ನಂಜನಗೂಡು | ಭದ್ರಾವತಿ ಧರಣಿಗೆ ಬೆಂಬಲ; ಬೀದರ್ ಅತ್ಯಾಚಾರ-ಕೊಲೆ ಪ್ರಕರಣ ಖಂಡನೆ

Date:

ಮೈಸೂರು ಜಿಲ್ಲೆ ನಂಜನಗೂಡಿನ ಪತ್ರಿಕಾ ಭವನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ತಾಲೂಕು ಸಮಿತಿಯ ವತಿಯಿಂದ ಪತ್ರಿಕಾಗೋಷ್ಠಿ ನಡೆಯಿತು. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿಗೆ ಬೆಂಬಲ ಸೂಚಿಸಿ ಹಾಗೂ ಬೀದರ್ ಜಿಲ್ಲೆಯಲ್ಲಿ ನಡೆದ ಅಪ್ರಾಪ್ತ ಬಾಲಕಿ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ತೀವ್ರವಾಗಿ ಖಂಡಿಸಲಾಯಿತು.

- Advertisement -

ಈ ವೇಳೆ ಮಾತನಾಡಿದ ಸಮಿತಿಯ ಮುಖಂಡರು, ಸ್ವತಂತ್ರ ಭಾರತಕ್ಕೆ 75 ವರ್ಷಗಳಾದರೂ ದಲಿತ ಸಮುದಾಯಗಳ ಬದುಕು ಇನ್ನೂ ಶೋಚನೀಯ ಸ್ಥಿತಿಯಲ್ಲಿದೆ ಎಂದು ಆರೋಪಿಸಿದರು. ದಲಿತ ಬಡಾವಣೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಮುಂದುವರಿದಿರುವುದಲ್ಲದೆ, ಮೇಲ್ವರ್ಗದವರ ದೌರ್ಜನ್ಯದಿಂದ ಸೌಲಭ್ಯಗಳನ್ನು ಬಳಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ದಲಿತ ಹೆಣ್ಣುಮಕ್ಕಳ ಮೇಲಿನ ನಿರಂತರ ದೌರ್ಜನ್ಯ, ಅತ್ಯಾಚಾರ ಹಾಗೂ ಹತ್ಯೆಗಳು ಶೋಷಿತ ಸಮುದಾಯಗಳ ಮನಸ್ಸಿಗೆ ನೋವುಂಟು ಮಾಡಿವೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಅರೆಬೆಳಚಿ ಗ್ರಾಮದಲ್ಲಿರುವ ಪರಿಶಿಷ್ಟ ಜನಾಂಗದ ಕಾಲೋನಿಯ ನಿವಾಸಿಗಳು ಸಂಚರಿಸುವ ರಸ್ತೆಯನ್ನು ಸವರ್ಣಿಯರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ರಸ್ತೆ ಸಂಪರ್ಕವನ್ನು ಬಂದ್ ಮಾಡಿರುವುದಾಗಿ ದೂರಿದರು. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಶಿವಮೊಗ್ಗ ಜಿಲ್ಲಾ ಸಮಿತಿಯು ರಸ್ತೆ ತೆರವುಗೊಳಿಸುವವರೆಗೆ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದು, ಧರಣಿ ಐದನೇ ದಿನಕ್ಕೆ ಕಾಲಿಟ್ಟಿದೆ ಎಂದು ತಿಳಿಸಿದರು.

ಆದರೂ ಸಂಬಂಧಪಟ್ಟ ಅಧಿಕಾರಿಗಳು ಧರಣಿ ನಿರತರನ್ನು ಭೇಟಿ ಮಾಡಿ ಸಮಸ್ಯೆ ಪರಿಹರಿಸಲು ಮುಂದಾಗಿಲ್ಲ ಎಂದು ಆರೋಪಿಸಿದ ಅವರು, ಸರ್ಕಾರ, ಶಿವಮೊಗ್ಗ ಜಿಲ್ಲಾ ಆಡಳಿತ ಹಾಗೂ ಭದ್ರಾವತಿ ತಾಲೂಕು ಆಡಳಿತದ ದಲಿತ ವಿರೋಧಿ ನೀತಿಯನ್ನು ಖಂಡಿಸಿದರು. ಜೊತೆಗೆ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಆಗ್ರಹಿಸಿದರು.

ಇದೇ ವೇಳೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬೆಳಕುಣಿ ಗ್ರಾಮದ ದಲಿತ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿನಿ ಹಾಗೂ ರಾಜ್ಯಮಟ್ಟದ ಕಬ್ಬಡಿ ಆಟಗಾರ್ತಿ ಶೋಭಾ ಎಂಬ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ತೀವ್ರವಾಗಿ ಖಂಡಿಸಿದರು. ಬಂಧಿತ ಆರೋಪಿಗೆ ಕಾನೂನಿನ ಪ್ರಕಾರ ಕಠಿಣ ಶಿಕ್ಷೆ ವಿಧಿಸಿ, ಮರಣದಂಡನೆಗೆ ಒಳಪಡಿಸುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ?ಮೈಸೂರು | ಶಿಷ್ಯವೇತನ ಮಂಜೂರಿಗೆ ಆಗ್ರಹಿಸಿ ಶಿಷ್ಯವೇತನ ರಹಿತ ಸಂಶೋಧಕರ ಪ್ರತಿಭಟನೆ

ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ತಾಲೂಕು ಸಂಚಾಲಕ ಗಟ್ಟವಾಡಿ ಮಹೇಶ್, ಪಟ್ಟಣ ಸಂಚಾಲಕ ಲೋಕೇಶ್ ಶ್ರೀರಾಂಪುರ, ತಾಲೂಕು ಸಂಘಟನಾ ಸಂಚಾಲಕ ನಾರಾಯಣ ಗೋನಹಳ್ಳಿ, ಹೂವಯ್ಯ ಮಲ್ಲಹಳ್ಳಿ, ಆನಂದ್ ಬ್ಯಾಳರು ಹಾಗೂ ವಿದ್ಯಾರ್ಥಿ ಒಕ್ಕೂಟ ತಾಲೂಕು ಸಂಚಾಲಕ ಆದರ್ಶ್ ಮಲ್ಲಹಳ್ಳಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ನಗರ ಸಂಚಾರಕ್ಕೆ ಪ್ರತ್ಯೇಕ ಠಾಣೆ, ಹತ್ತಿಗೂಡೂರಿಗೆ ಗ್ರಾಮೀಣ ಠಾಣೆ ಆರಂಭಿಸುವಂತೆ ಆಗ್ರಹಿಸಿ ಮನವಿ

ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ ಹಾಗೂ ಪೊಲೀಸ್‌ ಇಲಾಖೆಯ ಮೇಲಿನ ಕಾರ್ಯಭಾರ...

ಯಾದಗಿರಿ | ನಿವೇಶನಕ್ಕಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ನಿರಂತರ ಧರಣಿ

ನಗರದಲ್ಲಿರುವ ನಿವೇಶನ ರಹಿತರಿಗೆ ನಿವೇಶನ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ಸ್ಲಂ ಜನಾಂದೋಲನ...

ಚಿಕ್ಕಮಗಳೂರು | ಸಾಮಾಜಿಕ ಜಾಲತಾಣ; ಶಾಸಕ ಟಿ.ಡಿ ರಾಜೇಗೌಡರಿಗೆ ಅವಹೇಳನ, ಬೆದರಿಕೆ; ಪ್ರಕರಣ ದಾಖಲು 

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಕ್ಷೇತ್ರದ ಶಾಸಕ ಸನ್ಮಾನ್ಯ ಶ್ರೀ ಟಿ. ಡಿ...

ಕಲಬುರಗಿ | ನಕಲಿ ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ; ಕಾರಾಗೃಹ ಡಿಐಜಿ ಬಂಧನ

ಬೆಂಗಳೂರು ಸುಪ್ರೀಂ ಕೋರ್ಟ್‌ ಆದೇಶದ ಮಾದರಿಯನ್ನು ಅನುಕರಿಸಿ ನಕಲಿ ಆದೇಶವೊಂದನ್ನು ಸಿದ್ಧಪಡಿಸಿ...