ಕೊಪ್ಪಳ | ಸಿದ್ದರಾಮಯ್ಯ ಸಿಎಂ ಆಗುವುದಾದರೆ ಕಾಂಗ್ರೆಸ್‌ಗೆ ಬೆಂಬಲ : ಜನಾರ್ದನ ರೆಡ್ಡಿ

Date:

  • 13 ಕ್ಷೇತ್ರಗಳಲ್ಲಿ ಕೆಆರ್‌ಪಿಪಿ ಸ್ಪಷ್ಟವಾಗಿ ಗೆಲುವು ಸಾಧಿಸಲಿದೆ
  • ಕೆಆರ್‌ಪಿಪಿ ಯಾವುದಾದರೂ ಒಂದು ಪಕ್ಷಕ್ಕೆ ಬೆಂಬಲ ನೀಡಲಿದೆ

ರಾಜ್ಯದಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗುವ ಸಂದರ್ಭ ಏನಾದರೂ ಇದ್ದರೆ ಕಲ್ಯಾಣ ರಾಜ್ಯ ಪ್ರಗತಿ ಪಕ್ಷವು ಕಾಂಗ್ರೆಸ್‌ಗೆ ಬೆಂಬಲ ನೀಡಲಿದೆ ಎಂದು ಕೆಆರ್‌ಪಿಪಿ ಅಭ್ಯರ್ಥಿ ಗಾಲಿ ಜನಾರ್ದನ ರೆಡ್ಡಿ ಹೇಳಿದರು.

- Advertisement -

ಕೊಪ್ಪಳ ಜಿಲ್ಲೆ ಗಂಗಾವತಿ ನಗರದ ಕನಕಗಿರಿ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಬಳಿಯ ಮತಗಟ್ಟೆ ಸಂಖ್ಯೆ 155ರಲ್ಲಿ ಮತದಾನ ಮಾಡಿದ ಜನಾರ್ದನ ರೆಡ್ಡಿ, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ಕೆಆರ್‌ಪಿಪಿ ಯಾವುದಾದರೂ ಒಂದು ಪಕ್ಷಕ್ಕೆ ಬೆಂಬಲ ನೀಡಬೇಕಾದ ಸಂದರ್ಭ ಇದೆ. ಕಾಂಗ್ರೆಸ್ ಬೆಂಬಲಿಸಲು ಕೇಳಿದರೆ, ಸಿದ್ಧರಾಮಯ್ಯ ಮುಖ್ಯಮಂತ್ರಿ ಆಗುವ ಸಂದರ್ಭ ಬಂದರೆ ಖಂಡಿತವಾಗಿ ಬೆಂಬಲ ಸೂಚಿಸಲಾಗುವುದು” ಎಂದು ತಿಳಿಸಿದ್ದಾರೆ.

“ನಗರದ ಆರಾಧ್ಯದೈವ ಚೆನ್ನ ಬಸವ ತಾತನ ಹಾಗೂ ಗ್ರಾಮದೇವತೆ ದುರ್ಗಾದೇವಿ ಆಶೀರ್ವಾದ ಪಡೆದು ಬಂದಿದ್ದು, ವಿಧಾನಸಭಾ ಕ್ಷೇತ್ರದ ಮತದಾರರು ಕೆಆರ್‌ಪಿಪಿಗೆ ಬೆಂಬಲಿಸಿ ಮತದಾನ ನೀಡುತ್ತಾರೆ ಎಂಬ ವಿಶ್ವಾಸ ನನ್ನಲ್ಲಿದೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚುನಾವಣೆ ಕರ್ತವ್ಯ | ಆಶಾ ಕಾರ್ಯಕರ್ತೆಯರಿಗೆ ಸಿಗದ ಗೌರವಧನ

“ಬಳ್ಳಾರಿ ನಗರದಲ್ಲಿ ಕೆಆರ್‌ಪಿಪಿ ಅಭ್ಯರ್ಥಿ ಅರುಣಾ ಲಕ್ಷ್ಮಿ ಸಹ ಗೆಲುವು ಸಾಧಿಸಲಿದ್ದಾರೆ. ಗಂಗಾವತಿ ವಿಧಾನಸಭಾ ಕ್ಷೇತ್ರದ ಫಲಿತಾಂಶದಲ್ಲಿ ಬಾರಿ ಅಂತರದಿಂದ ಗೆಲುವು ಸಾಧಿಸಲಿದ್ದೇನೆ. 13 ಕ್ಷೇತ್ರಗಳಲ್ಲಿ ಸ್ಪಷ್ಟವಾಗಿ ಗೆಲುವು ಸಾಧಿಸಲಿದ್ದು, ಉಳಿದ ಕ್ಷೇತ್ರದಲ್ಲಿ ಪೈಪೋಟಿ ಇದೆ” ಎಂದು ಹೇಳಿದ್ದಾರೆ.

ಈ ವೇಳೆ ಕೆಆರ್‌ಪಿಪಿ ಕೊಪ್ಪಳ ಜಿಲ್ಲಾ ಅಧ್ಯಕ್ಷ ಮನೋಹರ ಗೌಡ ಹೇರೂರು, ರಾಜೇಶ ರೆಡ್ಡಿ ಹಾಗೂ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ...