ಬೀದರ್‌ ಬಂದ್‌ಗೆ ವಿವಿಧ ಸಂಘಟನೆಗಳ ಬೆಂಬಲ

Date:

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೀಳಾಗಿ ಮಾತನಾಡಿರುವುದನ್ನು ಖಂಡಿಸಿ ಸ್ವಾಭಿಮಾನಿ ಡಾ.ಬಿ.ಆರ್.ಅಂಬೇಡ್ಕರ್ ವಾದಿಗಳು ಹೋರಾಟ ಸಮಿತಿಯಿಂದ ಜ.9ರಂದು ಬೀದರ್ ಬಂದ್ ಗೆ ಕರೆ ನೀಡಲಾಗಿದ್ದು‌, ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ.

- Advertisement -

ʼದಲಿತ್‌ ಯೂನಿಟಿ ಮ್ಯೂವಮೆಂಟ್‌ʼ ಬೆಂಬಲ :

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ. ಅಂಬೇಡ್ಕರ್‌ ಅವರಿಗೆ ಕೀಳಾಗಿ ಮಾತನಾಡಿದ್ದು ಖಂಡಿಸಿ ಜನವರಿ 9ರಂದು ಬೀದರ್‌ ಬಂದ್‌ಗೆ ಕರೆ ನೀಡಲಾಗಿದ್ದು, ಈ ಬೃಹತ್‌ ಹೋರಾಟಕ್ಕೆ ದಲಿತ ಯೂನಿಟಿ ಮ್ಯೂವಮೆಂಟ್‌ ಸಂಘಟನೆ ಸಂಪೂರ್ಣವಾಗಿ ಬೆಂಬಲಿಸಿ ಎಲ್ಲಾ ಕಾರ್ಯಕರ್ತರು ಬೀದರ್‌ ಬಂದ್‌ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತೇವೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷ ಪ್ರಕಾಶ ರಾವಣ, ಜಿಲ್ಲಾಧ್ಯಕ್ಷ ವಿನೀತ್ ಗಿರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರನ್ನು ಅಪಮಾನ ಮಾಡಿರುವ ಅಮಿತ್‌ ಶಾ ಅವರನ್ನು ಕೂಡಲೇ ಸಂಪುಟದಿಂದ ವಜಾಗೊಳಿಸಿ, ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಹೋರಾಟಕ್ಕೆ ಬೆಂಬಲ ಸೂಚಿಸಿದ್ದೇವೆ ಎಂದು ಹೇಳಿದರು.

ಬೀದರ್ ಬಂದ್‌ಗೆ ಬೆಂಬಲ ಸೂಚಿಸಿದ ಬಿಎಸ್ಪಿ :

ʼಅಂಬೇಡ್ಕರ್ ಅಂಬೇಡ್ಕರ್ ಅನ್ನುವುದು ಒಂದು ಫ್ಯಾಷನ್ ಆಗಿಬಿಟ್ಟಿದೆ. ಅಂಬೇಡ್ಕರ ಹೆಸರನ್ನು ಪದೇ ಪದೇ ಉಚ್ಚರಿಸುವ ಬದಲು ದೇವರನ್ನು ಸ್ಮರಿಸಿದರೆ ಏಳೇಳು ಜನ್ಮಗಳಲ್ಲಿ ಸ್ವರ್ಗ ದೊರೆಯುತ್ತಿತ್ತು ಎಂದು ರಾಜ್ಯಸಭೆಯಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅಗೌರವ ತೋರಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಹೇಳಿಕೆ ಖಂಡಿಸಿ ಕರೆ ಬೀದರ್‌ ಬಂದ್‌ಗೆ ಬಹುಜನ ಸಮಾಜ ಪಾರ್ಟಿ (ಬಿಎಸ್ಪಿ) ಸಂಪೂರ್ಣ ಬೆಂಬಲ ಸೂಚಿಸಿದ್ದು, ಹೋರಾಟಕ್ಕೆ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದು ಬಿಎಸ್ಪಿ ಜಿಲ್ಲಾಧ್ಯಕ್ಷ ಕಪೀಲ್‌ ಗೋಡಬೋಲೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದೇಶದಾದ್ಯಂತ ಗ್ರಹ ಸಚಿವ ಅಮಿತ್ ಶಾ ವಿರುದ್ಧ ಬಹುಜನ ಸಮಾಜ ಪಾರ್ಟಿ ಸೇರಿದಂತೆ ಅನೇಕ ದಲಿತಪರ, ಪ್ರಗತಿಪರ ಸಂಘಟನೆಗಳಿಂದ ಹೋರಾಟಗಳು ನಡೆಯುತ್ತಿದ್ದರೂ ಇಲ್ಲಿಯವರೆಗೆ ಬೇಜವಾಬ್ದಾರಿ ಹೇಳಿಕೆ ನೀಡಿರುವ ಅಮಿತ್ ಶಾ ರಾಜೀನಾಮೆಗೆ ಮುಂದಾಗುತ್ತಿಲ್ಲ. ಹೀಗಾಗಿ ಬೀದರ್‌ ಬಂದ್‌ ಮೂಲಕ ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸಿ ಅಮಿತ್‌ ಶಾ ರಾಜೀನಾಮೆಗೆ ಒತ್ತಾಯಿಸಲು ಜಿಲ್ಲೆಯ ಸಮಾಜ ಪರ ಚಿಂತಕರು, ಹೋರಾಟಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಬಿಎಸ್ಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಕ್ತಿಕಾಂತ ಭಾವಿದೊಡ್ಡಿ, ಬೀದರ್ ಉತ್ತರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಮಹೇಶ್ ಭೋಲಾ ಅವರು ಮನವಿ ಮಾಡಿದ್ದಾರೆ.

ಅಂಬೇಡ್ಕರ್‌ ಸೇವಾ ಸಮಿತಿ ಬೆಂಬಲ :

ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರನ್ನು ಅಪಮಾನಿಸಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ರಾಜೀನಾಮೆಗೆ ಆಗ್ರಹಿಸಿ ಕರೆ ನೀಡಿದ ಬೀದರ್‌ ಬಂದ್‌ಗೆ ಅಂಬೇಡ್ಕರ್ ಸೇವಾ ಸಮಿತಿ ಜಿಲ್ಲಾ ಘಟಕ ಸಂಪೂರ್ಣ ಬೆಂಬಲ ಸೂಚಿಸಿದೆ.

ದೇಶದ ಎಲ್ಲ ಜಾತಿ, ಧರ್ಮದವರಿಗೆ ಸಂವಿಧಾನ ಮೂಲಕ ಸಾಮಾಜಿಕ ನ್ಯಾಯ ಕಲ್ಪಿಸಿದ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್‌ ಅವರನ್ನು ರಾಜ್ಯಸಭೆಯಲ್ಲಿ ಅವಮಾನಿಸಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಕೂಡಲೇ ಸಂಪುಟದಿಂದ ವಜಾಗೊಳಿಸಿ, ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿ ಬೀದರ್‌ ಬಂದ್‌ಗೆ ಬೆಂಬಲ ಸೂಚಿಸಿದ್ದೇವೆ ಎಂದು ಸಮಿತಿಯ ಜಿಲ್ಲಾಧ್ಯಕ್ಷ ಲೋಕೇಶ ಕಾಂಬಳೆ, ಜಿಲ್ಲಾ ಉಪಾಧ್ಯಕ್ಷ ಸಿದ್ಧಾರ್ಥ್ ನಾಟೀಕರ್ ಹಾಗೂ ನಿಲೇಶ್ ಮೇಲಕೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಚಿಂಚೋಳಿ ಬಂದ್‌ಗೆ ಉತ್ತಮ ಸ್ಪಂದನೆ : ಅಮಿತ್ ಶಾ ಅವರ ಅಣಕು ಶವಯಾತ್ರೆ

ಡಾ.ಬಿ.ಆರ್.‌ ಅಂಬೇಡ್ಕರ್‌ ಅವರನ್ನು ಅಪಮಾನ ಮಾಡಿದ ಕೇಂದ್ರ ಗೃಹ ಸಚಿವ ಸಚಿವ ಅಮಿತ್‌ ಶಾ ರಾಜೀನಾಮೆಗೆ ಆಗ್ರಹಿಸಿ ಡಿಸೆಂಬರ್‌ 24 ರಂದು ಬೀದರ್‌ ನಗರದಲ್ಲಿ ಸ್ವಾಭಿಮಾನಿ ಡಾ.ಬಿ.ಆರ್.‌ ಅಂಬೇಡ್ಕರ್‌ವಾದಿಳಗಳ ಹೋರಾಟ ಸಮಿತಿಯಿಂದ ಬೃಹತ್‌ ಪ್ರತಿಭಟನೆ ನಡೆಸಲಾಗಿತ್ತು. ಅಮಿತ್‌ ಶಾ ದೇಶದ ಜನರ ಕ್ಷಮೆಯಾಚಿಸಿ, ತಮ್ಮ ಸ್ಥಾನಕ್ಕೆ ರಾಜೀನಾಮೆಗೆ ನೀಡಬೇಕೆಂದು ಒಂದು ವಾರದ ಗಡುವು ನೀಡಲಾಗಿತ್ತು. ಆ ಅವಧಿ ಮುಗಿದಿದ್ದರೂ ಅಮಿತ್‌ ಶಾ ಕ್ಷಮೆಯಾಚಿಸಿಲ್ಲ, ರಾಜೀನಾಮೆ ನೀಡಲಿಲ್ಲ. ಹೀಗಾಗಿ ಜನವರಿ 9 ರಂದು ಬೀದರ್‌ ಬಂದ್‌ಗೆ ಕರೆ ನೀಡಲಾಗಿದೆ. ವಿವಿಧ ಸಂಘ-ಸಂಸ್ಥೆಗಳು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿವೆ ಎಂದು ಸ್ವಾಭಿಮಾನಿ ಡಾ.ಬಿ.ಆರ್.‌ ಅಂಬೇಡ್ಕರ್‌ವಾದಿಳಗಳ ಹೋರಾಟ ಸಮಿತಿ ಅಧ್ಯಕ್ಷ ಉಮೇಶಕುಮಾರ್‌ ಸ್ವಾರಳ್ಳಿಕರ್‌ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...