನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸಲಾಯಿತು.

ಕಾರವಾರ ಶಾಸಕ ಸತೀಶ್ ಸೈಲ್ ಅವರ ನಿರಂತರ ಒತ್ತಾಯ ಮತ್ತು ಸಾರ್ವಜನಿಕರ ಬೇಡಿಕೆಗೆ ಸ್ಪಂದಿಸಿರುವ ಮುಖ್ಯಮಂತ್ರಿ, ಈ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭವಾದ ಬಳಿಕ ಬಡವರು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಅಥವಾ ಮಂಗಳೂರಿಗೆ ತೆರಳುವ ಅವಶ್ಯಕತೆ ಕಡಿಮೆಯಾಗಲಿದೆ ಎಂದು ಹೇಳಿದರು.

ಉದ್ಘಾಟನೆಯಾದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕವೂ ಆರಂಭವಾಗುತ್ತಿರುವುದು ಜಿಲ್ಲೆಯ ಜನತೆಗೆ ದೊಡ್ಡ ಅನುಕೂಲವಾಗಲಿದೆ ಎಂದು ತಿಳಿಸಿದರು ಹಾಗೂ ಉಳಗಾ–ಕೆರವಡಿ ಸೇತುವೆ ಕಾಮಗಾರಿಗೆ ತಕ್ಷಣವೇ ಅನುದಾನ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದರು.

ವಿರೋಧ ಪಕ್ಷಗಳ ಟೀಕೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಗ್ಯಾರಂಟಿ ಯೋಜನೆಗಳ ನಡುವೆಯೂ ಅಭಿವೃದ್ಧಿ ಕಾರ್ಯಗಳು ವೇಗವಾಗಿ ನಡೆಯುತ್ತಿವೆ ಎಂಬುದಕ್ಕೆ ಈ ಕಾರ್ಯಕ್ರಮಗಳೇ ಸಾಕ್ಷಿ ಎಂದರು. ಉತ್ತರ ಕನ್ನಡ ಜಿಲ್ಲೆಯೊಂದಕ್ಕೇ ಗ್ಯಾರಂಟಿ ಯೋಜನೆಗಳ ಮೂಲಕ ಇದುವರೆಗೆ 2,954 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಅವರು ತಿಳಿಸಿದರು.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿ, ಪ್ರವಾಸೋದ್ಯಮ ಅಭಿವೃದ್ಧಿಗೆ ಹೊಸ ನೀತಿ ರೂಪಿಸಿ ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು. ವೈದ್ಯಕೀಯ ಸಚಿವ ಡಾ. ಶರಣ ಪ್ರಕಾಶ ಪಾಟೀಲ್, ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಸರ್ಕಾರಿ ಮೆಡಿಕಲ್ ಕಾಲೇಜು ಹಾಗೂ ಟ್ರೋಮಾ ಕೇರ್ ಸೆಂಟರ್ ಸ್ಥಾಪಿಸುವ ಉದ್ದೇಶವನ್ನು ಪುನರುಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಲೋಕಾಯುಕ್ತ ತನಿಖೆಯಲ್ಲಿ ಹಸ್ತಕ್ಷೇಪ ಮಾಡಲ್ಲ; ಶಾಸಕರ ಬಹಿರಂಗ ಹೇಳಿಕೆಗೆ ಡಿ.ಕೆ. ಶಿವಕುಮಾರ್ ಗರಂ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಸತೀಶ್ ಸೈಲ್ ಮಾತನಾಡಿ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆಗದಿದ್ದರೆ ರಾಜೀನಾಮೆ ನೀಡುವುದಾಗಿ ಹೇಳಿದ್ದೆ. ಇದೀಗ ಮುಖ್ಯಮಂತ್ರಿಗಳು ಅದನ್ನು ಈಡೇರಿಸುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ಇದೇ ಸಂದರ್ಭದಲ್ಲಿ ಶೇಜೇಶ್ವರ ದೇವಸ್ಥಾನದ ಅಭಿವೃದ್ಧಿ ಹಾಗೂ ಕೈಗಾರಿಕೆಗಳ ಸ್ಥಾಪನೆಗೆ ಆದ್ಯತೆ ನೀಡುವಂತೆ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಹಿರಿಯ ಶಾಸಕ ಆರ್.ವಿ. ದೇಶಪಾಂಡೆ, ಶಿವರಾಮ ಹೆಬ್ಬಾರ್, ಭೀಮಣ್ಣ ನಾಯ್ಕ, ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ಸೇರಿದಂತೆ ಸರ್ಕಾರದ ಉನ್ನತ ಅಧಿಕಾರಿಗಳಾದ ಮೊಹಮ್ಮದ್ ಮೊಹಸಿನ್, ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ, ಎಸ್ಪಿ ದೀಪನ್ ಎಂ.ಎನ್ ಹಾಗೂ ಕ್ರಿಮ್ಸ್ ಡೀನ್ ಡಾ. ಪೂರ್ಣಿಮಾ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...