SIR ವಿರೋಧಿ ಜಾಥಾಕ್ಕೆ ಮಂಡ್ಯದಲ್ಲಿ ಬೆಂಬಲ: ಜೂನ್ 20ರ ಪ್ರತಿರೋಧ ಸಮಾವೇಶಕ್ಕೆ ಕರೆ

Date:

ಎದ್ದೇಳು ಕರ್ನಾಟಕ ಹಾಗೂ SIR ವಿರೋಧಿ ಕರ್ನಾಟಕ ಸಂಘಟನೆಗಳ ವತಿಯಿಂದ ಮಂಡ್ಯದಲ್ಲಿ ಇಂದು ಪತ್ರಿಕಾ ಹೇಳಿಕೆ ನೀಡಲಾಗಿದ್ದು, ರಾಜ್ಯಾದ್ಯಂತ ನಡೆಯಲಿರುವ SIR ವಿರೋಧಿ ಜಾಗೃತಿ ಜಾಥಾ ಹಾಗೂ ಪ್ರತಿರೋಧ ಸಮಾವೇಶದ ಕುರಿತು ಮಾಹಿತಿ ಹಂಚಿಕೊಳ್ಳಲಾಯಿತು.

- Advertisement -

ರಾಜ್ಯಾದ್ಯಂತ ಐದು ತಂಡಗಳಾಗಿ ವಿಭಜನೆಗೊಂಡು ಎಲ್ಲಾ ಜಿಲ್ಲೆಗಳಲ್ಲಿ ಜಾಥಾ ನಡೆಸುವ ಮೂಲಕ ಜನಸಾಮಾನ್ಯರಲ್ಲಿ SIR ಕುರಿತು ಜಾಗೃತಿ ಮೂಡಿಸುವುದು ಹಾಗೂ ಮತದಾನದ ಹಕ್ಕಿನ ರಕ್ಷಣೆಗೆ ಜನಾಭಿಪ್ರಾಯ ರೂಪಿಸುವುದು ಈ ಜಾಥಾದ ಪ್ರಮುಖ ಉದ್ದೇಶವಾಗಿದೆ ಎಂದು ಸಂಘಟನೆಯ ಮುಖಂಡರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ರಾಜ್ಯದ ಪ್ರತಿಯೊಬ್ಬ ನಾಗರಿಕರ ಮತದಾನದ ಹಕ್ಕು ಯಾವುದೇ ಕಾರಣಕ್ಕೂ ಕಸಿದುಕೊಳ್ಳಬಾರದು ಎಂಬ ಸಂದೇಶವನ್ನು ಜನರಿಗೆ ತಲುಪಿಸುವ ಹಾಗೂ ರಾಜ್ಯ ಚುನಾವಣಾ ಆಯೋಗ ಮತ್ತು ಸರ್ಕಾರಕ್ಕೆ ಎಚ್ಚರಿಕೆ ನೀಡುವ ನಿಟ್ಟಿನಲ್ಲಿ ಈ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಜೂನ್ 18ರಂದು ಜಾಥಾ ಮಂಡ್ಯ ಜಿಲ್ಲೆಗೆ ಆಗಮಿಸಲಿದ್ದು, ಮಳವಳ್ಳಿ, ಮದ್ದೂರು ಹಾಗೂ ಮಂಡ್ಯ ನಗರಗಳಲ್ಲಿ ಬಹಿರಂಗ ಸಭೆಗಳು ನಡೆಯಲಿವೆ. ಈ ಸಭೆಗಳಲ್ಲಿ ಮತದಾನದ ಹಕ್ಕಿನ ಮಹತ್ವ, SIR ಪ್ರಕ್ರಿಯೆಯ ಪರಿಣಾಮಗಳು ಹಾಗೂ ಜನಜಾಗೃತಿಯ ಅಗತ್ಯತೆಯ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಲಾಯಿತು.

ಈ ಸುದ್ದಿ ಓದಿದ್ದೀರಾ?ಕೊಡಗು | ಎಸ್‌ಐಆರ್ ವಿರೋಧಿ ಜಾಗೃತಿ ಅಭಿಯಾನ: ಮತದಾನ ಹಕ್ಕು ರಕ್ಷಣೆಗೆ ಆಗ್ರಹ

ಇದೇ ವೇಳೆ, ಜೂನ್ 20, 2026ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ SIR ವಿರೋಧಿಸಿ ನಡೆಯಲಿರುವ ಬೃಹತ್ ಪ್ರತಿರೋಧ ಸಮಾವೇಶದಲ್ಲಿ ಮಂಡ್ಯ ಜಿಲ್ಲೆಯಿಂದ ಸಾವಿರಾರು ಸಂಖ್ಯೆಯಲ್ಲಿ ಜನಸಾಮಾನ್ಯರು, ಸಾಹಿತಿಗಳು, ಚಿಂತಕರು, ಜಾತ್ಯಾತೀತ ಪಕ್ಷಗಳ ಮುಖಂಡರು ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸುವಂತೆ ಕರೆ ನೀಡಲಾಯಿತು.

ಈ ವಿಶೇಷ ಸುದ್ದಿ ಓದಿದ್ದೀರಾ?ಎಸ್‌ಐಆರ್ ಪ್ರಕ್ರಿಯೆ ಪ್ರಜಾಪ್ರಭುತ್ವಕ್ಕೆ ಸವಾಲು: ಲಕ್ಷಾಂತರ ಮತದಾರರ ಹಕ್ಕು ಕಸಿಯುವ ಹುನ್ನಾರ

ಪತ್ರಿಕಾಗೋಷ್ಠಿಯಲ್ಲಿ ಅಖಿಲ ಭಾರತ ವಕೀಲರ ಸಂಘದ ಜಿಲ್ಲಾ ಅಧ್ಯಕ್ಷ ಬಿ.ಟಿ. ವಿಶ್ವನಾಥ್, ಸಾಹಿತಿ ಹಾಗೂ ಚಿಂತಕ ಜಿ.ಟಿ. ವೀರಪ್ಪ, SDPI ಜಿಲ್ಲಾ ಅಧ್ಯಕ್ಷ ಮೊಕ್ತರ್ ಅಹಮದ್, ಎದ್ದೇಳು ಕರ್ನಾಟಕದ ಸಿದ್ದರಾಜು ಎಂ., ಜೀವಿಕಾ ಸಂಘಟನೆಯ ಮುತ್ತಯ್ಯ ಹಾಗೂ ಮಹಿಳಾ ಮುನ್ನಡೆಯ ಶಿಲ್ಪ ಬಿ.ಎಸ್. ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ ಜಿಲ್ಲೆಯ 4.77 ಲಕ್ಷ ಮತದಾರರು ಎಲ್ಲಿ ಹೋದರು? ಎಸ್‌ಐಆರ್ ವಿರುದ್ಧ ಸಿಪಿಐ ತೀವ್ರ ಆಕ್ರೋಶ

ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಬಳಿಕ ಲಕ್ಷಾಂತರ ಮತದಾರರ ಹೆಸರುಗಳು...

ಉಡುಪಿ | ಓವರ್‌ಪಾಸ್‌ ಉದ್ಘಾಟನೆಯಾದರೂ ಸರ್ವಿಸ್‌ ರಸ್ತೆಗೆ ಮುಕ್ತಿ ಸಿಕ್ಕಿಲ್ಲ; ಧೂಳಿನಿಂದ ವಾಹನ ಸವಾರರಿಗೆ ಸಂಕಷ್ಟ

ಉಡುಪಿ ನಗರದ ಕರಾವಳಿ ಜಂಕ್ಷನ್‌ನಿಂದ ಕಿನ್ನಿಮೂಲ್ಕಿವರೆಗಿನ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿರುವ ಸರ್ವಿಸ್‌...

ಯಲ್ಲಾಪುರ | ವನ್ಯಜೀವಿಗಳ ಅಂಗಾಂಗ ವಶ ಪ್ರಕರಣ: ಸಮಗ್ರ ತನಿಖೆಗೆ ಸೋಮೇಶ್ವರ ನಾಯ್ಕ ಆಗ್ರಹ

ಯಲ್ಲಾಪುರ ಅರಣ್ಯ ವಿಭಾಗದ ವ್ಯಾಪ್ತಿಯಲ್ಲಿ ವನ್ಯಜೀವಿಗಳ ಅಂಗಾಂಗಗಳನ್ನು ವಶಪಡಿಸಿಕೊಂಡ ಪ್ರಕರಣದಲ್ಲಿ ಹಲವು...